ಸೋಮವಾರ, ಜೂನ್ 16, 2025
HomeSportsPV Sindhu : ಭಾರತಕ್ಕೆ ಮತ್ತೊಂದು ಪದಕ ತಂದ ಪಿ.ವಿ.ಸಿಂಧೂ : ಪ್ರಧಾನಿ ಮೋದಿ ಅಭಿನಂದನೆ

PV Sindhu : ಭಾರತಕ್ಕೆ ಮತ್ತೊಂದು ಪದಕ ತಂದ ಪಿ.ವಿ.ಸಿಂಧೂ : ಪ್ರಧಾನಿ ಮೋದಿ ಅಭಿನಂದನೆ

- Advertisement -

ಟೋಕಿಯೋ : ಭಾರತದ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧೂ ಅವರು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ ತಂದು ಕೊಟ್ಟಿದ್ದಾರೆ. ಸೆಮಿ ಫೈನಲ್‌ ಪಂದ್ಯದಲ್ಲಿ ನಿರಾಸೆ ಅನುಭವಿಸಿದ್ದ ಸಿಂಧೂ, ಇಂದಿನ ಪಂದ್ಯದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಕಂಚಿನ ಸಿಂಧೂರವಿಟ್ಟಿದ್ದಾರೆ.

ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಪಿವಿ ಸಿಂಧು ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಸತತ ಎರಡು ಒಲಿಂಪಿಕ್ಸ್ ನಲ್ಲಿ ಭಾರತದ ಪರ ಪದಕ ಪಡೆದ ಮೊದಲ ಮಹಿಳಾ ಆಟಗಾರ್ತಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಚೀನಾದ ಬಿಂಗ್ ಜಿಯಾವೋ ವಿರುದ್ಧದ ಪಂದ್ಯದಲ್ಲಿ 21-13, 21-15 ನೇರ ಸೆಟ್‍ಗಳಿಂದ ಜಯಗಳಿಸಿದ್ದಾರೆ. ಪಿ.ವಿ.ಸಿಂಧು 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಸಿಂಧು ಫೈನಲ್ ನಲ್ಲಿ ಸೋತು ಬೆಳ್ಳಿ ಪದಕವನ್ನು ಜಯಿಸಿದ್ದರು.

ಟೋಕಿಯೋ ಒಲಿಂಪಿಕ್ಸ್‌ ಸೆಮಿಫೈನಲ್‌ ಪಂದ್ಯದಲ್ಲಿಅಗ್ರ ಶ್ರೇಯಾಂಕಿತ ಬ್ಯಾಡ್ಮಿಂಟನ್‌ ಆಟಗಾರ್ತಿ ತೈ ತ್ಸು ಯಿಂಗ್ ವಿರುದ್ದದ ಪಂದ್ಯದಲ್ಲಿ ಸಿಂಧೂ ನಿರಾಸೆ ಅನುಭವಿಸಿದ್ದರು. ಆದರೆ ಇಂದು ನಡೆದ ಪಂದ್ಯದಲ್ಲಿ ಎರಡು ಸೆಟ್‌ಗಳಲ್ಲಿ ಗೆಲ್ಲುವ ಮೂಲಕ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. ಸಿಂಧೂ ಗೆಲುವಿನ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular