Suryakumar Yadav : ಟೀಮ್ ಇಂಡಿಯಾ ಟಿ20 ತಂಡಕ್ಕೆ ಸೂರ್ಯಕುಮಾರ್ ಯಾದವ್ ಕ್ಯಾಪ್ಟನ್, ಪಾಂಡ್ಯಾಗೆ ಶಾಕ್

ಬೆಂಗಳೂರು: ವಿಶ್ವದ ನಂ.1 ಟಿ20 ಬ್ಯಾಟ್ಸ್’ಮನ್ ಸೂರ್ಯಕುಮಾರ್ ಯಾದವ್ (Suryakumar Yadav) ಟೀಮ್ ಇಂಡಿಯಾ ಟಿ20 ತಂಡದ ನೂತನ ನಾಯಕನಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ. ಆದರೆ ಇದು ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಮಾತ್ರ. ಸದ್ಯ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ತಂಡ (India tour of West Indies 2023), ವಿಂಡೀಸ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನಾಡಲಿದ್ದು, ಮೊದಲ ಪಂದ್ಯ ಆಗಸ್ಟ್ 3ರಂದು ಆರಂಭವಾಗಲಿದೆ. ಸರಣಿಯ ಕೊನೆಯ ಎರಡು ಪಂದ್ಯಗಳು ಅಮೆರಿಕದ ಫ್ಲೋರಿಡಾದಲ್ಲಿ ನಡೆಯಲಿವೆ.

ವಿಂಡೀಸ್ ವಿರುದ್ಧದ ಟಿ20 ಸರಣಿಯ ನಂತರ ಭಾರತ ಟಿ20 ತಂಡ ಐರ್ಲೆಂಡ್ ಪ್ರವಾಸ (India Vs Ireland t20 series 2023) ಕೈಗೊಳ್ಳಲಿದ್ದು, 3 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ಈ ಸರಣಿಗೆ ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆಗಳಿರುವ ಕಾರಣ, ಉಪನಾಯಕ ಸೂರ್ಯಕುಮಾರ್ ಯಾದವ್ ನಾಯಕನಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ. ಐರ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಆಗಸ್ಟ್ 18ರಂದು ನಡೆಯಲಿದೆ.

ಇದನ್ನೂ ಓದಿ : Shreyas Gopal : ಭಾವನಾತ್ಮಕ ಪತ್ರದೊಂದಿಗೆ ಕರ್ನಾಟಕ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಶ್ರೇಯಸ್ ಗೋಪಾಲ್

ಇದನ್ನೂ ಓದಿ : Ajit Agarkar : ವೆಸ್ಟ್ ಇಂಡೀಸ್’ನಲ್ಲಿ ರೋಹಿತ್, ಕೊಹ್ಲಿಯನ್ನು ಭೇಟಿ ಮಾಡಲಿದ್ದಾರೆ ಅಗರ್ಕರ್, ಕಾರಣ ಇಂಟ್ರೆಸ್ಟಿಂಗ್

ಭಾರತ Vs ಐರ್ಲೆಂಡ್ ಟಿ20 ಸರಣಿಯ ವೇಳಾಪಟ್ಟಿ :

  • ಮೊದಲ ಟಿ20: ಆಗಸ್ಟ್ 18 (ಮಲಹೈಡ್ ಕ್ರಿಕೆಟ್ ಕ್ಲಬ್ ಮೈದಾನ, ಡುಬ್ಲಿನ್)
  • 2ನೇ ಟಿ20: ಆಗಸ್ಟ್ 20 (ಮಲಹೈಡ್ ಕ್ರಿಕೆಟ್ ಕ್ಲಬ್ ಮೈದಾನ, ಡುಬ್ಲಿನ್)
  • 3ನೇ ಟಿ20: ಆಗಸ್ಟ್ 23 (ಮಲಹೈಡ್ ಕ್ರಿಕೆಟ್ ಕ್ಲಬ್ ಮೈದಾನ, ಡುಬ್ಲಿನ್)

ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ನಂತರ ಟೀಮ್ ಇಂಡಿಯಾ ಏಷ್ಯಾ ಕಪ್ ಟೂರ್ನಿಯಲ್ಲಿ ಆಡಲಿದೆ. ಏಷ್ಯಾ ಕಪ್ ಏಕದಿನ ಟೂರ್ನಿ (Asia Cup 2023) ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ.

Suryakumar Yadav : Suryakumar Yadav captain of Team India T20 team, shock for Pandya

Comments are closed.