IPL 2025 : ಮುಂಬೈ: ಐದು ಬಾರಿಯ ಐಪಿಎಲ್ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ (Mumbai Indians) ತಂಡದಲ್ಲಿ ದೊಡ್ಡ ಬಿರುಗಾಳಿ ಬೀಸಿದೆ. ತಂಡದ ಇಬ್ಬರು ಆಧಾರಸ್ಥಂಭಗಳು ಮುಂಬೈ ತಂಡವನ್ನು ತೊರೆಯುವುದು ಬಹುತೇಕ ಖಚಿತಗೊಂಡಿದೆ. ಮುಂಬೈ ಇಂಡಿಯನ್ಸ್ ತಂಡವನ್ನು ಐದು ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿಸಿರುವ ಯಶಸ್ವಿ ನಾಯಕ ರೋಹಿತ್ ಶರ್ಮಾ (Rohit Sharma) ಮುಂದಿನ ಐಪಿಎಲ್ ಟೂರ್ನಿಯಲ್ಲಿ ಮುಂಬೈ ತಂಡದ ಪರ ಆಡದಿರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ರೋಹಿತ್ ಶರ್ಮಾ ಜೊತೆ ತಂಡದ ಸ್ಫೋಟಕ ದಾಂಡಿಗ ಸೂರ್ಯಕುಮಾರ್ ಯಾದವ್ (Suryakumar Yadav) ಕೂಡ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಬಾರಿಯ ಐಪಿಎಲ್ ಟೂರ್ನಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಪಟ್ಟಾಭಿಷೇಕ ಮಾಡಲಾಗಿತ್ತು. ಇದು ಮುಂಬೈ ಇಂಡಿಯನ್ಸ್ ತಂಡದ ಹಿರಿಯ ಆಟಗಾರರಾದ ರೋಹಿತ್, ಸೂರ್ಯ ಕುಮಾರ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ಅಸಮಾಧಾನಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ : KL Rahul & Athiya Shetty: ಕೊರಗಜ್ಜನ ದರ್ಶನದ ಬೆನ್ನಲ್ಲೇ ₹20 ಕೋಟಿ ಮನೆ ಖರೀದಿಸಿದ ರಾಹುಲ್-ಆತಿಯಾ!
ಇದೇ ವರ್ಷದ ಕೊನೆಯಲ್ಲಿ ಐಪಿಎಲ್ ಮೆಗಾ ಹರಾಜು ನಡೆಯಲಿದ್ದು, ಟಿ20 ವಿಶ್ವಚಾಂಪಿಯನ್ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಭಾರತ ಟಿ20 ತಂಡದ ಹಾಲಿ ನಾಯಕ ಸೂರ್ಯಕುಮಾರ್ ಯಾದವ್ ಹೊಸ ತಂಡವನ್ನು ಸೇರಿಕೊಳ್ಳುವ ಉದ್ದೇಶದಿಂದ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ರೋಹಿತ್ ಮತ್ತು ಸೂರ್ಯ ಕುಮಾರ್ ಯಾದವ್ ಅವರಿಗೆ ಮತ್ತೆ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡುವ ಇಚ್ಛೆಯಿಲ್ಲ ಎನ್ನಲಾಗುತ್ತಿದೆ. ಇದೇ ಕಾರಣದಿಂದ ಇಬ್ಬರೂ ಮುಂಬೈ ಇಂಡಿಯನ್ಸ್ ತಂಡ ತೊರೆದು ಹೊಸ ತಂಡ ಸೇರಿಕೊಳ್ಳುವ ಲೆಕ್ಕಾಚಾರದಲ್ಲಿದ್ದಾರೆ. ರೋಹಿತ್ ಶರ್ಮಾ ಟಿ20 ವಿಶ್ವಕಪ್ ಗೆದ್ದ ನಾಯಕ. ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕ. ಹೀಗಾಗಿ ಈ ಇಬ್ಬರೂ ಆಟಗಾರರು ಐಪಿಎಲ್’ನಲ್ಲೂ ನಾಯಕತ್ವದ ಜವಾಬ್ದಾರಿಯ ನಿರೀಕ್ಷೆಯಲ್ಲಿದ್ದಾರೆ.
ಇದನ್ನೂ ಓದಿ : Kohli & Rohit: ಕೊಹ್ಲಿ-ರೋಹಿತ್ ನಿವೃತ್ತಿಯ ರಹಸ್ಯ ಬಯಲು ಮಾಡಿದ ಕೋಚ್ ಗಂಭೀರ್
ಲಕ್ನೋ ಸೂಪರ್ ಜಯಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಹೊಸ ನಾಯಕನ ಹುಡುಕಾಟದಲ್ಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕನ್ನಡಿಗ ಕೆ.ಎಲ್ ರಾಹುಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಸಿದ್ಧತೆಯಲ್ಲಿದೆ ಎಂದು ತಿಳಿದು ಬಂದಿದೆ.
Rohit Sharma and Suryakumar Yadav Leave Mumbai Indians For IPL 2025