Prasidh Krishna Wedding : ಸಪ್ತಪದಿ ತುಳಿದ ಕರ್ನಾಟಕದ ಸ್ಟಾರ್ ಕ್ರಿಕೆಟರ್, ಯಾರು ಈ ರಚನಾ ಕಷ್ಣ

ಬೆಂಗಳೂರು: Prasidh Krishna Wedding : ಕರ್ನಾಟಕದ ಸ್ಟಾರ್ ಕ್ರಿಕೆಟಿಗ, ಟೀಮ್ ಇಂಡಿಯಾ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡದ ಸ್ಟಾರ್ ಫಾಸ್ಟ್ ಬೌಲರ್ ಪ್ರಸಿದ್ಧ್ ಕೃಷ್ಣ (Prasidh Krishna Marriage), ತಮ್ಮ ದೀರ್ಘಕಾಲದ ಗೆಳತಿಯೊಂದಿಗೆ ಸಪ್ತಪದಿ ತುಳಿದಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ 27 ವರ್ಷದ ಪ್ರಸಿದ್ಧ್ ಕೃಷ್ಣ ತಮ್ಮ ಗೆಳತಿ ರಚನಾ (Rachana Krishna) ಅವರೊಂದಿಗೆ ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು. ಪ್ರಸಿದ್ಧ್ ಮದುವೆಯಲ್ಲಿ ಟೀಮ್ ಇಂಡಿಯಾ ಆಟಗಾರರಾದ ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್, ಕರ್ನಾಟಕದ ಕ್ರಿಕೆಟಿಗರಾದ ಕೆ.ಗೌತಮ್, ಶ್ರೇಯಸ್ ಗೋಪಾಲ್, ದೇವದತ್ತ್ ಪಡಿಕ್ಕಲ್ ಸಹಿತ ಹಲವರು ಆಟಗಾರರು ಪಾಲ್ಗೊಂಡಿದ್ದರು.

ಪ್ರಸಿದ್ಧ್ ಕೃಷ್ಣ ಮತ್ತು ರಚನಾ ಕೃಷ್ಣ ಅವರ ವಿವಾಹ ಅಪ್ಪಟ ದಕ್ಷಿಣ ಭಾರತ ಸಂಪ್ರದಾಯದಲ್ಲೇ ನಡೆಯಿತು. ಮಂಗಳವಾರವಷ್ಟೇ ಈ ಜೋಡಿಯ ವಿವಾಹ ನಿಶ್ಚಿತಾರ್ಥ ನಡೆದಿತ್ತು.
ಭಾರತ ಪರ 14 ಏಕದಿನ ಪಂದ್ಯಗಳನ್ನಾಡಿರುವ ಬಲಗೈ ವೇಗಿ ಪ್ರಸಿದ್ಧ್ ಕೃಷ್ಣ 25 ವಿಕೆಟ್’ಗಳನ್ನು ಪಡೆದಿದ್ದಾರೆ.

ಯಾರು ಈ ರಚನಾ ಕಷ್ಣ?
ಪ್ರಸಿದ್ಧ್ ಕೃಷ್ಣ ಅವರನ್ನು ಮದುವೆಯಾಗಿರುವ ರಚನಾ ಕೃಷ್ಣ ವೃತ್ತಿಯಲ್ಲಿ ಸಾಫ್ಟ್ ವೇರ್ ಉದ್ಯೋಗಿ. ಅಮೆರಿಕದ ಟೆಕ್ಸಸ್’ನಲ್ಲಿರುವ ಆಸ್ಟಿನ್’ನಲ್ಲಿ ನೆಲೆಸಿರುವ ರಚನಾ ಕೃಷ್ಣ ಹಲವಾರು ವರ್ಷಗಳಿಂದ ಪ್ರಸಿದ್ಧ್ ಕೃಷ್ಣ ಅವರನ್ನು ಪ್ರೀತಿಸುತ್ತಿದ್ದರು. 27 ವರ್ಷದ ಬಲಗೈ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ 2022ರ ಆಗಸ್ಟ್’ನಿಂದ ಯಾವುದೇ ಅಂತರಾಷ್ಟ್ರೀಯ ಪಂದ್ಯವಾಡಿಲ್ಲ. 2022ರ ಆಗಸ್ಟ್ 20ರಂದು ಜಿಂಬಾಬ್ವೆ ವಿರುದ್ಧ ಹರಾರೆಯಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಆಡಿದ್ದೇ ಕೊನೆ. ನಂತರ ಟೀಮ್ ಇಂಡಿಯಾ ಜರ್ಸಿಯಲ್ಲಿ ಪ್ರಸಿದ್ಧ್ ಕೃಷ್ಣ ಕಾಣಿಸಿಕೊಂಡಿಲ್ಲ.

ಬೆನ್ನು ನೋವಿನಿಂದ ಬಳಲುತ್ತಿದ್ದ ಪ್ರಸಿದ್ಧ್ ಕೃಷ್ಣ ಕೆಲ ತಿಂಗಳುಗಳ ಹಿಂದಷ್ಟೇ ನ್ಯೂಜಿಲೆಂಡ್’ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಪ್ರಸಿದ್ಧ್ ಕೃಷ್ಣ ಆಡಿರಲಿಲ್ಲ. ಕರ್ನಾಟಕ ಪರ ರಣಜಿ ಪಂದ್ಯಗಳು ಸೇರಿದಂತೆ ಒಟ್ಟು 64 ಪ್ರಥಮದರ್ಜೆ ಪಂದ್ಯಗಳನ್ನಾಡಿರುವ ಪ್ರಸಿದ್ಧ್ ಕೃಷ್ಣ 109 ವಿಕೆಟ್ ಕಬಳಿಸಿದ್ದಾರೆ.

ಇದನ್ನೂ ಓದಿ : KL Rahul Excusive : ಮುಂದಿನ ವಾರದಿಂದ ಬೆಂಗಳೂರಿನಲ್ಲಿ ಟ್ರೈನಿಂಗ್ ಶುರು ಮಾಡಲಿದ್ದಾರೆ ಕೆಎಲ್ ರಾಹುಲ್

ಇದನ್ನೂ ಓದಿ : Rahul Dravid : ಆರ್.ಅಶ್ವಿನ್ ಬೌಲಿಂಗ್ ರಹಸ್ಯವನ್ನು ಕನ್ನಡದಲ್ಲೇ ಬಿಚ್ಚಿಟ್ಟ ಕೋಚ್ ರಾಹುಲ್ ದ್ರಾವಿಡ್

Comments are closed.