R Ashwin : ವಿಶ್ವಕಪ್ ಗೆಲ್ಲಲು ಮಾಸ್ಟರ್ ಪ್ಲಾನ್, ಸ್ಪಿನ್ ಮಾಂತ್ರಿಕನನ್ನು ಕಣಕ್ಕಿಳಿಸಲಿದ್ದಾರೆ ದ್ರಾವಿಡ್-ರೋಹಿತ್

ಬೆಂಗಳೂರು: R Ashwin : ಐಸಿಸಿ ಏಕದಿನ ವಿಶ್ವಕಪ್ (ICC World Cup 2023) ಟೂರ್ನಿಗಿನ್ನು ಕೇವಲ ಎರಡು ತಿಂಗಳಷ್ಟೇ ಬಾಕಿ. ಈ ಬಾರಿ ವಿಶ್ವಕಪ್ ಟೂರ್ನಿ ಭಾರತದಲ್ಲೇ ನಡೆಯಲಿರುವ ಕಾರಣ ಟೀಮ್ ಇಂಡಿಯಾಗೆ ಇದು ಅತ್ಯಂತ ಪ್ರತಿಷ್ಠೆಯ ಹಾಗೂ ಮಹತ್ವದ ವಿಶ್ವಕಪ್. 2011ರಲ್ಲಿ ಭಾರತದಲ್ಲೇ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿದ್ದ ಭಾರತ, 2013ರಲ್ಲಿ ಧೋನಿ ನಾಯಕತ್ವದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನೂ ಗೆದ್ದುಕೊಂಡಿತ್ತು. ನಂತರದ 10 ವರ್ಷಗಳಲ್ಲಿ ಭಾರತ ಐಸಿಸಿ ಟ್ರೋಫಿ ಗೆದ್ದಿಲ್ಲ. ಈ ಬಾರಿಯ ವಿಶ್ವಕಪ್ ಟೂರ್ನಿ ಭಾರತದಲ್ಲೇ ನಡೆಯಲಿರುವ ಕಾರಣ ಭಾರತಕ್ಕೆ ಮತ್ತೆ ಐಸಿಸಿ ಟ್ರೋಫಿ ಗೆಲ್ಲುವ ಸುವರ್ಣಾವಕಾಶ ಒದಗಿ ಬಂದಿದೆ.

ತವರಿನಲ್ಲಿ ನಡೆಯುವ ವಿಶ್ವಕಪ್ ಗೆಲ್ಲಲು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಮಾಸ್ಟರ್ ಪ್ಲಾನ್ ರೆಡಿ ಮಾಡುತ್ತಿದ್ದಾರೆ. ಇದರ ಭಾಗವಾಗಿ ಹಿರಿಯ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಅವರನ್ನು ವಿಶ್ವಕಪ್’ನಲ್ಲಿ ಆಡಿಸುವ ಚಿಂತನೆ ನಡೆಸುತ್ತಿದ್ದಾರೆ. ವಿಶ್ವಕಪ್’ನಲ್ಲಿ ಭಾರತ ಬಹುತೇಕ ಲೀಗ್ ಪಂದ್ಯಗಳನ್ನುಸ್ಪಿನ್ ಸ್ನೇಹಿ ಪಿಚ್’ಗಳಲ್ಲಿ ಆಡಲಿದೆ. ಅದರಲ್ಲೂ ವಿಶ್ವ ಚಾಂಪಿಯನ್ ಇಂಗ್ಲೆಂಡ್, ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಗಳನ್ನು ಭಾರತ ತಂಡ ಸ್ಪಿನ್ ಫ್ರೆಂಡ್ಲಿ ವಿಕೆಟ್’ಗಳಲ್ಲೇ ಆಡಲಿದೆ.

