ಭಾನುವಾರ, ಏಪ್ರಿಲ್ 27, 2025
HomeSportsCricketRahul Comeback Tenison Hardik Pandya : ನಾಯಕ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಹಾರ್ದಿಕ್ ಪಾಂಡ್ಯಗೆ...

Rahul Comeback Tenison Hardik Pandya : ನಾಯಕ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್ ಕೊಟ್ಟ ಬಿಸಿಸಿಐ

- Advertisement -

ಬೆಂಗಳೂರು: (Rahul Comeback Tenison Hardik Pandya) ಟೀಮ್ ಇಂಡಿಯಾ ನಾಯಕ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಐಪಿಎಲ್ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡದ ನಾಯಕ, ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಬಿಸಿಸಿಐ ಬಿಗ್ ಶಾಕ್ ಕೊಟ್ಟಿದೆ. ಏಷ್ಯಾ ಕಪ್ ಟಿ20 ಟೂರ್ನಿಗೆ ತಂಡವನ್ನು ಆಯ್ಕೆ ಮಾಡುವ ವೇಳೆ ಪಾಂಡ್ಯಗೆ ಅಚ್ಚರಿಯಾಗುವಂತಹ ನಿರ್ಧಾರವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ತೆಗೆದುಕೊಂಡಿದೆ. ಅಷ್ಟಕ್ಕೂ ಆಗಿದ್ದೇನು ಗೊತ್ತಾ ?

ಆಗಸ್ಟ್ 27ರಿಂದ ದುಬೈನಲ್ಲಿ ಆರಂಭವಾಗಲಿರುವ ಏಷ್ಯಾ ಕಪ್ ಟೂರ್ನಿಗೆ (Asia Cup 2022) ಬಿಸಿಸಿಐ, 15 ಸದಸ್ಯರ ಟೀಮ್ ಇಂಡಿಯಾವನ್ನು ಸೋಮವಾರ ರಾತ್ರಿ ಪ್ರಕಟಿಸಿತು. ಸ್ಟಾರ್ ಆರಂಭಿಕ ಆಟಗಾರ ಕೆ.ಎಲ್ ರಾಹುಲ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಬಿಸಿಸಿಐ ಬಲಿಷ್ಠ ತಂಡವನ್ನು ಏಷ್ಯಾ ಕಪ್ ಅಖಾಡಕ್ಕೆ ಇಳಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ, ಐರ್ಲೆಂಡ್ ವಿರುದ್ಧದ ಟಿ20 ಸರಣಿ, ಇಂಗ್ಲೆಂಡ್ ವಿರುದ್ಧದ ಟೆಸ್ಟ್, ಏಕದಿನ ಹಾಗೂ ಟಿ20 ಸರಣಿ, ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ಅಲಭ್ಯರಾಗಿದ್ದ ಕನ್ನಡಿಗ ಕೆ.ಎಲ್ ರಾಹುಲ್ ಏಷ್ಯಾ ಕಪ್ ಮೂಲಕ ಭಾರತ ತಂಡಕ್ಕೆ ಮರಳಿದ್ದಾರೆ. ಸ್ಪೋರ್ಟ್ಸ್ ಹರ್ನಿಯಾ (Sports Hernia) ಮತ್ತು ಕೋವಿಡ್-19 ಕಾರಣದಿಂದ ಕಳೆದ 3 ತಿಂಗಳಲ್ಲಿ ರಾಹುಲ್ ಒಟ್ಟು ಏಳು ಸರಣಿಗಳನ್ನು ತಪ್ಪಿಸಿಕೊಂಡಿದ್ದಾರೆ.

ಇದೀಗ ಗಾಯದಿಂದ ಮತ್ತು ಕೋವಿಡ್’ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡು ಫಿಟ್ ಆಗಿ ಟೀಮ್ ಇಂಡಿಯಾಗೆ ಮರಳಿರುವ ರಾಹುಲ್ ಅವರಿಗೆ ತಂಡದ ಉಪನಾಯಕನ ಪಟ್ಟವನ್ನು ಮತ್ತೆ ಕಟ್ಟಲಾಗಿದೆ. ಇದು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ಬಿಸಿಸಿಐ ನೀಡಿರುವ ಬಿಗ್ ಶಾಕ್. ಐರ್ಲೆಂಡ್ ವಿರುದ್ಧದ ಟಿ20 ಸರಣಿ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದ ಹಾರ್ದಿಕ್ ಪಾಂಡ್ಯ, ಮುಂದಿನ ದಿನಗಳಲ್ಲಿ ಭಾರತ ತಂಡದ ಪೂರ್ಣಕಾಲಿಕ ನಾಯಕರಾಗುವ ಆಶಯ ವ್ಯಕ್ತಪಡಿಸಿದ್ದರು. ಅವಕಾಶ ಸಿಕ್ಕರೆ ನಾನು ತಂಡದ ನಾಯಕತ್ವದ ಜವಾಬ್ದಾರಿ ನಿಭಾಯಿಸಲು ಸಿದ್ಧ ಎಂದಿದ್ದರು. ಅಷ್ಟೇ ಅಲ್ಲ, ನಾಯಕತ್ವದಲ್ಲಿ ಯಶಸ್ಸು ಕಂಡಿರುವ ಕಾರಣ ಮುಂದಿನ ಸರಣಿಗಳಲ್ಲಿ ಖಾಯಂ ಉಪನಾಯಕನ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಕೆ.ಎಲ್ ರಾಹುಲ್ ತಂಡಕ್ಕೆ ಮರಳುತ್ತಿದ್ದಂತೆ ಹಾರ್ದಿಕ್ ಪಾಂಡ್ಯ ಲೆಕ್ಕಾಚಾರವೆಲ್ಲಾ ತಲೆ ಕೆಳಗಾಗಿದೆ. ಏಷ್ಯಾ ಕಪ್ ಟಿ20 ಟೂರ್ನಿ ಆಗಸ್ಟ್ 27ರಂದು ಆರಂಭವಾಗಲಿದ್ದು, ಆಗಸ್ಟ್ 28ರಂದು ದುಬೈನಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜ, ಭುವನೇಶ್ವರ್ ಕುಮಾರ್, ಆರ್.ಅಶ್ವಿನ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ರಿಷಭ್ ಪಂತ್, ದೀಪಕ್ ಹೂಡ, ರವಿ ಬಿಷ್ಣೋಯ್, ಆವೇಶ್ ಖಾನ್.

ಇದನ್ನೂ ಓದಿ : Asia Cup Rahul Comeback: ರಾಹುಲ್‌ಗೆ ಘಾಟಿ ಸುಬ್ರಮಣ್ಯನ ಅನುಗ್ರಹ: ಏಷ್ಯಾ ಕಪ್‌ನಲ್ಲಿ ಆಡಲಿರುವ ಟೀಮ್ ಇಂಡಿಯಾದಲ್ಲಿ ಕನ್ನಡಿಗನಿಗೆ ಸ್ಥಾನ

ಇದನ್ನೂ ಓದಿ : Dipika Pallikal : ಕಂಚಿನ ಪದಕ ಗೆದ್ದ ದಿನೇಶ್ ಕಾರ್ತಿಕ್ ಪತ್ನಿ, ಅವಳಿ ಮಕ್ಕಳ ತಾಯಿ ದೀಪಿಕಾ

Rahul Comeback Tenison Hardik Pandya Asia Cup 2022

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular