Rohit Sharma : ಭಾರತ ಕ್ರಿಕೆಟ್ ತಂಡದ ನಾಯಕನಾಗಿರುವ ರೋಹಿತ್ ಶರ್ಮಾ ಕ್ರಿಕೆಟ್‌ನಿಂದಲೇ ದೂರವಾಗ್ತಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ಈ ನಡುವಲ್ಲೇ ಬಿಸಿಸಿಐ ರೋಹಿತ್ ಶರ್ಮಾಗೆ ಗುಡ್‌ನ್ಯೂಸ್ ಕೊಟ್ಟಿದೆ. ಮುಂದಿನ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನೆಡೆಸಲಿದ್ದಾರೆ.

ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂ ಮರುನಾಮಕರಣ ಸಮಾರಂಭದಲ್ಲಿ ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ಜಯ್‌ಶಾ, 2023 ರಲ್ಲಿ ಏಕದಿನ ವಿಶ್ವಕಪ್ ಅನ್ನು ನಾವು ಸೋತಿರಬಹುದು. ಆದರೆ ಸತತ 10 ಪಂದ್ಯಗಳಲ್ಲಿ ಗೆಲುವು ಕಾಣುವ ಮೂಲಕ ರೋಹಿತ್ ಶರ್ಮಾ ನೇತೃತ್ವದ ತಂಡ ಜನರ ಹೃದಯವನ್ನು ಗೆದ್ದಿದೆ. 2024 ರಲ್ಲಿ ರೋಹಿತ್ ಶರ್ಮಾ ನೇತೃತ್ವದಲ್ಲಿಯೇ ಭಾರತ ತಂಡ ಟಿ20 ವಿಶ್ವಕಪ್ ಗೆಲ್ಲಲಿದೆ ಎಂದು ಶಾ ಹೇಳಿದ್ದಾರೆ.
ಏಕದಿನ ವಿಶ್ವಕಪ್ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ತಂಡದಲ್ಲಿ ಸಾಕಷ್ಟು ಬದಲಾವಣೆಗಳು ನಡೆದಿತ್ತು. ಪ್ರಮುಖವಾಗಿ ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ಸೂರ್ಯ ಕುಮಾರ್ ಯಾದವ್ ತಂಡವನ್ನು ಮುನ್ನೆಡೆಸಿದ್ದರು. ಆದ್ರೆ ರೋಹಿತ್ ಶರ್ಮಾ ಇದೀಗ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಮೂಲಕ ವಾಪಾಸಾಗಿದ್ದಾರೆ. ಟೆಸ್ಟ್ ಪಂದ್ಯದಲ್ಲಿಯೂ ಭಾರತ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ.
ಇದನ್ನೂ ಓದಿ : 200, 200, 200…! ಟೆಸ್ಟ್ ಕ್ರಿಕೆಟ್‌ನಲ್ಲಿ ದಾಖಲೆಯ ಮೇಲೆ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೂರನೇ ಟೆಸ್ಟ್ ಪಂದ್ಯ ಆರಂಭದ ಮುನ್ನಾ ದಿನ ಜಯ್ ಶಾ ರೋಹಿತ್ ಶರ್ಮಾಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಕಂಬ್ಯಾಕ್ ಮಾಡಿದ ಬೆನ್ನಲ್ಲೇ ಭಾರತ ಟಿ20 ತಂಡದ ನಾಯಕರಾಗ್ತಾರೆ ಅನ್ನೋ ಮಾತುಗಳು ಕೇಳಿಬಂದಿದ್ದವು. ಆದ್ರೀಗ ಜಯ್ ಶಾ ಹಾರ್ದಿಕ್ ಪಾಂಡ್ಯ ಕನಸಿಗೆ ಕೊಳ್ಳಿ ಇಟ್ಟಿದ್ದಾರೆ.

2024 ರ ಜೂನ್ 2 ರಿಂದ ಟಿ20 ವಿಶ್ವಕಪ್ ಅಭಿಯಾನ ಆರಂಭವಾಗಲಿದೆ. ಅಮೇರಿಕಾ ಹಾಗೂ ವೆಸ್ಟ್ ಇಂಡಿಸ್‌ನಲ್ಲಿ ನಡೆಯಲಿರುವ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿಯೇ ಭಾರತ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ನಾಯಕ ರೋಹಿತ್ ಶರ್ಮ ಅಸ್ಥಿತ್ವದ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಹೊತ್ತಲ್ಲೇ ಬಿಸಿಸಿಐ ಭಾರತ ತಂಡದ ನಾಯಕತ್ವವನ್ನು ಅಧಿಕೃತಗೊಳಿಸಿದೆ.
ಇದನ್ನೂ ಓದಿ : IPL 2024: ಆರ್‌ಸಿಬಿ ತಂಡಕ್ಕೆ ರೋಹಿತ್ ಶರ್ಮಾ, ಸೂರ್ಯಕುಮಾರ್, ಜಸ್ಪ್ರೀತ್ ಬುಮ್ರಾ ?
ಟಿ 20 ವಿಶ್ವಕಪ್ 2024 ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ , ಅರ್ಷದೀಪ್ ಸಿಂಗ್.
ಇದನ್ನೂ ಓದಿ : ಭಾರತದಲ್ಲೇ ನಡೆಯಲಿದೆ ಐಪಿಎಲ್ 2024 : ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್
Rohit Sharma to captain Indian cricket team in T20 World Cup: Hardik Pandya’s dream shattered