ಭಾರತ ತಂಡದಲ್ಲಿ ಈಗ ಆಫ್’ಸ್ಪಿನ್ ಬೌಲರ್ ಕೊರತೆ ಕಾಡುತ್ತಿದೆ. ವಿಶ್ವಕಪ್’ನಲ್ಲಿ ತಂಡಕ್ಕೊಬ್ಬ ಅನುಭವಿ ಆಫ್’ಸ್ಪಿನ್ನರ್ ಅವಶ್ಯಕತೆಯಿರುವುದರಿಂದ ಟೆಸ್ಟ್ ಸ್ಪೆಷಲಿಸ್ಟ್ ಅಶ್ವಿನ್ ಅವರನ್ನೇ ಕಣಕ್ಕಿಳಿಸುವ ಸಾಧ್ಯತೆಯಿದೆ. ಮುಂಬರುವ ಏಷ್ಯಾ ಕಪ್ ಟೂರ್ನಿಯಲ್ಲಿ ಆಡಲಿರುವ ಭಾರತ ತಂಡದಲ್ಲಿಅಶ್ವಿನ್ ಸ್ಥಾನ ಪಡೆದರೆ, ವಿಶ್ವಕಪ್’ನಲ್ಲೂ ಆಡುವುದು ಪಕ್ಕಾ. 37 ವರ್ಷದ ಅಶ್ವಿನ್ 2022ರ ಜನವರಿಯ ಬಳಿಕ ಭಾರತ ಪರ ಯಾವುದೇ ಏಕದಿನ ಪಂದ್ಯಗಳನ್ನಾಡಿಲ್ಲ. 113 ಏಕದಿನ ಪಂದ್ಯಗಳ ಸಹಿತ ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ ಒಟ್ಟು 272 ಪಂದ್ಯಗಳನ್ನಾಡಿರುವ ಸ್ಪಿನ್ ಮಾಂತ್ರಿಕ ಅಶ್ವಿನ್, 712 ವಿಕೆಟ್’ಗಳನ್ನು ಕಬಳಿಸಿದ್ದಾರೆ.

ಐಸಿಸಿ ವಿಶ್ವಕಪ್ ಟೂರ್ನಿ ಅಕ್ಟೋಬರ್ 5ರಂದು ಆರಂಭವಾಗಲಿದೆ. ಅಕ್ಟೋಬರ್ 5ರಂದು ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ಕಳೆದ ಬಾರಿಯ ರನ್ನರ್ಸ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಅಕ್ಟೋಬರ್ 15ರಂದು ನಡೆಯುವ ಭಾರತ ಮತ್ತು ಪಾಕಿಸ್ತಾನ (India Vs Pakistan) ಪಂದ್ಯಕ್ಕೂ ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣವೇ ಆತಿಥ್ಯ ವಹಿಸಲಿದೆ. ಅಕ್ಟೋಬರ್ 8ರದು ಆಸ್ಟ್ರೇಲಿಯಾ ವಿರುದ್ಧ ಚೆನ್ನೈನಲ್ಲಿ ನಡೆಯುವ ಪಂದ್ಯದ ಮೂಲಕ 2 ಬಾರಿಯ ಚಾಂಪಿಯನ್ ಭಾರತ ತಂಡದ ವಿಶ್ವಕಪ್ ಅಭಿಯಾನ ಆರಂಭವಾಗಲಿದೆ.

ಇದನ್ನೂ ಓದಿ : Jasprit Bumrah : ಟೀಮ್ ಇಂಡಿಯಾಗೆ ಗುಡ್ ನ್ಯೂಸ್, ಜಸ್ಪ್ರೀತ್ ಬುಮ್ರಾ ಕಂಬ್ಯಾಕ್ ಮುಹೂರ್ತ ಫಿಕ್ಸ್

ಇದನ್ನೂ ಓದಿ : Sanju Samson : ವಿಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಆಡಿದ ಸಂಜು ಸ್ಯಾಮ್ಸನ್ ಜರ್ಸಿ

ಐಸಿಸಿ ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ (ICC World Cup 2023 Schedule) :

