Pro Kabaddi League: ಇಂದು “ತ್ರಿಪಲ್ ಪಂಗಾ”, ಸತತ 6ನೇ ಸೋಲಿನ ಭೀತಿಯಲ್ಲಿ ಹಾಲಿ ಚಾಂಪಿಯನ್ಸ್ ದಬಾಂಗ್ ಡೆಲ್ಲಿ

ಪುಣೆ: (Pro Kabaddi League) ಪ್ರೊ ಕಬಡ್ಡಿ ಲೀಗ್ 9ನೇ ಆವೃತ್ತಿಯ ಟೂರ್ನಿ ನಿರ್ಣಾಯಕ ಹಂತಕ್ಕೆ ತಲುಪಿದ್ದು, ಹಾಲಿ ಚಾಂಪಿಯನ್ ದಬಾಂಗ್ ಡೆಲ್ಲಿ ಸತತ 6ನೇ ಸೋಲಿನ ಭೀತಿಯಲ್ಲಿದೆ. ಮತ್ತೊಂದೆಡೆ ಆತಿಥೇಯ ಪುಣೇರಿ ಪಲ್ಟನ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿದೆ.

ಪುಣೆಯ ಬಾಳೇವಾಡಿಯಲ್ಲಿರುವ ಛತ್ರಪತಿ ಶಿವಾಜಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್’ನಲ್ಲಿ ಇಂದು ಮೂರು ಪಂದ್ಯಗಳು(Pro Kabaddi League) ನಡೆಯಲಿದ್ದು, ದಿನದ ಮೊದಲ ಪಂದ್ಯದಲ್ಲಿ (Pro Kabaddi League)ಪಾಟ್ನಾ ಪೈರೇಟ್ಸ್ ಮತ್ತು ಯು ಮುಂಬಾ ತಂಡಗಳು ಮುಖಾಮುಖಿಯಾಗಲಿವೆ. 2ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ದಬಾಂಗ್ ಡೆಲ್ಲಿ ತಂಡ, ಮಾಜಿ ಚಾಂಪಿಯನ್ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡದ ಸವಾಲನ್ನು ಎದುರಿಸಲಿದೆ. ದಿನದ ಮೂರನೇ ಪಂದ್ಯದಲ್ಲಿ ಯು.ಪಿ ಯೋಧಾ ಪಡೆ ಆತಿಥೇಯ ಪುಣೇರಿ ಪಲ್ಟನ್ ತಂಡವನ್ನು ಎದುರಿಸಲಿದೆ.

ಇದನ್ನೂ ಓದಿ : New Cricket Stadiums Karnataka : ಪುತ್ತೂರು, ಬಳ್ಳಾರಿಯಲ್ಲಿ ನಿರ್ಮಾಣವಾಗಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ

ಇದನ್ನೂ ಓದಿ : New Cricket Stadiums Karnataka : ಪುತ್ತೂರು, ಬಳ್ಳಾರಿಯಲ್ಲಿ ನಿರ್ಮಾಣವಾಗಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ

ಈ ಮೂರು ಪಂದ್ಯಗಳಲ್ಲಿ ದಬಾಂಗ್ ಡೆಲ್ಲಿಗೆ ಇಂದಿನ ಪಂದ್ಯ ತುಂಬಾ ಮಹತ್ವದ್ದು. ಕಾರಣ ಹಾಲಿ ಚಾಂಪಿಯನ್ ಬಳಗ ಈಗಾಗಲೇ ಸತತ ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಮೊದಲ ಐದೂ ಪಂದ್ಯಗಳನ್ನು ಗೆದ್ದು ಅಮೋಘ ಫಾರ್ಮ್’ನಲ್ಲಿ ದಬಾಂಗ್ ಡೆಲ್ಲಿ ಕೆ.ಸಿ ಕಳೆದ ಐದು ಪಂದ್ಯಗಳಲ್ಲಿ ಪುಣೇರಿ ಪಲ್ಟನ್, ತಮಿಳ್ ತಲೈವಾಸ್, ಬೆಂಗಳೂರು ಬುಲ್ಸ್, ಬೆಂಗಾಲ್ ವಾರಿಯರ್ಸ್ ಮತ್ತು ಪಾಟ್ನಾ ಪೈರೇಟ್ಸ್ ವಿರುದ್ಧ ಸೋಲು ಕಂಡು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದಿದೆ.
ಆಡಿರುವ 10 ಪಂದ್ಯಗಳಲ್ಲಿ 6 ಗೆಲುವು, 3 ಸೋಲು ಹಾಗೂ ಒಂದು ಟೈನೊಂದಿಗೆ ಒಟ್ಟು 35 ಅಂಕಗಳನ್ನು ಕಲೆ ಹಾಕಿರುವ ಬೆಂಗಳೂರು ಬುಲ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ರೆ, 9 ಪಂದ್ಯಗಳಲ್ಲಿ ಐದರಲ್ಲಿ ಗೆದ್ದು 2ರಲ್ಲಿ ಸೋತು ಇನ್ನೆರಡು ಪಂದ್ಯಗಳನ್ನು ಟೈ ಮಾಡಿಕೊಂಡಿರುವ ಪುಣೇರಿ ಪಲ್ಟನ್ ಪಡೆ 32 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಶುಕ್ರವಾರ ನಡೆಯುವ ಯು.ಪಿ ಯೋಧಾ ವಿರುದ್ಧದ ಪಂದ್ಯವನ್ನ ಗೆದ್ದರೆ ಆತಿಥೇಯ ಪಲ್ಟನ್ ಬಳಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.

ಇದನ್ನೂ ಓದಿ : Raghavendra Divgi life story : ಭಾರತ ವಿಶ್ವಕಪ್ ತಂಡದಲ್ಲಿರುವ ಥ್ರೋಡೌನ್ ಸ್ಪೆಷಲಿಸ್ಟ್ ರಾಘವೇಂದ್ರ ಅವರ ಮನಮಿಡಿಯುವ ಕಥೆ

ಪ್ರೊ ಕಬಡ್ಡಿ ಲೀಗ್-9: ಶುಕ್ರವಾರದ ಪಂದ್ಯಗಳು

  1. ಯು ಮುಂಬಾ Vs ಪಾಟ್ನಾ ಪೈರೇಟ್ಸ್
  2. ದಬಾಂಗ್ ಡೆಲ್ಲಿ Vs ಜೈಪುರ ಪಿಂಕ್ ಪ್ಯಾಂಥರ್ಸ್
  3. ಯು.ಪಿ ಯೋಧಾ Vs ಪುಣೇರಿ ಪಲ್ಟನ್

ಸ್ಥಳ: ಛತ್ರಪತಿ ಶಿವಾಜಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್, ಬಾಳೇವಾಡಿ; ಪುಣೆ (ಮಹಾರಾಷ್ಟ್ರ)
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್
ಲೈವ್ ಸ್ಟ್ರೀಮಿಂಗ್: ಡಿಸ್ನಿ+ಹಾಟ್ ಸ್ಟಾರ್

(Pro Kabaddi League) The Pro Kabaddi League 9th edition of the tournament has reached the crucial stage and the defending champions Dabang Delhi are in danger of their 6th defeat in a row. On the other hand, the hosts Puneri Paltan are eyeing the top spot in the points table.


Comments are closed.