ವಿಶ್ವಕಪ್ 2023 (ICC Cricket World Cup 2023) ರಲ್ಲಿ ಪಾಕಿಸ್ತಾನ ಬಾಂಗ್ಲಾದೇಶ (India vs Pakistan) ತಂಡದ ವಿರುದ್ದ ಸೆಣೆಸಾಡುತ್ತಿದೆ. ವಿಶ್ವಕಪ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಪಾಕಿಸ್ತಾನಕ್ಕೆ ವೇಗದ ಬೌಲರ್ ಶಾಹೀನ್ ಆಫ್ರಿದಿ (Shaheen Shah Afridi) ಬಾಂಗ್ಲಾ ವಿರುದ್ದ ಭರ್ಜರಿ ಬೌಲಿಂಗ್ ದಾಳಿ ನಡೆಸಿದ್ದು, ಶಾಹೀನ್ ಅಫ್ರಿದಿ 51ನೇ ಪಂದ್ಯದಲ್ಲಿ 100 ವಿಕೆಟ್ ಮೈಲುಗಲು ಸೃಷ್ಟಿಸಿದ್ದಾರೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ವಿರುದ್ದ ಪಂದ್ಯದಲ್ಲಿ ಪಾಕಿಸ್ತಾನದ ಪ್ರಮುಖ ಬೌಲರ್ ಶಾಹೀನ್ ಶಾ ಆಫ್ರಿದಿ ಹೊಸ ದಾಖಲೆ ಬರೆದಿದ್ದಾರೆ. ಬಾಂಗ್ಲಾದೇಶ ತಂಡದ ಪ್ರಮುಖ ಇಬ್ಬರು ಆಟಗಾರರನ್ನು ಬಲಿ ಪಡೆಯುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 100 ವಿಕೆಟ್ ಪೂರೈಸಿದ ಆಟಗಾರ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ : ಐಪಿಎಲ್ 2024 : ಆರ್‌ಸಿಬಿ ತಂಡಕ್ಕೆ ಮತ್ತೆ ವಿರಾಟ್ ಕೊಹ್ಲಿ ನಾಯಕ
ಪಾಕಿಸ್ತಾನ ದಂತಕಥೆ ಆಫ್‌ಸ್ಪಿನ್ನರ್ ಸಕ್ಲೇನ್ ಮುಷ್ತಾಕ್ ಅವರು ಈ ಹಿಂದೆ 53ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದರು. ಆದ್ರೆ ಇದೀಗ ಶಾಹೀನ್ ಶಾ ಆಫ್ರಿದಿ 51ನೇ ಏಕದಿನ ಪಂದ್ಯದಲ್ಲಿ 100 ವಿಕೆಟ್ ಪಡೆಯುವ ಮೂಲಕ ಸಕ್ಲೆನ್ ಮುಷ್ತಾಕ್ ಅವರನ್ನು ಹಿಂದಿಕ್ಕಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದಿರುವ ಪಾಕಿಸ್ತಾನ ಬೌಲರ್‌ಗಳ ಪೈಕಿ ವಾಸೀಂ ಅಕ್ರಂ ಅಗ್ರಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿದ್ದ ಮೊಹಮ್ಮದ್ ಅಮೀರ್ ಅವರನ್ನು ಶಾಹೀನ್ ಶಾ ಆಫ್ರಿದಿ ಹಿಂದಿಕ್ಕಿದ್ದಾರೆ.
ಇದನ್ನೂ ಓದಿ : ಭಾರತಕ್ಕೆ ಸೋಲೇ ಇಲ್ಲ, ಸತತ 6ನೇ ಗೆಲುವು : ವಿಶ್ವಕಪ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದ ಇಂಗ್ಲೆಂಡ್
ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ವಿಶ್ವಕಪ್‌ನಲ್ಲಿ ಇಂದಿನ ಪಂದ್ಯ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳಿಗೆ ಮಹತ್ವದ್ದಾಗಿದೆ. ಎರಡೂ ತಂಡಗಳು ಇದೀಗ ಗೆಲ್ಲಲೇ ಬೇಕಾದ ಪರಿಸ್ಥಿತಿಯಲ್ಲಿವೆ.

ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡವು 7 ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 9 ನೇ ಸ್ಥಾನದಲ್ಲಿದೆ. ಜೊತೆಗೆ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ಅಪ್ಘಾನಿಸ್ತಾನ ಹಾಗೂ ನೆದರ್‌ಲ್ಯಾಂಡ್ ತಂಡಗಳು ಉತ್ತಮ ಆಟದ ಪ್ರದರ್ಶನ ನೀಡಿದ್ದು, ಬಲಾಢ್ಯ ತಂಡಗಳಿಗೂ ಕೂಡ ಸೋಲಿನ ರುಚಿ ತೋರಿಸಿವೆ.
ಇದನ್ನೂ ಓದಿ : 2 ಎಸೆತ 21 ರನ್ ! ವಿಶ್ವಕಪ್‌ನಲ್ಲಿ ವಿಶ್ವದಾಖಲೆ ಬರೆದ ಟ್ರಾವೆಸ್ ಹೆಡ್
ಪಾಕಿಸ್ತಾನ (ಪ್ಲೇಯಿಂಗ್ XI): ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಬಾಬರ್ ಅಜಮ್ (C), ಮೊಹಮ್ಮದ್ ರಿಜ್ವಾನ್ (WK), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾಹೀನ್ ಅಫ್ರಿದಿ, ಉಸಾಮಾ ಮಿರ್, ಮೊಹಮ್ಮದ್ ವಾಸಿಂ ಜೂನಿಯರ್, ಹ್ಯಾರಿಸ್ ರೌಫ್
ಬಾಂಗ್ಲಾದೇಶ (ಪ್ಲೇಯಿಂಗ್ XI): ಲಿಟ್ಟನ್ ದಾಸ್, ತಂಝಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (C), ಮುಶ್ಫಿಕರ್ ರಹೀಮ್ (WK), ಮಹಮ್ಮದುಲ್ಲಾ, ತೌಹಿದ್ ಹೃದಯೊಯ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್, ಶೋರಿಫುಲ್ ಇಸ್ಲಾಂ
Shaheen shah Afridi Fastest Pakistani Bowler to Reach 100 ODI Wickets, Pakistan national cricket team Eden Gardens ICC Cricket World Cup