SRH vs GT : ಸೋಲನ್ನೇ ಕಾಣದ ಗುಜರಾತ್‌ ವಿರುದ್ದ ಗೆಲುವು ಸಾಧಿಸುತ್ತಾ ಹೈದರಾಬಾದ್

ಮುಂಬೈ : ಹಾಲಿ ಚಾಂಪಿಯನ್ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಸೋಲಿನ ರುಚಿ ತೋರಿಸಿದ್ದ ಸನ್‌ ರೈಸಸ್‌ ಹೈದ್ರಾಬಾದ್‌ ತಂಡ ಇಂದು ಹಾರ್ದಿಕ್‌ ಪಾಂಡ್ಯ ಸಾರಥ್ಯದ ಗುಜರಾತ್‌ ಟೈಟಾನ್ಸ್‌ ತಂಡವನ್ನು (SRH vs GT) ಎದುರಿಸಲಿದೆ. ಮೂರು ಪಂದ್ಯಗಳ ಪೈಕಿ ಮೂರನ್ನು ಗೆದ್ದಿರುವ ಗುಜರಾತ್‌ ಟೈಟಾನ್ಸ್‌ ತಂಡ ಮೂರನೇ ಸ್ಥಾನದಲ್ಲಿದ್ರೆ, ಸನ್‌ ರೈಸಸ್‌ ಹೈದ್ರಾಬಾದ್‌ ತಂಡ ಮೂರು ಪಂದ್ಯಗಳ ಪೈಕಿ 1 ಪಂದ್ಯವನ್ನು ಗೆದ್ದು ಎರಡು ಪಂದ್ಯಗಳಲ್ಲಿ ಸೋಲನ್ನು ಕಂಡಿದ್ದು ಅಂಕಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದೆ.

ಮುಂಬೈನ ಡಾ.ಡಿ.ವೈ.ಪಾಟೀಲ್‌ ಸ್ಪೋರ್ಟ್‌ ಅಕಾಡೆಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 21ನೇ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ಹಾಗೂ ಸನ್‌ರೈಸಸ್‌ ಹೈದ್ರಾಬಾದ್‌ ತಂಡಗಳು ಮುಖಾಮುಖಿಯಾಗಲಿವೆ. ಎರಡು ಪಂದ್ಯಗಳನ್ನು ಸೋತಿರುವ ಹೈದ್ರಾಬಾದ್‌ ತಂಡ ಮತ್ತೆ ಕಂಬ್ಯಾಕ್‌ ಮಾಡಿದೆ. ಅಭಿಷೇಕ್‌ ಶರ್ಮಾ, ಕೇನ್‌ ವಿಲಿಯಂಸನ್‌, ರಾಹುಲ್‌ ತ್ರಿಪಾಟಿ, ಮಾಕರಮ್‌, ನಿಕೋಲಸ್‌ ಪೂರಾನಾ ಹಾಗೂ ವಾಷಿಂಗ್ಟನ್‌ ಸುಂದರ್‌ ಅದ್ಬುತ ಫಾರ್ಮ್‌ನಲ್ಲಿದ್ದಾರೆ. ಜೊತೆಗೆ ಟಿ. ನಟರಾಜನ್‌ ಬೌಲಿಂಗ್‌ನಲ್ಲಿ ಮಿಂಚುತ್ತಿದ್ದಾರೆ.

ಇನ್ನೊಂದೆಡೆಯಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದ ಕೂಡ ಬಲಿಷ್ಠವಾಗಿದೆ. ಆರಂಭಿಕ ಆಟಗಾರ ಶುಭಮನ್‌ ಗಿಲ್‌, ಮ್ಯಾರ್ಥೂ ವೇಡ್‌ ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಸಾಯಿ ಸುದರ್ಶನ್‌, ಹಾರ್ದಿಕ್‌ ಪಾಂಡ್ಯ, ಡೇವಿಡ್‌ ಮಿಲ್ಲರ್‌, ರಾಹುಲ್‌ ತಿವಾಟಿಯ ಹಾಗೂ ರಶೀದ್‌ ಖಾನ್‌ ಉತ್ತಮ ರನ್‌ ಕಲೆ ಹಾಕಲು ನೆರವಾಗುತ್ತಿದ್ದಾರೆ. ಅನುಭವಿ ಮೊಹಮ್ಮದ್‌ ಸೆಮಿ, ಫರ್ಗ್ಯುಸನ್‌ ಬೌಲಿಂಗ್‌ ಮೂಲಕ ಎದುರಾಳಿಗಳನ್ನು ಕಟ್ಟಿ ಹಾಕುವ ಸಾಮರ್ಥ್ಯವನ್ನು ಹೊಂದಿದ್ದಾರೆ.