 • ಅಕ್ಟೋಬರ್ 5: ಇಂಗ್ಲೆಂಡ್ Vs ನ್ಯೂಜಿಲೆಂಡ್ (ಅಹ್ಮದಾಬಾದ್)
 • ಅಕ್ಟೋಬರ್ 6: ಪಾಕಿಸ್ತಾನ Vs ಕ್ವಾಲಿಫೈಯರ್-1 (ಹೈದರಾಬಾದ್)
 • ಅಕ್ಟೋಬರ್ 7: ಬಾಂಗ್ಲಾದೇಶ Vs ಅಫ್ಘಾನಿಸ್ತಾನ (ಧರ್ಮಶಾಲಾ)
 • ಅಕ್ಟೋಬರ್ 7: ದಕ್ಷಿಣ ಆಫ್ರಿಕಾ Vs ಕ್ವಾಲಿಫೈಯರ್-2 (ದೆಹಲಿ)
 • ಅಕ್ಟೋಬರ್ 8: ಭಾರತ Vs ಆಸ್ಟ್ರೇಲಿಯಾ (ಚೆನ್ನೈ)
 • ಅಕ್ಟೋಬರ್ 9: ನ್ಯೂಜಿಲೆಂಡ್ Vs ಕ್ವಾಲಿಫೈಯರ್-1 (ಹೈದರಾಬಾದ್)
 • ಅಕ್ಟೋಬರ್ 10: ಇಂಗ್ಲೆಂಡ್ Vs ಬಾಂಗ್ಲಾದೇಶ (ಧರ್ಮಶಾಲಾ)
 • ಅಕ್ಟೋಬರ್ 11: ಭಾರತ Vs ಅಫ್ಘಾನಿಸ್ತಾನ (ದೆಹಲಿ)
 • ಅಕ್ಟೋಬರ್ 12: ಪಾಕಿಸ್ತಾನ Vs ಕ್ವಾಲಿಫೈಯರ್-2 (ಹೈದರಾಬಾದ್)
 • ಅಕ್ಟೋಬರ್ 13: ಆಸ್ಟ್ರೇಲಿಯಾ Vs ದಕ್ಷಿಣ ಆಫ್ರಿಕಾ (ಲಕ್ನೋ)
 • ಅಕ್ಟೋಬರ್ 14: ಇಂಗ್ಲೆಂಡ್ Vs ಅಫ್ಘಾನಿಸ್ತಾನ (ದೆಹಲಿ)
 • ಅಕ್ಟೋಬರ್ 14: ಬಾಂಗ್ಲಾದೇಶ Vs ನ್ಯೂಜಿಲೆಂಡ್ (ಚೆನ್ನೈ)
 • ಅಕ್ಟೋಬರ್ 15: ಭಾರತ Vs ಪಾಕಿಸ್ತಾನ (ಅಹ್ಮದಾಬಾದ್)
 • ಅಕ್ಟೋಬರ್ 16: ಆಸ್ಟ್ರೇಲಿಯಾ Vs ಕ್ವಾಲಿಫೈಯರ್-2 (ಲಕ್ನೋ)
 • ಅಕ್ಟೋಬರ್ 17: ದಕ್ಷಿಣ ಆಫ್ರಿಕಾ Vs ಕ್ವಾಲಿಫೈಯರ್-1(ಧರ್ಮಶಾಲಾ)
 • ಅಕ್ಟೋಬರ್ 18: ಅಫ್ಘಾನಿಸ್ತಾನ Vs ನ್ಯೂಜಿಲೆಂಡ್ (ಚೆನ್ನೈ)
 • ಅಕ್ಟೋಬರ್ 19: ಭಾರತ Vs ಬಾಂಗ್ಲಾದೇಶ (ಪುಣೆ)
 • ಅಕ್ಟೋಬರ್ 20: ಆಸ್ಟ್ರೇಲಿಯಾ Vs ಪಾಕಿಸ್ತಾನ (ಬೆಂಗಳೂರು)
 • ಅಕ್ಟೋಬರ್ 21: ಇಂಗ್ಲೆಂಡ್ Vs ದಕ್ಷಿಣ ಆಫ್ರಿಕಾ (ಮುಂಬೈ)
 • ಅಕ್ಟೋಬರ್ 21: ಕ್ವಾಲಿಫೈಯರ್-1 Vs ಕ್ವಾಲಿಫೈಯರ್-2 (ಲಕ್ನೋ)
 • ಅಕ್ಟೋಬರ್ 22: ಭಾರತ Vs ನ್ಯೂಜಿಲೆಂಡ್ (ಧರ್ಮಶಾಲಾ)
 • ಅಕ್ಟೋಬರ್ 23: ಪಾಕಿಸ್ತಾನ Vs ಅಫ್ಘಾನಿಸ್ತಾನ (ಚೆನ್ನೈ)
 • ಅಕ್ಟೋಬರ್ 24: ದಕ್ಷಿಣ ಆಫ್ರಿಕಾ Vs ಬಾಂಗ್ಲಾದೇಶ (ಮುಂಬೈ)
 • ಅಕ್ಟೋಬರ್ 25: ಆಸ್ಟ್ರೇಲಿಯಾ Vs ಕ್ವಾಲಿಫೈಯರ್-1 (ದೆಹಲಿ)
