ಭಾರತ ತಂಡದಲ್ಲಿ ಯುವ ಆಟಗಾರ ಸಂಜು ಸ್ಯಾಮ್ಸನ್ (Sanju Samson) ಅತ್ಯಂತ ದುರದೃಷ್ಟಕರ ಆಟಗಾರ. ಉತ್ತಮ ಪ್ರತಿಭೆ ಹೊಂದಿದ್ದರೂ ಕೂಡ ಟೀಂ ಇಂಡಿಯಾದಲ್ಲಿ ಆಡಲು ಅವಕಾಶ ಸಿಕ್ಕಿದ್ದು ಮಾತ್ರ ತೀರಾ ಕಡಿಮೆ. ಸದ್ಯ ಏಷ್ಯಾ ಕಪ್‌ಗೆ ಬ್ಯಾಕಪ್ ಆಟಗಾರನಾಗಿ ಆಯ್ಕೆಯಾಗಿದ್ದಾರೆ, ಆದ್ರೆ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
ರಾಜಸ್ಥಾನ ರಾಯಲ್ಸ್ ನಾಯಕ ಹಾಗೂ ಟೀಂ ಇಂಡಿಯಾದ ( Indian Cricket Team) ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಈ ಬಾರಿಯ ಏಕದಿನ ವಿಶ್ವಕಪ್‌ನಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಆದರೆ ಮೀಸಲು ಆಟಗಾರನಾಗಿಯಷ್ಟೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಮಾತ್ರವೇ ಸಂಜು ಸ್ಯಾಮ್ಸನ್ ಇದುವರೆಗೂ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ವೃತ್ತಿ ಜೀವನದಲ್ಲಿ ಸಂಜು ಸ್ಯಾಮ್ಸನ್ ಸತತ 10 ಪಂದ್ಯಗಳನ್ನು ಆಡಿಲ್ಲ.
ಏಷ್ಯಾ ಕಪ್ 2023 ರ ಬ್ಯಾಕಪ್ ಆಟಗಾರನಾಗಿ ಆರಂಭದಲ್ಲಿ ಸಂಜು ಆಯ್ಕೆಯಾಗಿದ್ದರು. ಆದರೆ ಹೇಗಾದರೂ ಅವರನ್ನು ಮನೆಗೆ ಕಳುಹಿಸಲಾಯಿತು. 2023ರ ODI ವಿಶ್ವಕಪ್‌ಗೆ ಸಂಜು ಸ್ಯಾಮ್ಸನ್ ಆಯ್ಕೆಯಾಗಿರಲಿಲ್ಲ. ಇದೀಗ ಏಕದಿನ ಕ್ರಿಕೆಟ್‌ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಸೂರ್ಯಕುಮಾರ್ ಯಾದವ್ ಅವರನ್ನು ವಿಶ್ವಕಪ್ ಆಉಕೆ ಮಾಡಿರುವ ಕುರಿತು ಸ್ಯಾಮ್ಸನ್ ಅಭಿಮಾನಿಗಳು ಬಿಸಿಸಿಐ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಿಶ್ವಕಪ್ ತಂಡಕ್ಕೆ ಆಯ್ಕೆಯಾಗದಿರುವ ಸಂಜು ಸ್ಯಾಮ್ಸನ್ ಸದ್ಯ ದುಬೈನಲ್ಲಿದ್ದಾರೆ.

ಸಂಜು ಸ್ಯಾಮ್ಸನ್ ಇತ್ತೀಚಿಗಷ್ಟೇ ತಾವು ಗಾಲ್ಪ್ ಆಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. ಈ ವಿಡಿಯೋ ನೋಡಿರುವ ಅಭಿಮಾನಿಗಳು ಭಿನ್ನ, ವಿಭಿನ್ನ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಿಲ್ಲ ಅನ್ನುವ ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಕ್ರಿಕೆಟಿನ ಸಂಜು ಸ್ಯಾಮ್ಸನ್ ವಿರುದ್ಧದ ತಾರತಮ್ಯ ಇದೇ ರೀತಿಯಲ್ಲಿ ಮುಂದುವರಿದರೆ, ಅವರು ಶೀಘ್ರದಲ್ಲೇ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಬಹುದು ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಹಲವರು ಸಂಜು ಸ್ಯಾಮ್ಸನ್ ಅವರ ಹೊಸ ವೃತ್ತಿಜೀವನ ಚೆನ್ನಾಗಿದೆ ಎಂದಿದ್ದಾರೆ.
