ಕೊರೊನಾ ಹೋರಾಟಕ್ಕೆ ಸಾಥ್ ಕೊಟ್ಟ ಹಿಟ್ ಮ್ಯಾನ್

0

ಮುಂಬೈ : ಕೊರೊನಾ ಮಹಾಮಾರಿ ವಿಶ್ವದ ಜನರ ನಿದ್ದೆಗೆಡಿಸಿದ್ದು, ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಕೊರೊನಾ ವಿರುದ್ದದ ಹೋರಾಟಕ್ಕೆ ಜನರು ಬೆಂಬಲ ಸೂಚಿಸುತ್ತಿದ್ದಾರೆ.

ಕೊರೊನಾ ವಿರುದ್ದದ ಹೋರಾಟಕ್ಕೆ ಟೀಂ ಇಂಡಿಯಾದ ಆಟಗಾರ, ಹಿಟ್ ಮ್ಯಾನ್ ರೋಹಿತ್ ಶರ್ಮಾ ಕೂಡ ಬೆಂಬಲವಾಗಿ ನಿಂತಿದ್ದಾರೆ.

32 ವರ್ಷದ ಬಲಗೈ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ದೇಶವನ್ನು ಮೊದಲಿನ ಸ್ಥಿತಿಗೆ ತರುವ ಜವಾಬ್ದಾರಿಯನ್ನು ಜನರ ಮುಂದೆ ಬಿಚ್ಚಿಟ್ಟಿದ್ದಾರೆ. ನಮ್ಮ ನಾಯಕರು ದೇಶವನ್ನು ಮರಳಿ ಕಟ್ಟಲು ಬೆಂಬಲಕ್ಕೆ ನಿಲ್ಲಬೇಕು ಎಂದಿದ್ದಾರೆ.

ಕೊರೊನಾ ವೈರಸ್ ಸೋಂಕು ವಿರುದ್ಧದ ಹೋರಾಟವನ್ನು ಬೆಂಬಲಿಸಿರುವ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮ ಮಂಗಳವಾರ 80 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

ಪತ್ನಿ ಹಾಗೂ ಮಗನೊಂದಿಗೆ ಮನೆಯಲ್ಲಿ ಕಾಲ ಕಳೆಯುತ್ತಿರುವ ರೋಹಿತ್ ಶರ್ಮಾ ಪಿಎಂ-ಕೇರ್ಸ್ ನಿಧಿಗೆ 45 ಲಕ್ಷ ರೂ., ಮಹಾರಾಷ್ಟ್ರ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂ. ಜೊಮಾಟೊ ಫೀಡಿಂಗ್ ಇಂಡಿಯಾಗೆ 5 ಲಕ್ಷ ರೂ. ಹಾಗೂ ಬಿದಿ ನಾಯಿಗಳ ಕಲ್ಯಾಣಕ್ಕೆ 5 ಲಕ್ಷ ರೂ. ನೆರವು ನೀಡಿರುವುದಾಗಿ ಹೇಳಿದ್ದಾರೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಯ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ಕೂಡ ಕೊರೊನಾ ವಿರುದ್ದದ ಹೋರಾಟಕ್ಕೆ ಆರ್ಥಿಕ ನೆರವು ನೀಡಿದ್ದಾರೆ. ಇದೀಗ ರೋಹಿತ್ ಶರ್ಮಾ 80 ಲಕ್ಷ ನೆರವು ನೀಡಿರುವುದು ಕ್ರಿಕೆಟ್ ಅಭಿಮಾನಿಗಳಿಗೆ ಖುಷಿಯನ್ನು ನೀಡಿದೆ.

Leave A Reply

Your email address will not be published.