ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ (SA vs India Test) ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (Captain Virat Kohli) ಶತಕ ಬಾರಿಸುವ ನಿರೀಕ್ಷೆ ಇದೆ ಎಂದು ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ (Harbhajan Singh) ಭರವಸೆ ವ್ಯಕ್ತಪಡಿಸಿದ್ದಾರೆ.
ಮೂರನೇ ಟೆಸ್ಟ್ ಪಂದ್ಯ ಇಂದು ಕೇಪ್‌ಟೌನ್‌ನಲ್ಲಿ ಆರಂಭಗೊಳ್ಳುತ್ತಿದ್ದು, ಭಾರತ ತಂಡವು ಇತಿಹಾಸ ನಿರ್ಮಿಸುವ ತವಕದಲ್ಲಿದೆ. ಈ ಪಂದ್ಯವನ್ನು ಗೆದ್ದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಇದೇ ಮೊದಲ ಬಾರಿ ಸರಣಿ ಗೆದ್ದ ಇತಿಹಾಸವನ್ನು ಭಾರತ ನಿರ್ಮಿಸಲಿದೆ.
ಈ ಮಧ್ಯೆ ನಾಯಕ ವಿರಾಟ್ ಕೊಹ್ಲಿ ಅವರ ಕಳಪೆ ಫಾರ್ಮ್ ಭಾರತವನ್ನು ಚಿಂತೆಗೀಡುಮಾಡಿದೆ. 2019ರ ಬಳಿಕ ಈವರೆಗೆ ವಿರಾಟ್ ಕೊಹ್ಲಿ ಅವರ ಬ್ಯಾಟಿಂದ ಒಂದೇ ಒಂದು ಶತಕ ದಾಖಲಾಗಿಲ್ಲ. 2019ರ ನವೆಂಬರ್‌ನಲ್ಲಿ ಅವರು ಬಾಂಗ್ಲಾದೇಶ ವಿರುದ್ಧ ಕೋಲ್ಕತ್ತದಲ್ಲಿ ಶತಕ ಬಾರಿಸಿದ್ದರು.
ಇದನ್ನೂ ಓದಿ: Rahul Dravid Birthday : ರಾಹುಲ್ ದ್ರಾವಿಡ್‌ಗೆ 49ನೇ ಜನ್ಮದಿನ, ಶುಭಾಶಯಗಳ ಮಹಾಪೂರ
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಆಡಿದ ವಿರಾಟ್ ಕೊಹ್ಲಿ ಹೆಚ್ಚು ರನ್ ಗಳಿಸಿರಲಿಲ್ಲ. ಎರಡನೇ ಪಂದ್ಯದಲ್ಲಿ ಬೆನ್ನುನೋವಿನ ಕಾರಣ ಆಡಿರಲಿಲ್ಲ. ಇದೀಗ ಮೂರನೇ ಪಂದ್ಯದಲ್ಲಿ ಆಡಲಿದ್ದು, ಅವರಿಂದ ಉತ್ತಮ ಬ್ಯಾಟಿಂಗ್ ನಿರೀಕ್ಷಿಸಬಹುದು ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
ಯುಟ್ಯೂಬ್ ಚಾನೆಲ್ ಒಂದರಲ್ಲಿ ಮಾತನಾಡಿದರು ಅವರು, ಈ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಂಡಕ್ಕೆ ಮರಳಲಿದ್ದಾರೆ. ಅವರು ಈ ಪಂದ್ಯದಲ್ಲಿ ಸುದೀರ್ಘಾವಧಿ ಬಳಿಕ ಮತ್ತೆ ಶತಕ ಬಾರಿಸಲಿ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದ್ದಾರೆ.
ಅಜಿಂಕ್ಯಾ ರಹಾನೆ ಮತ್ತು ಚೇತೇಶ್ವರ ಪೂಜಾರ ಕೂಡ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದಾರೆ. ಭಾರತ ಇತಿಹಾಸ ನಿರ್ಮಿಸಲಿದೆ ಎಂದು ಹರ್ಭಜನ್ ಆಶಯ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮುನ್ನ, ಪಂದ್ಯಪೂರ್ವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: Team India : ಶಾರ್ದೂಲ್ ಠಾಕೂರ್, ವಿರಾಟ್ ಕೊಯ್ಲಿ ಆಕರ್ಷಕ ಅರ್ಧ ಶತಕ
‘ನನ್ನ ಫಾರ್ಮ್ ಬಗ್ಗೆ ಜನ ಮಾತನಾಡಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ನನ್ನ ವೃತ್ತಿ ಜೀವನದಲ್ಲಿ ಹಲವು ಬಾರಿ ಇಂಥ ಟೀಕೆಗಳನ್ನು ಕೇಳಿದ್ದೇನೆ. 2014ರ ಇಂಗ್ಲೆಂಡ್ ಪ್ರವಾಸದ ವೇಳೆ ಇದೇ ಅನುಭವವಾಗಿತ್ತು. ಹೊರಗಡೆ ಪ್ರಪಂಚ ನನ್ನ ಬಗ್ಗೆ ಏನು ಹೇಳುತ್ತಿದೆ ಎಂಬುದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ತಂಡಕ್ಕಾಗಿ ಸದಾ ಉತ್ತಮವಾಗಿ ಆಡುವ ಬಗ್ಗೆ ಗಮನಹರಿಸುತ್ತೇನೆ’ ಎಂದು ಕೊಹ್ಲಿ ಹೇಳಿದ್ದಾರೆ.
(South Africa vs India 3rd test Harbhajan Singh Gives Big Statement On Virat Kohli Ahead Of Series Decider)