ಸಂಜು ಸ್ಯಾಮ್ಸನ್ ಬಗ್ಗೆ ಬಿಸಿಸಿಐ ವರ್ತನೆ ಸರಿಯಲ್ಲ. ಸಂಜು ಸ್ಯಾಮ್ಸನ್ ಹೊರತುಪಡಿಸಿ ಶ್ರೇಯಸ್ ಅಯ್ಯರ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್ ಎಲ್ಲರಿಗೂ ಅವಕಾಶ ಸಿಕ್ಕಿದೆ. ರಾಹುಲ್ ದ್ರಾವಿಡ್ ಶಿಷ್ಯನಿಗೆ ಇಂತಹ ಸ್ಥಿತಿ ಬಂದಿದೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.
ಇದನ್ನೂ ಓದಿ : Karnataka Cricket: ರಾಜ್ಯ ಕ್ರಿಕೆಟ್’ನಲ್ಲಿ ಕಡೆಗಣಿಸಿದವರಿಗೆ ಆಟದಿಂದಲೇ ಉತ್ತರಿಸುತ್ತಿದ್ದಾರೆ ತ್ರಿಮೂರ್ತಿಗಳು
ಏಷ್ಯಾ ಕಪ್ 2023ಕ್ಕೆ ಭಾರತ ತಂಡ :
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್ , ಮೊಹಮ್ಮದ್ ಸಿರಾಜ್ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ.
ಐಸಿಸಿ ವಿಶ್ವಕಪ್ 2023: ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಅಕ್ಸರ್ ಕಿಶನ್ ಪಟೇ ಪಟೇಲ್, ಸೂರ್ಯಕುಮಾರ್ ಯಾದವ್.
ಇದನ್ನೂ ಓದಿ : ಕಿಂಗ್ ಈಸ್ ಬ್ಯಾಕ್ :77 ಶತಕ, 13 ಸಾವಿರ ರನ್ : ವಿಶ್ವದಾಖಲೆ ಬರೆದ ವಿರಾಟ್ ಕೊಹ್ಲಿ
ಐಸಿಸಿ ವಿಶ್ವಕಪ್ 2023: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ (ICC Cricket World Cup 2023) :
ಸೆಪ್ಟೆಂಬರ್ 29
ಬಾಂಗ್ಲಾದೇಶ Vs ಶ್ರೀಲಂಕಾ (ಗುವಾಹಟಿ, ಮಧ್ಯಾಹ್ನ 2ಕ್ಕೆ)
ದಕ್ಷಿಣ ಆಫ್ರಿಕಾ Vs ಅಫ್ಘಾನಿಸ್ತಾನ (ತಿರುವನಂತಪುರಂ, ಮಧ್ಯಾಹ್ನ 2ಕ್ಕೆ)
ನ್ಯೂಜಿಲೆಂಡ್ Vs ಪಾಕಿಸ್ತಾನ (ಹೈದರಾಬಾದ್, ಮಧ್ಯಾಹ್ನ 2ಕ್ಕೆ)
ಸೆಪ್ಟೆಂಬರ್ 30