 • ಅಕ್ಟೋಬರ್ 26: ಇಂಗ್ಲೆಂಡ್ Vs ಕ್ವಾಲಿಫೈಯರ್-2 (ಬೆಂಗಳೂರು)
 • ಅಕ್ಟೋಬರ್ 27: ಪಾಕಿಸ್ತಾನ Vs ದಕ್ಷಿಣ ಆಫ್ರಿಕಾ (ಚೆನ್ನೈ)
 • ಅಕ್ಟೋಬರ್ 28: ಕ್ವಾಲಿಫೈಯರ್-2 Vs ಬಾಂಗ್ಲಾದೇಶ (ಕೋಲ್ಕತಾ)
 • ಅಕ್ಟೋಬರ್ 28: ಆಸ್ಟ್ರೇಲಿಯಾ Vs ನ್ಯೂಜಿಲೆಂಡ್ (ಧರ್ಮಶಾಲಾ)
 • ಅಕ್ಟೋಬರ್ 29: ಭಾರತ Vs ಇಂಗ್ಲೆಂಡ್ (ಲಕ್ನೋ)
 • ಅಕ್ಟೋಬರ್ 30: ಅಫ್ಘಾನಿಸ್ತಾನ Vs ಕ್ವಾಲಿಫೈಯರ್-2 (ಪುಣೆ)
 • ಅಕ್ಟೋಬರ್ 31: ಪಾಕಿಸ್ತಾನ Vs ಬಾಂಗ್ಲಾದೇಶ (ಕೋಲ್ಕತಾ)
 • ನವೆಂಬರ್ 1: ದಕ್ಷಿಣ ಆಫ್ರಿಕಾ Vs ನ್ಯೂಜಿಲೆಂಡ್ (ಪುಣೆ)
 • ನವೆಂಬರ್ 2: ಭಾರತ Vs ಕ್ವಾಲಿಫೈಯರ್-2 (ಮುಂಬೈ)
 • ನವೆಂಬರ್ 3: ಕ್ವಾಲಿಫೈಯರ್-1Vs ಅಫ್ಘಾನಿಸ್ತಾನ (ಲಕ್ನೋ)
 • ನವೆಂಬರ್ 4: ಇಂಗ್ಲೆಂಡ್ Vs ಆಸ್ಟ್ರೇಲಿಯಾ (ಅಹ್ಮದಾಬಾದ್)
 • ನವೆಂಬರ್ 4: ಪಾಕಿಸ್ತಾನ Vs ನ್ಯೂಜಿಲೆಂಡ್ (ಬೆಂಗಳೂರು)
 • ನವೆಂಬರ್ 5: ದಕ್ಷಿಣ ಆಫ್ರಿಕಾ Vs ಭಾರತ (ಕೋಲ್ಕತಾ)
 • ನವೆಂಬರ್ 6: ಬಾಂಗ್ಲಾದೇಶ Vs ಕ್ವಾಲಿಫೈಯರ್-2 (ದೆಹಲಿ)
 • ನವೆಂಬರ್ 7: ಆಸ್ಟ್ರೇಲಿಯಾ Vs ಅಫ್ಘಾನಿಸ್ತಾನ (ಮುಂಬೈ)
 • ನವೆಂಬರ್ 8: ಇಂಗ್ಲೆಂಡ್ Vs ಕ್ವಾಲಿಫೈಯರ್-1 (ಪುಣೆ)
 • ನವೆಂಬರ್ 9: ನ್ಯೂಜಿಲೆಂಡ್ Vs ಕ್ವಾಲಿಫೈಯರ್-2 (ಬೆಂಗಳೂರು)
 • ನವೆಂಬರ್ 10: ದಕ್ಷಿಣ ಆಫ್ರಿಕಾ Vs ಅಫ್ಘಾನಿಸ್ತಾನ (ಅಹ್ಮದಾಬಾದ್)
 • ನವೆಂಬರ್ 11: ಭಾರತ Vs ಕ್ವಾಲಿಫೈಯರ್-1 (ಬೆಂಗಳೂರು)
 • ನವೆಂಬರ್ 12: ಇಂಗ್ಲೆಂಡ್ Vs ಪಾಕಿಸ್ತಾನ (ಕೋಲ್ಕತಾ)
 • ನವೆಂಬರ್ 12: ಆಸ್ಟ್ರೇಲಿಯಾ Vs ಬಾಂಗ್ಲಾದೇಶ (ಪುಣೆ)
 • ನವೆಂಬರ್ 15: ಸೆಮಿಫೈನಲ್-1 (ಮುಂಬೈ)
 • ನವೆಂಬರ್ 16: ಸೆಮಿಫೈನಲ್-2 (ಕೋಲ್ಕತಾ)
 • ನವೆಂಬರ್ 19: ಫೈನಲ್ (ಅಹ್ಮದಾಬಾದ್)

R Ashwin: Master plan to win World Cup, Dravid-Rohit to field spin wizard

Comments are closed.