ಮುಂಬೈ : T20 ವಿಶ್ವಕಪ್‌ನಲ್ಲಿ ಭಾರತ ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಈ ನಡುವಲ್ಲೇ ವಿಶ್ವಕಪ್ ವಿಜೇತ ತಂಡ ಆಟಗಾರರಾಗಿದ್ದ ಯುವರಾಜ್ ಸಿಂಗ್ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ ನಿವೃತ್ತಿಯಿಂದ ಹೊರ ಬರುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಮುಂದಿನ ವರ್ಷ ಫೆಬ್ರವರಿಯಿಂದಲೇ ಮೈದಾನಕ್ಕೆ ಇಳಿಯುವುದಾಗಿ ಘೋಷಿಸಿಕೊಂಡಿದ್ದಾರೆ.
ವಿಶ್ವಕಪ್ ನಲ್ಲಿ ಭಾರತದ ಆಟಗಾರರು ವೈಫಲ್ಯ ಅನುಭವಿಸುತ್ತಿದ್ದಾರೆ. ಈ ನಡುವಲ್ಲೇ ಯುವರಾಜ್ ಸಿಂಗ್ ಟೀಂ ಇಂಡಿಯಾಕ್ಕೆ ವಾಪಾಸಾಗುವ ಕುರಿತು ಸಾಕಷ್ಟು ಸಂದೇಶಗಳು ಬರುತ್ತಿವೆ ಎಂದು ಯುವರಾಜ್ ಸಿಂಗ್ ತನ್ನ ಇನ್‌ಸ್ಟಾ ಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಪಾಕಿಸ್ತಾನ, ನ್ಯೂಜಿಲೆಂಡ್ ವಿರುದ್ದ ಭಾರತದ ಸೋಲನ್ನು ಅಭಿಮಾನಿಗಳಿಂದ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಯುವಿ ಮತ್ತೆ ಕ್ರಿಕೆಟ್‌ಗೆ ಮರಳಬೇಕೆಂದು ಆಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ: T20 World Cup : ಭಾರತಕ್ಕೆ ಸತತ ಸೋಲು : ಟ್ರೋಫಿ ಗೆಲ್ಲುವ ಕನಸು ನುಚ್ಚುನೂರು
2022 ರ ಫೆಬ್ರವರಿ ತಿಂಗಳಿನಲ್ಲಿ ‘ಸಾರ್ವಜನಿಕ ಬೇಡಿಕೆಯ ಮೇರೆಗೆ’ ಕ್ರಿಕೆಟ್ ಗೆ ಮರಳುವುದಾಗಿ ಯುವರಾಜ್ ಸೋಮವಾರ ರಾತ್ರಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ತಿಳಿಸಿದ್ದಾರೆ. ಅಲ್ಲದೇ ಯುವರಾಜ್ ಸಿಂಗ್ ಅವರು ತಮ್ಮ ಕೊನೆಯ ಅಂತರರಾಷ್ಟ್ರೀಯ ಟನ್‌ನ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ .
ಯುವರಾಜ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ‘ದೇವರು ನಿಮ್ಮ ಭವಿಷ್ಯವನ್ನು ನಿರ್ಧರಿಸುತ್ತಾನೆ. ಸಾರ್ವಜನಿಕ ಬೇಡಿಕೆಯ ಮೇರೆಗೆ ನಾನು ಫೆಬ್ರವರಿಯಲ್ಲಿ ಆಶಾದಾಯಕವಾಗಿ ಪಿಚ್‌ಗೆ ಹಿಂತಿರುಗುತ್ತೇನೆ. ಈ ಭಾವನೆ ಏನೂ ಅಲ್ಲ. ನಿಮ್ಮ ಪ್ರೀತಿ ಮತ್ತು ಶುಭಾಶಯಗಳಿಗೆ ಧನ್ಯವಾದಗಳು. ನನಗೆ ತುಂಬಾ ಅರ್ಥವಾಗಿದೆ. ಇದೇ ರೀತಿ ನನ್ನನ್ನು ಬೆಂಬಲಿಸುತ್ತಾ ಇರಿ ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ.
ಭಾರತ ತಂಡ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ವಿಶ್ವಕಪ್ ಜಯಿಸುವಲ್ಲಿ ಯುವರಾಜ್ ಸಿಂಗ್ ಮಹತ್ವದ ಪಾತ್ರವಹಿಸಿದ್ದರು. ಮಾತ್ರವಲ್ಲ ಕ್ಯಾನ್ಸರ್‌ನಿಂದ ಬಳಲುತ್ತಿದ್ದರೂ ಕೂಡ ಯುವಿ ವಿಶ್ವಕಪ್‌ನುದ್ದಕ್ಕೂ ಭರ್ಜರಿ ಆಟದ ಪ್ರದರ್ಶನವನ್ನು ನೀಡಿದ್ದರು. ಅದ್ರಲ್ಲೂ ಇಂಗ್ಲೆಂಡ್ ವಿರುದ್ದ ಪಂದ್ಯದಲ್ಲಿ ಅತ್ಯಂತ ಕಡಿಮೆ ಬೌಲ್‌ನಲ್ಲಿ ಅರ್ಧ ಶತಕ ಸಿಡಿಸಿ ದಾಖಲೆ ಬರೆಯುವುದರ ಜೊತೆಗೆ ಸ್ಟುವರ್ಟ್ ಬ್ರಾಡ್ ಎಸೆದ ಓವರ್‌ನ ಆರು ಎಸೆತವನ್ನೂ ಸಿಕ್ಸರ್‌ಗೆ ಅಟ್ಟುವ ಮೂಲಕ ವಿಶಿಷ್ಟ ವಿಶ್ವದಾಖಲೆಯನ್ನು ಬರೆದವರು ಯುವರಾಜ್ ಸಿಂಗ್. ಯುವಿ ಮೈದಾನಕ್ಕೆ ಇಳಿದ್ರೆ ಸಾಕು ಸಿಕ್ಸರ್ ಸಿಡಿಯೋದಕ್ಕೆ ಕಾಯುತ್ತಿರುತ್ತಾರೆ. ಬೌಲಿಂಗ್, ಬ್ಯಾಟಿಂಗ್. ಫೀಲ್ಡಿಂಗ್‌ನಲ್ಲಿಯೂ ಮಿಂಚಿದ್ದ ಯುವಿ ಮತ್ತೆ ಮೈದಾನಕ್ಕೆ ಇಳಿಯುವ ಸುದ್ದಿ ಇದೀಗ ಭಾರೀ ವೈರಲ್ ಆಗಿದೆ.
(Good news for UV fans: Yuvraj Singh to return to Team India)