ಭಾರತ Vs ಇಂಗ್ಲೆಂಡ್ (ಗುವಾಹಟಿ, ಮಧ್ಯಾಹ್ನ 2ಕ್ಕೆ)
ಆಸ್ಟ್ರೇಲಿಯಾ Vs ನೆದರ್ಲೆಂಡ್ಸ್ (ತಿರುವನಂತಪುರಂ, ಮಧ್ಯಾಹ್ನ 2ಕ್ಕೆ)
ಇದನ್ನೂ ಓದಿ : ಏಷ್ಯಾ ಕಪ್ 2023: ಭಾರತ Vs ಪಾಕಿಸ್ತಾನ ಪಂದ್ಯ, ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ರೋಹಿತ್ ಶರ್ಮಾ
ಅಕ್ಟೋಬರ್ 3
ಅಫ್ಘಾನಿಸ್ತಾನ Vs ಶ್ರೀಲಂಕಾ (ಗುವಾಹಟಿ, ಮಧ್ಯಾಹ್ನ 2ಕ್ಕೆ)
ಭಾರತ Vs ನೆದರ್ಲೆಂಡ್ಸ್ (ತಿರುವನಂತಪುರಂ, ಮಧ್ಯಾಹ್ನ 2ಕ್ಕೆ)
ಆಸ್ಟ್ರೇಲಿಯಾ Vs ಪಾಕಿಸ್ತಾನ (ಹೈದಬಾದಾದ್, ಮಧ್ಯಾಹ್ನ 2ಕ್ಕೆ)
ವಿಶ್ವಕಪ್’ಗೆ ಆತಿಥ್ಯ ವಹಿಸಲಿರುವ ನಗರಗಳು:
ಬೆಂಗಳೂರು, ದೆಹಲಿ, ಮುಂಬೈ, ಅಹ್ಮದಾಬಾದ್, ಪುಣೆ, ಲಕ್ನೋ, ಹೈದರಾಬಾದ್, ಧರ್ಮಶಾಲಾ, ಚೆನ್ನೈ, ಕೋಲ್ಕತಾ.
ಐಸಿಸಿ ವಿಶ್ವಕಪ್ 2023: ಟೂರ್ನಿಯಲ್ಲಿ ಆಡಲಿರುವ ತಂಡಗಳು
ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್, ಶ್ರೀಲಂಕಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ನೆದರ್ಲೆಂಡ್ಸ್.

ಐಸಿಸಿ ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ (ICC World Cup 2023 Schedule)
ಅಕ್ಟೋಬರ್ 5: ಇಂಗ್ಲೆಂಡ್ Vs ನ್ಯೂಜಿಲೆಂಡ್ (ಅಹ್ಮದಾಬಾದ್)
ಅಕ್ಟೋಬರ್ 6: ಪಾಕಿಸ್ತಾನ Vs ನೆದರ್ಲೆಂಡ್ಸ್ (ಹೈದರಾಬಾದ್)
ಅಕ್ಟೋಬರ್ 7: ಬಾಂಗ್ಲಾದೇಶ Vs ಅಫ್ಘಾನಿಸ್ತಾನ (ಧರ್ಮಶಾಲಾ)
ಅಕ್ಟೋಬರ್ 7: ದಕ್ಷಿಣ ಆಫ್ರಿಕಾ Vs ಶ್ರೀಲಂಕಾ (ದೆಹಲಿ)
ಅಕ್ಟೋಬರ್ 8: ಭಾರತ Vs ಆಸ್ಟ್ರೇಲಿಯಾ (ಚೆನ್ನೈ)
ಅಕ್ಟೋಬರ್ 9: ನ್ಯೂಜಿಲೆಂಡ್ Vs ನೆದರ್ಲೆಂಡ್ಸ್ (ಹೈದರಾಬಾದ್)
