IPL 2024 RCB Glenn Maxwell Out : ಇಂಡಿಯನ್ ಪ್ರೀಮಿಯರ್ ಲೀಗ್ಗೆ ಈಗಾಗಲೇ ಮೂಹೂರ್ತ ಫಿಕ್ಸ್ ಆಗಿದೆ. ಈ ನಡುವಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಖ್ಯಾತ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಇದು ಆರ್ಸಿಬಿ ಅಭಿಮಾನಿಗಳಿಗೆ ಆತಂಕ ಮೂಡಿಸಿದೆ.
ಗ್ಲೆನ್ ಮ್ಯಾಕ್ಸ್ವೆಲ್ ಅಡಿಲೇಡ್ನಲ್ಲಿ ಪಾರ್ಟಿ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ನಂತರ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಫೆಬ್ರವರಿ 2 ರಿಂದ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರು ಪಂದ್ಯಗಳ ODI ಸರಣಿಯಿಂದ ಅವರು ಹೊರಬಿದ್ದಿದ್ದಾರೆ.

ಮಾಧ್ಯಮಗಳ ವರದಿಯ ಪ್ರಕಾರ ಮ್ಯಾಕ್ಸ್ವೆಲ್ ಮದ್ಯದ ಅಮಲಿನಲ್ಲಿದ್ದರು ಎನ್ನಲಾಗುತ್ತಿದೆ. ಸದ್ಯ ಕ್ರಿಕೆಟ್ ಆಸ್ಟ್ರೇಲಿಯಾ (CA) ಈಗ ಮ್ಯಾಕ್ಸ್ವೆಲ್ ಪ್ರಕರಣದ ತನಿಖೆ ನಡೆಸುತ್ತಿದೆ. ‘ಡೈಲಿ ಟೆಲಿಗ್ರಾಫ್’ ಪ್ರಕಾರ, ಮ್ಯಾಕ್ಸ್ವೆಲ್ ಕುಡಿದಿದ್ದರು ಮತ್ತು ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಅವರ ಬ್ಯಾಂಡ್ ‘ಸಿಕ್ಸ್ ಅಂಡ್ ಔಟ್’ ಸಂಗೀತ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದರು.
ಇದನ್ನೂ ಓದಿ : ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತ : ಸ್ಪೋಟಕ ಆಟಗಾರ ಸೂರ್ಯಕುಮಾರ್ ಯಾದವ್ ಐಪಿಎಲ್ನಿಂದ ಔಟ್
ಈ ಸಮಯದಲ್ಲಿ, ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಅನಾರೋಗ್ಯಕ್ಕೆ ಒಳಗಾದರು. ಅವರನ್ನು ರಾಯಲ್ ಅಡಿಲೇಡ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಮನೆಗೆ ವಾಪಾಸಾಗಿದ್ದಾರೆ. ವರದಿಗಳ ಪ್ರಕಾರ, ಕ್ರಿಕೆಟ್ ಆಸ್ಟ್ರೇಲಿಯಾ ಈ ವಾರಾಂತ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಒಳಗೊಂಡ ಘಟನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಹುಡುಕುತ್ತಿದೆ.
ಇನ್ನು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಘಟನೆಯ ಕುರಿತು ಪ್ರತಿಕ್ರೀಯೆಯನ್ನು ನೀಡಿದೆ. ಯಾವುದೇ ಕಾರಣಕ್ಕೂ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ತಂಡದಿಂದ ಬದಲಾಯಿಸುವ ಪ್ರಶ್ನೆಯಿಲ್ಲ. ಬಿಗ್ ಬ್ಯಾಷ್ ಲೀಗ್ ನಂತರ ಮತ್ತು ಅವರ ವೈಯಕ್ತಿಕ ದಾಖಲೆಗಳ ಆಧಾರದ ಮೇಲೆ ಅವರು ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಅಲ್ಲದೇ ಮ್ಯಾಕ್ಸ್ವೆಲ್ ಟಿ20 ಸರಣಿಗೆ ಮರಳುವ ನಿರೀಕ್ಷೆಯಿದೆ.
ಇದನ್ನೂ ಓದಿ : IPL 2024: ಐಪಿಎಲ್ 2024 ಟ್ರೋಫಿ ಗೆಲ್ಲುವ ತಂಡ ಯಾವುದು ? ಇಲ್ಲಿದೇ ಐಪಿಎಲ್ನ ಎಲ್ಲಾ ತಂಡಗಳ ಅತ್ಯುತ್ತಮ ಆಡುವ ಬಳಗ
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ಗ್ಲೆನ್ ಮ್ಯಾಕ್ಸ್ವೆಲ್ ಔಟ್:
ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡುತ್ತಿದೆ. ಮೊದಲ ಟೆಸ್ಟ್ ಪಂದ್ಯವನ್ನು ಆತಿಥೇಯ ಆಸ್ಟ್ರೇಲಿಯಾ 10 ವಿಕೆಟ್ಗಳಿಂದ ಗೆದ್ದುಕೊಂಡಿತು. ಟೆಸ್ಟ್ ನಂತರ ಶುಕ್ರವಾರ, ಫೆಬ್ರವರಿ 2 ರಿಂದ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರು ಪಂದ್ಯಗಳ ODI ಸರಣಿ ನಡೆಯಲಿದೆ. ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಹೊರತುಪಡಿಸಿ ಆಸ್ಟ್ರೇಲಿಯಾ ODI ಸರಣಿಗೆ ತಮ್ಮ ತಂಡವನ್ನು ಪ್ರಕಟಿಸಿದೆ.

ಇದನ್ನೂ ಓದಿ : ಟೀಂ ಇಂಡಿಯಾಗೆ ಮತ್ತೆ ವಿರಾಟ್ ಕೊಹ್ಲಿ ನಾಯಕ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿರುವ ಗ್ಲೆನ್ ಮ್ಯಾಕ್ಸ್ ವೆಲ್ ಐಪಿಎಲ್ 2024ರಲ್ಲಿ ಮಿಂಚುವ ಪ್ಲಾನ್ ನಲ್ಲಿದ್ದಾರೆ.ಹೀಗೆ ಸಿಕ್ಕ ಅವಕಾಶಗಳಲ್ಲಿ ಮಿಂಚುತ್ತಿರುವ ಗ್ಲೆನ್ ಆರ್ ಸಿಬಿ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಲೈನ್ ಅಪ್ ಗೆ ಬೇಕಾದ ರಣತಂತ್ರ ಹೆಣೆದಿದ್ದಾರೆ.
ಆಸ್ಟ್ರೇಲಿಯಾ vs ವೆಸ್ಟ್ ಇಂಡೀಸ್ ODI ತಂಡ:
ಸ್ಟೀವ್ ಸ್ಮಿತ್ (ನಾಯಕ), ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಜೇಕ್ ಫ್ರೇಸರ್, ಲ್ಯಾನ್ಸ್ ಮೋರಿಸ್,ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಮ್ಯಾಟ್ ಶಾರ್ಟ್ ಮತ್ತು ಆಡಮ್ ಝಂಪಾ.
RCB star Glenn Maxwell ill before IPL 2024 : Out of AUS vs WI ODI series