ನವದೆಹಲಿ : ಭಾರತೀಯ ಕ್ರೀಡಾಪಟುಗಳಿಗೆ ಕ್ರೀಡಾ ಸಾಧನೆಗಾಗಿ ನೀಡಲಾಗುತ್ತಿರು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು, ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಎಂದು ಮರು ನಾಮಕರಣ ಮಾಡಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
ಭಾರತದ ಪ್ರತಿಷ್ಠಿತ ಪ್ರಶಸ್ತಿಯಾಗಿರುವ ಖೇಲ್ ರತ್ನ ಪ್ರಶಸ್ತಿ ಹೆಸರು ಬದಲಿಸಿ ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡುವಂತೆ ಸಾಕಷ್ಟು ಮನವಿಗಳು ಬಂದಿತ್ತು. ಈ ಹಿನ್ನೆಲೆಯಲ್ಲಿ ಹಲವು ಹೆಸರುಗಳ ಕುರಿತು ಚರ್ಚೆಯನ್ನು ನಡೆಸಿ ಅಂತಿಮವಾಗಿ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಎಂದು ಕರೆಯಲಾಗುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಹೆಸರಿನ ಬದಲು ಮೇಜರ್ ಧ್ಯಾನ್‌ಚಂದ್ ಅವರ ಹೆಸರು ಇಟ್ಟಿವುದಕ್ಕೆ ಒಂದೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇನ್ನೊಂದೆಡೆ ರಾಜೀವ್ ಗಾಂಧಿ ಹೆಸರು ಬದಲು ಮಾಡಿರುವುದು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೂ ಕಾರಣವಾದರೂ ಅಚ್ಚರಿ ಇಲ್ಲ.