ಅಕ್ಟೋಬರ್ 10: ಇಂಗ್ಲೆಂಡ್ Vs ಬಾಂಗ್ಲಾದೇಶ (ಧರ್ಮಶಾಲಾ)
ಅಕ್ಟೋಬರ್ 11: ಭಾರತ Vs ಅಫ್ಘಾನಿಸ್ತಾನ (ದೆಹಲಿ)
ಅಕ್ಟೋಬರ್ 12: ಪಾಕಿಸ್ತಾನ Vs ಶ್ರೀಲಂಕಾ (ಹೈದರಾಬಾದ್)
ಅಕ್ಟೋಬರ್ 13: ಆಸ್ಟ್ರೇಲಿಯಾ Vs ದಕ್ಷಿಣ ಆಫ್ರಿಕಾ (ಲಕ್ನೋ)
ಅಕ್ಟೋಬರ್ 14: ಇಂಗ್ಲೆಂಡ್ Vs ಅಫ್ಘಾನಿಸ್ತಾನ (ದೆಹಲಿ)
ಅಕ್ಟೋಬರ್ 14: ಬಾಂಗ್ಲಾದೇಶ Vs ನ್ಯೂಜಿಲೆಂಡ್ (ಚೆನ್ನೈ)
ಅಕ್ಟೋಬರ್ 15: ಭಾರತ Vs ಪಾಕಿಸ್ತಾನ (ಅಹ್ಮದಾಬಾದ್)
ಅಕ್ಟೋಬರ್ 16: ಆಸ್ಟ್ರೇಲಿಯಾ Vs ಶ್ರೀಲಂಕಾ (ಲಕ್ನೋ)
ಅಕ್ಟೋಬರ್ 17: ದಕ್ಷಿಣ ಆಫ್ರಿಕಾ Vs ನೆದರ್ಲೆಂಡ್ಸ್ (ಧರ್ಮಶಾಲಾ)
ಅಕ್ಟೋಬರ್ 18: ಅಫ್ಘಾನಿಸ್ತಾನ Vs ನ್ಯೂಜಿಲೆಂಡ್ (ಚೆನ್ನೈ)
ಅಕ್ಟೋಬರ್ 19: ಭಾರತ Vs ಬಾಂಗ್ಲಾದೇಶ (ಪುಣೆ)
ಅಕ್ಟೋಬರ್ 20: ಆಸ್ಟ್ರೇಲಿಯಾ Vs ಪಾಕಿಸ್ತಾನ (ಬೆಂಗಳೂರು)
ಅಕ್ಟೋಬರ್ 21: ಇಂಗ್ಲೆಂಡ್ Vs ದಕ್ಷಿಣ ಆಫ್ರಿಕಾ (ಮುಂಬೈ)
ಅಕ್ಟೋಬರ್ 21: ನೆದರ್ಲೆಂಡ್ಸ್ Vs ಶ್ರೀಲಂಕಾ (ಲಕ್ನೋ)
ಅಕ್ಟೋಬರ್ 22: ಭಾರತ Vs ನ್ಯೂಜಿಲೆಂಡ್ (ಧರ್ಮಶಾಲಾ)
ಅಕ್ಟೋಬರ್ 23: ಪಾಕಿಸ್ತಾನ Vs ಅಫ್ಘಾನಿಸ್ತಾನ (ಚೆನ್ನೈ)
ಅಕ್ಟೋಬರ್ 24: ದಕ್ಷಿಣ ಆಫ್ರಿಕಾ Vs ಬಾಂಗ್ಲಾದೇಶ (ಮುಂಬೈ)
ಅಕ್ಟೋಬರ್ 25: ಆಸ್ಟ್ರೇಲಿಯಾ Vs ನೆದರ್ಲೆಂಡ್ಸ್ (ದೆಹಲಿ)
ಅಕ್ಟೋಬರ್ 26: ಇಂಗ್ಲೆಂಡ್ Vs ಶ್ರೀಲಂಕಾ (ಬೆಂಗಳೂರು)
ಅಕ್ಟೋಬರ್ 27: ಪಾಕಿಸ್ತಾನ Vs ದಕ್ಷಿಣ ಆಫ್ರಿಕಾ (ಚೆನ್ನೈ)
ಅಕ್ಟೋಬರ್ 28: ನೆದರ್ಲೆಂಡ್ಸ್ Vs ಬಾಂಗ್ಲಾದೇಶ (ಕೋಲ್ಕತಾ)
ಅಕ್ಟೋಬರ್ 28: ಆಸ್ಟ್ರೇಲಿಯಾ Vs ನ್ಯೂಜಿಲೆಂಡ್ (ಧರ್ಮಶಾಲಾ)
