ಸೋಮವಾರ, ಏಪ್ರಿಲ್ 28, 2025
HomeSportsCricketIND vs WI series : ವೆಸ್ಟ್‌ ಇಂಡಿಸ್‌ ಸರಣಿಗೆ ಟೀಂ ಇಂಡಿಯಾ ಪ್ರಕಟ, ರವಿ...

IND vs WI series : ವೆಸ್ಟ್‌ ಇಂಡಿಸ್‌ ಸರಣಿಗೆ ಟೀಂ ಇಂಡಿಯಾ ಪ್ರಕಟ, ರವಿ ಬಿಷ್ಣೋಯ್, ಕುಲದೀಪ್ ಯಾದವ್ ವಾಪಾಸ್‌

- Advertisement -

ಮುಂಬೈ : ವೆಸ್ಟ್ ಇಂಡೀಸ್ ವಿರುದ್ಧ Paytm ODI ಮತ್ತು T20I ಸರಣಿಗೆ (IND vs WI series) ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಎರಡೂ ಸರಣಿಗೂ ರೋಹಿತ್‌ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಕನ್ನಡಿಗ ಕೆ.ಎಲ್.ರಾಹುಲ್‌ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಸ್ಪಿನ್ನರ್‌ ಕುಲದೀಪ್‌ ಯಾದವ್‌ ಹಾಗೂ ಯುವ ಬೌಲರ್‌ ರವಿ ಬಿಷ್ಣೋಯಿ ಟೀಂ ಇಂಡಿಯಾಕ್ಕೆ ಮರಳಿದ್ದು, ಏಕದಿನ ಸರಣಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ದ ಸರಣಿಯಲ್ಲಿ ಟೀಂ ಇಂಡಿಯಾ ವೈಟ್‌ ವಾಷ್‌ ಅನುಭವಿಸಿದ ಬೆನ್ನಲ್ಲೇ ರೋಹಿತ್‌ ಶರ್ಮಾ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಈಗಾಗಲೇ ಗಾಯದ ಸಮಸ್ಯೆಗೆ ತುತ್ತಾಗಿದ್ದ ರೋಹಿತ್‌ ಶರ್ಮಾ ಹಾಗೂ ಮೊಣಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕುಲದೀಪ್‌ ಯಾದವರ್‌ ಚೇತರಿಸಿಕೊಂಡಿದ್ದಾರೆ. ಫೆಬ್ರುವರಿ 6 ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಒಟ್ಟು ಮೂರುಪಂದ್ಯಗಳ ಏಕದಿನ ಸರಣಿಯನ್ನು ಆಡಲಿರುವ ಟೀಮ್ ಇಂಡಿಯಾ, ಫೆಬ್ರವರಿ 16 ರಿಂದ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ T20I ಸರಣಿಯನ್ನು ಆಡಲು ಸಿದ್ಧವಾಗಿದೆ. ಭಾರತ ಹಿರಿಯ ಆಯ್ಕೆ ಸಮಿತಿಯು ಮುಂಬರುವ 18 ಸದಸ್ಯರ ತಂಡವನ್ನು ಆಯ್ಕೆ ಮಾಡಿದೆ.

ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಅವರಿಗೆ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಕೆಎಲ್ ರಾಹುಲ್ ಎರಡನೇ ಏಕದಿನದಿಂದ ಲಭ್ಯವಾಗಲಿದ್ದಾರೆ. ವೆಸ್ಟ್ ಇಂಡೀಸ್ ಸರಣಿಗಾಗಿ ಭಾರತ ಏಕದಿನ ತಂಡದಲ್ಲಿ ದೀಪಕ್ ಹೂಡಾ ಕೂಡ ಸ್ಥಾನ ಪಡೆದಿದ್ದಾರೆ. ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರವೀಂದ್ರ ಜಡೇಜಾ ಎರಡೂ ಸರಣಿಯಿಂದಲೂ ಹೊರಗುಳಿದಿದ್ದಾರೆ. ಆದರೆ ಅಕ್ಷರ್‌ ಪಟೇಲ್‌ ತಂಡವನ್ನು ಕೂಡಿಕೊಂಡಿದ್ದಾರೆ.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಾಹರ್, ಶಾರ್ದೂಲ್ ಠಾಕೂರ್ , ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್. ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್.

ಭಾರತ T20I ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್ , ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್. ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್.

ಇದನ್ನೂ ಓದಿ : ಲಕ್ನೋ ತಂಡಕ್ಕೆ ಲಕ್ನೋ ಸೂಪರ್‌ ಜೈಂಟ್ಸ್‌ ಹೆಸರಿಟ್ಟ RPS ಗ್ರೂಫ್‌

ಇದನ್ನೂ ಓದಿ : Rohit Sharma Slim : ವೆಸ್ಟ್ ಇಂಡೀಸ್ ಸರಣಿಗೆ ಮುನ್ನ ಸ್ಲಿಮ್‌ ಆಂಡ್‌ ಫಿಟ್‌ ಆದ ರೋಹಿತ್ ಶರ್ಮಾ

(Ravi Bishnoi, Kuldeep Yadav return, BCCI announce squads for IND vs WI series)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular