ಭಾನುವಾರ, ಏಪ್ರಿಲ್ 27, 2025
HomeSportsCricketಟಿ20 ವಿಶ್ವಕಪ್ ಸೆಮಿಫೈನಲ್‌ಗೆ ಕೌಂಟ್‌ಡೌನ್: ಭಾರತಕ್ಕೆ ಕಾಡುತ್ತಿದೆ ನಾಕೌಟ್ ಫೋಬಿಯಾ

ಟಿ20 ವಿಶ್ವಕಪ್ ಸೆಮಿಫೈನಲ್‌ಗೆ ಕೌಂಟ್‌ಡೌನ್: ಭಾರತಕ್ಕೆ ಕಾಡುತ್ತಿದೆ ನಾಕೌಟ್ ಫೋಬಿಯಾ

- Advertisement -

T20 World Cup 2024 semi-final : ಗಯಾನಾ: ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯ ಸೆಮಿಫೈನಲ್ ಪಂದ್ಯಕ್ಕಿನ್ನು ಕೆಲವೇ ಗಂಟೆಗಳಷ್ಟೇ ಬಾಕಿ. ಗುರುವಾರ ಗಯಾನದ ಪ್ರಾವಿಡೆನ್ಸ್ ಮೈದಾನದಲ್ಲಿ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿರುವ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಹಾಲಿ ಚಾಂಪಿಯನ್ ಇಂಗ್ಲೆಂಡ್ (India Vs England) ತಂಡವನ್ನು ಎದುರಿಸಲಿದೆ.

T20 World Cup 2024 semi-final countdown, Knockout phobia haunts India vs England
Image Credit to Original Source

ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕೆ ಸಜ್ಜಾಗಿರುವ ಭಾರತಕ್ಕೆ ನಾಕೌಟ್ ಫೋಬಿಯಾ ಕಾಡುತ್ತಿದೆ. ಹೌದು. ಇದು ಐಸಿಸಿ ಟೂರ್ನಿಗಳಲ್ಲಿ ಕಳೆದ 10 ವರ್ಷಗಳಿಂದ ಭಾರತವನ್ನು ಕಾಡುತ್ತಿರುವ ಸಮಸ್ಯೆ. ಭಾರತ ತಂಡ 2013ರಲ್ಲಿ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಚಾಂಪಿಯನ್ ಆದ ನಂತರ, ಮತ್ತೆಂದೂ ಐಸಿಸಿ ಟ್ರೋಫಿ ಗೆದ್ದಿಲ್ಲ. ಸತತವಾಗಿ ಐಸಿಸಿ ಟೂರ್ನಿಗಳಲ್ಲಿ ನಾಕೌಟ್ ಹಂತಗಳಲ್ಲಿ ಭಾರತ ಮುಗ್ಗರಿಸುತ್ತಾ ಬಂದಿದೆ. ಕಳೆದ 10 ವರ್ಷಗಳಲ್ಲಿ ಭಾರತ ತಂಡ ಐಸಿಸಿ ಟೂರ್ನಿಗಳಲ್ಲಿ ಒಟ್ಟು 8 ಬಾರಿ ಸೆಮಿಫೈನಲ್ ಮತ್ತು ಫೈನಲ್’ನಲ್ಲಿ ಸೋಲು ಕಂಡು ನಿರಾಸೆ ಅನುಭವಿಸಿದೆ.

ಐಸಿಸಿ ವಿಶ್ವಕಪ್: ಭಾರತಕ್ಕೆ ನಾಕೌಟ್ ಫೋಬಿಯಾ
2014ರ ಟಿ20 ವಿಶ್ವಕಪ್: ಫೈನಲ್’ನಲ್ಲಿ ಶ್ರೀಲಂಕಾ ವಿರುದ್ಧ ಸೋಲು
2015ರ ಏಕದಿನ ವಿಶ್ವಕಪ್: ಸೆಮಿಫೈನಲ್’ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು
2016ರ ಟಿ20 ವಿಶ್ವಕಪ್: ಸೆಮಿಫೈನಲ್’ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋಲು
2019ರ ಏಕದಿನ ವಿಶ್ವಕಪ್: ಸೆಮಿಫೈನಲ್’ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು
2021ರ ಟೆಸ್ಟ್ ಚಾಂಪಿಯನ್”ಷಿಪ್: ಫೈನಲ್’ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು
2022ರ ಟಿ20 ವಿಶ್ವಕಪ್: ಸೆಮಿಫೈನಲ್’ನಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು
2023ರ ಟೆಸ್ಟ್ ಚಾಂಪಿಯನ್”ಷಿಪ್: ಫೈನಲ್’ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು
2023ರ ಏಕದಿನ ವಿಶ್ವಕಪ್: ಫೈನಲ್’ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು

ಇದನ್ನೂ ಓದಿ :India Vs England : ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯವೇ ನಡೆಯದಿದ್ದರೆ ಭಾರತ ಫೈನಲ್‌ಗೆ ..! ಹೇಗೆ ಗೊತ್ತಾ?