ಅಕ್ಟೋಬರ್ 29: ಭಾರತ Vs ಇಂಗ್ಲೆಂಡ್ (ಲಕ್ನೋ)
ಅಕ್ಟೋಬರ್ 30: ಅಫ್ಘಾನಿಸ್ತಾನ Vs ಶ್ರೀಲಂಕಾ (ಪುಣೆ)
ಅಕ್ಟೋಬರ್ 31: ಪಾಕಿಸ್ತಾನ Vs ಬಾಂಗ್ಲಾದೇಶ (ಕೋಲ್ಕತಾ)
ನವೆಂಬರ್ 1: ದಕ್ಷಿಣ ಆಫ್ರಿಕಾ Vs ನ್ಯೂಜಿಲೆಂಡ್ (ಪುಣೆ)
ನವೆಂಬರ್ 2: ಭಾರತ Vs ಶ್ರೀಲಂಕಾ (ಮುಂಬೈ)
ನವೆಂಬರ್ 3: ನೆದರ್ಲೆಂಡ್ಸ್ Vs ಅಫ್ಘಾನಿಸ್ತಾನ (ಲಕ್ನೋ)
ನವೆಂಬರ್ 4: ಇಂಗ್ಲೆಂಡ್ Vs ಆಸ್ಟ್ರೇಲಿಯಾ (ಅಹ್ಮದಾಬಾದ್)
ಇದನ್ನೂ ಓದಿ : ಏಕದಿನ ವಿಶ್ವಕಪ್‌ಗೆ ಭಾರತ ತಂಡ ಪ್ರಕಟ : ಕೆಎಲ್ ರಾಹುಲ್ ಎಂಟ್ರಿ, ಖ್ಯಾತ ಆಟಗಾರರು ಔಟ್
ನವೆಂಬರ್ 4: ಪಾಕಿಸ್ತಾನ Vs ನ್ಯೂಜಿಲೆಂಡ್ (ಬೆಂಗಳೂರು)
ನವೆಂಬರ್ 5: ದಕ್ಷಿಣ ಆಫ್ರಿಕಾ Vs ಭಾರತ (ಕೋಲ್ಕತಾ)
ನವೆಂಬರ್ 6: ಬಾಂಗ್ಲಾದೇಶ Vs ಶ್ರೀಲಂಕಾ (ದೆಹಲಿ)
ನವೆಂಬರ್ 7: ಆಸ್ಟ್ರೇಲಿಯಾ Vs ಅಫ್ಘಾನಿಸ್ತಾನ (ಮುಂಬೈ)
ನವೆಂಬರ್ 8: ಇಂಗ್ಲೆಂಡ್ Vs ನೆದರ್ಲೆಂಡ್ಸ್ (ಪುಣೆ)
ನವೆಂಬರ್ 9: ನ್ಯೂಜಿಲೆಂಡ್ Vs ಶ್ರೀಲಂಕಾ (ಬೆಂಗಳೂರು)
ನವೆಂಬರ್ 10: ದಕ್ಷಿಣ ಆಫ್ರಿಕಾ Vs ಅಫ್ಘಾನಿಸ್ತಾನ (ಅಹ್ಮದಾಬಾದ್)
ನವೆಂಬರ್ 11: ಭಾರತ Vs ನೆದರ್ಲೆಂಡ್ಸ್ (ಬೆಂಗಳೂರು)
ನವೆಂಬರ್ 12: ಇಂಗ್ಲೆಂಡ್ Vs ಪಾಕಿಸ್ತಾನ (ಕೋಲ್ಕತಾ)
ನವೆಂಬರ್ 12: ಆಸ್ಟ್ರೇಲಿಯಾ Vs ಬಾಂಗ್ಲಾದೇಶ (ಪುಣೆ)
ನವೆಂಬರ್ 15: ಸೆಮಿಫೈನಲ್-1 (ಮುಂಬೈ)
ನವೆಂಬರ್ 16: ಸೆಮಿಫೈನಲ್-2 (ಕೋಲ್ಕತಾ)
ನವೆಂಬರ್ 19: ಫೈನಲ್ (ಅಹ್ಮದಾಬಾದ್)
Sanju Samson Retired From International Cricket Exclusive Photo Viral