ಯಾವಾಗ: SRH vs GT, ಏಪ್ರಿಲ್ 11, 19:30 IST
ಎಲ್ಲಿ: ಡಿವೈ ಪಾಟೀಲ್ ಸ್ಟೇಡಿಯಂ, ಮುಂಬೈ

ಸನ್‌ರೈಸಸ್‌ ಹೈದ್ರಾಬಾದ್‌

ಸಂಭಾವ್ಯ XI : ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ಸಿ), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಟಿ ನಟರಾಜನ್, ಉಮ್ರಾನ್ ಮಲಿಕ್/ಕಾರ್ತಿಕ್ ತ್ಯಾಗಿ

ಗುಜರಾತ್ ಟೈಟಾನ್ಸ್

ಸಂಭಾವ್ಯ XI: ಶುಭಮನ್ ಗಿಲ್, ಮ್ಯಾಥ್ಯೂ ವೇಡ್ (WK), ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (C), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ದರ್ಶನ್ ನಲ್ಕಂಡೆ

ತಂಡಗಳು:

ಸನ್‌ರೈಸರ್ಸ್ ಹೈದರಾಬಾದ್ ತಂಡ: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್(ಸಿ), ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್(ಡಬ್ಲ್ಯೂ), ಏಡನ್ ಮಾರ್ಕ್ರಂ, ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಸಮರ್ಥ್, ಗ್ಲೆನ್ ಫಿಲಿಪ್ಸ್, ವಿಷ್ಣು ವಿನೋದ್, ಪ್ರಿಯಂ ಗಾರ್ಗ್, ಕಾರ್ತಿಕ್ ತ್ಯಾಗಿ, ರೊಮಾರಿಯೋ ಶೆಫರ್ಡ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ಸೌರಭ್ ದುಬೆ

ಗುಜರಾತ್ ಟೈಟಾನ್ಸ್ ತಂಡ: ಮ್ಯಾಥ್ಯೂ ವೇಡ್(ಪ), ಶುಭಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ಸಿ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ದರ್ಶನ್ ನಲ್ಕಂಡೆ, ಜಯಂತ್ ಯಾದವ್, ವಿಜಯ್ ಶಂಕರ್, ವರುಣ್ ಆರನ್, ವೃದ್ಧಿಮಾನ್ ಸಹಾ, ಪ್ರದೀಪ್ ಸಾಂಗ್ವಾನ್, ಗುರುಕೀರತ್ ಸಿಂಗ್ ಮಾನ್, ಅಲ್ಜಾರಿ ಜೋಸೆಫ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಯಶ್ ದಯಾಲ್, ನೂರ್ ಅಹ್ಮದ್

ಇದನ್ನೂ ಓದಿ : Harshal Patel : ಹರ್ಷಲ್‌ ಪಟೇಲ್‌ ಸಹೋದರಿ ನಿಧನ : ಆರ್‌ಸಿಬಿ ತೊರೆದ ಖ್ಯಾತ ಆಟಗಾರ

ಇದನ್ನೂ ಓದಿ : ಕುಲದೀಪ್‌ ಯಾದವ್‌ ಅದ್ಬುತ ಬೌಲಿಂಗ್‌ : ಡೆಲ್ಲಿ ವಿರುದ್ದ ಸೋಲು ಕಂಡ ಕೆಕೆಆರ್‌

SRH vs GT prediction Who Will Win Today IPL 2022 Match Sunrisers Hyderabad vs Gujarat Titans

Comments are closed.