ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ಇದುವರೆಗೆ ಎರಡು ಬಾರಿ ಐಪಿಎಲ್ ಪ್ರಶಸ್ತಿಯನ್ನು ಜಯಿಸಿದ್ದಾರೆ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ( RCB) ಖ್ಯಾತ ಆಟಗಾರ ಆರೋನ್ ಪಿಂಚ್ (aaron finch) ಟಾಟಾ IPL 2022 ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಇಂಗ್ಲೆಂಡ್ ತಂಡದ ಆಟಗಾರ ಅಲೆಕ್ಸ್ ಹೇಲ್ಸ್ ಈ ಬಾರಿ ಬಯೋ ಬಬಲ್ ಕಾರಣದಿಂದಾಗಿ ಟೂರ್ನಿಯಿಂದ ಹೊರಗುಳಿಯಲು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲೀಗ ಕೋಲ್ಕತ್ತಾ ತಂಡ ಬಲಿಷ್ಠ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಕೋವಿಡ್ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪಂದ್ಯಾವಳಿಯ ವೇಳೆಯಲ್ಲಿ ಬಯೋ ಬಬಲ್ ಹಿನ್ನೆಲೆಯಲ್ಲಿ ಅಲೆಕ್ಸ್ ಹೇಲ್ಸ್ ಈಗಾಗಲೇ ಕಳೆದ ನಾಲ್ಕು ತಿಂಗಳಿನಿಂದ ಮನೆಯಿಂದ ದೂರ ಉಳಿಯ ಬೇಕಾಗಿದೆ. ಅಲ್ಲದೇ ಐಪಿಎಲ್‌ನಲ್ಲಿಯೂ ಈ ಬಾರಿ ಮತ್ತೆ ಬಯೋ ಬಬಲ್‌ನಲ್ಲಿ ಭಾಗಿಯಾಗ ಬೇಕಾಗಿದೆ. ಇದೇ ಕಾರಣದಿಂದಲೇ ಅಲೆಕ್ಸ್ ಹೇಲ್ಸ್ ಈ ಬಾರಿ ಐಪಿಎಲ್‌ನಿಂದಲೇ ದೂರ ಉಳಿಯಲು ನಿರ್ಧರಿಸಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಆರನ್ ಫಿಂಚ್ 1.5 ಕೋಟಿಗೆ ಕೆಕೆಆರ್ ಜೊತೆ ಆಡಲು ಒಪ್ಪಿಕೊಂಡಿದ್ದಾರೆ. ಕೆಕೆಆರ್‌ನ ಸಿಇಒ ಮತ್ತು ಎಂಡಿ ವೆಂಕಿ ಮೈಸೂರು ಅವರು ಮತ್ತು ತಂಡವು ಹೇಲ್ ಅವರ ನಿರ್ಧಾರವನ್ನು ಗೌರವಿಸುತ್ತದೆ ಎಂದು ಡಿಎನ್‌ಎ ವರದಿ ಮಾಡಿದೆ. ಕೋಲ್ಕತ್ತಾ ತಂಡದ ಪರ ಅಜಿಂಕ್ಯಾ ರಹಾನೆ ಹಾಗೂ ಆರೋನ್ ಪಿಂಚ್ ಆರಂಭಿಕರಾಗಿ ಕಾಣಿಸಿಕೊಳ್ಳಲಿದ್ದಾರೆ.
ಐಪಿಎಲ್‌ನಲ್ಲಿ ಆರನ್ ಫಿಂಚ್ ದಾಖಲೆಯ ಒಂಬತ್ತನೇ ಬಾರಿ ಕಾಣಿಸಿಕೊಳ್ಳಲಿದ್ದಾರೆ. ರಾಜಸ್ಥಾನ ರಾಯಲ್ಸ್ (RR), ಡೆಲ್ಲಿ ಡೇರ್‌ಡೆವಿಲ್ಸ್ (ಈಗ ದೆಹಲಿ ಕ್ಯಾಪಿಟಲ್ಸ್), ಪುಣೆ ವಾರಿಯರ್ಸ್ ಇಂಡಿಯಾ (PWI), ಸನ್‌ರೈಸರ್ಸ್ ಹೈದರಾಬಾದ್ (SRH), ಮುಂಬೈ ಇಂಡಿಯನ್ಸ್ (MI), ಗುಜರಾತ್ ಲಯನ್ಸ್ (GL), ಕಿಂಗ್ಸ್ XI ಪಂಜಾಬ್ (ಈಗ ಪಂಜಾಬ್ ಕಿಂಗ್ಸ್) ) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB). ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಐಪಿಎಲ್ 2022 ರ ಆರಂಭಿಕ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದೆ. ಮಾರ್ಚ್ 26 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ. ಐಪಿಎಲ್ 2022 ರ ಅವಧಿಯಲ್ಲಿ ಕೆಕೆಆರ್ ಒಟ್ಟು 14 ಪಂದ್ಯಗಳನ್ನು ಆಡಲಿದೆ. ಐಪಿಎಲ್ 2021 ರಲ್ಲಿ ಕಳೆದ ಋತುವಿನಲ್ಲಿ, ಕೆಕೆಆರ್ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತ ನಂತರ ರನ್ನರ್ ಅಪ್ ಆಗಿ ಕೊನೆಗೊಂಡಿತು.
IPL 2022 ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡ:
ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್, ಪ್ಯಾಟ್ ಕಮ್ಮಿನ್ಸ್, ನಿತೀಶ್ ರಾಣಾ, ಶಿವಂ ಮಾವಿ, ಶೆಲ್ಡನ್ ಜಾಕ್ಸನ್, ಅಜಿಂಕ್ಯ ರಹಾನೆ, ರಿಂಕು ಸಿಂಗ್, ಅನುಕುಲ್ ರಾಯ್, ರಸಿಖ್ ದಾರ್, ಚಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ಬಾಬಾ ಇಂದ್ರಜಿತ್ , ಅಭಿಜೀತ್ ತೋಮರ್, ಸ್ಯಾಮ್ ಬಿಲ್ಲಿಂಗ್ಸ್, ಅಲೆಕ್ಸ್ ಹೇಲ್ಸ್, ರಮೇಶ್ ಕುಮಾರ್, ಮೊಹಮ್ಮದ್ ನಬಿ, ಅಮನ್ ಖಾನ್, ಉಮೇಶ್ ಯಾದವ್.
ಇದನ್ನೂ ಓದಿ : ಲಕ್ನೋ ಸೂಪರ್ ಜೈಂಟ್ಸ್‌ಗೆ ಬಿಗ್ ಶಾಕ್ : ಖ್ಯಾತ ಆಟಗಾರ ತಂಡದಿಂದ ಔಟ್
ಇದನ್ನೂ ಓದಿ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಡು ಪ್ಲೆಸಿಸ್ ನಾಯಕ
( RCB Top Player enter KKR for IPL 2022)