T20 World Cup 2024 semi-final countdown, Knockout phobia haunts India vs England
Image Credit to Original Source

2022ರಲ್ಲಿಆಸ್ಟ್ರೇಲಿಯಾದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗ 10 ವಿಕೆಟ್’ಗಳ ಹೀನಾಯ ಸೋಲು ಕಾಣುವ ಮೂಲಕ ಸೆಮಿಫೈನಲ್’ನಲ್ಲಿ ಮುಗ್ಗರಿಸಿತ್ತು. ಫೈನಲ್ ತಲುಪಿದ್ದ ಇಂಗ್ಲೆಂಡ್ 2ನೇ ಬಾರಿ ಟಿ20 ವಿಶ್ವಕಪ್ ಎತ್ತಿ ಹಿಡಿದಿತ್ತು. 2 ವರ್ಷಗಳ ಹಿಂದೆ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳುವ ಸುವರ್ಣಾವಕಾಶ ಭಾರತಕ್ಕೆ ಸಿಕ್ಕಿದೆ.

ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ರೋಚಕ ಸೆಮಿಫೈನಲ್ ಪಂದ್ಯ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಟ್ರಿನಿಡಾಡ್’ ನ ಬ್ರಯಾನ್ ಲಾರಾ ಕ್ರೀಡಾಂಗಣದಲ್ಲಿ ಗುರುವಾರ ನಡೆಯುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ, ಅಫ್ಘಾನಿಸ್ತಾನ ಸವಾಲನ್ನು ಎದುರಿಸಲಿದೆ.

ಭಾರತ V ಇಂಗ್ಲೆಂಡ್ ಸೆಮಿಫೈನಲ್
ಪಂದ್ಯ ಆರಂಭ: ರಾತ್ರಿ 8ಕ್ಕೆ
ಸ್ಥಳ: ಪ್ರಾವಿಡೆನ್ಸ್ ಸ್ಟೇಡಿಯಂ, ಗಯಾನ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್
ಲೈವ್ ಸ್ಟ್ರೀಮಿಂಗ್: ಡಿಸ್ನಿ+ ಹಾಟ್ ಸ್ಟಾರ್

ಇದನ್ನೂ ಓದಿ : Rohit Sharma World Record : ರೋಹಿತ್ ಶರ್ಮಾ ಮತ್ತೊಂದು ವಿಶ್ವದಾಖಲೆ, ಇದು ನಿಜಕ್ಕೂ ಬೇಕಿರಲಿಲ್ಲ 

ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಭಾರತದ ಸಂಭಾವ್ಯ ಪ್ಲೇಯಿಂಗ್ XI:
1. ರೋಹಿತ್ ಶರ್ಮಾ (ನಾಯಕ)
2. ವಿರಾಟ್ ಕೊಹ್ಲಿ
3. ರಿಷಭ್ ಪಂತ್ (ವಿಕೆಟ್ ಕೀಪರ್)
4. ಸೂರ್ಯಕುಮಾರ್ ಯಾದವ್
5. ಹಾರ್ದಿಕ್ ಪಾಂಡ್ಯ
6. ಶಿವಂ ದುಬೆ
7. ರವೀಂದ್ರ ಜಡೇಜ
8. ಅಕ್ಷರ್ ಪಟೇಲ್
9. ಅರ್ಷದೀಪ್ ಸಿಂಗ್
10. ಜಸ್ಪ್ರೀತ್ ಬುಮ್ರಾ
11. ಕುಲ್ದೀಪ್ ಯಾದವ್

ಇದನ್ನೂ ಓದಿ : Maharaja Trophy 2024 : ಸ್ವಾತಂತ್ರ್ಯ ದಿನದಂದೇ ಶುರು ಕರುನಾಡ ಟಿ20 ಲೀಗ್, ಬೆಂಗಳೂರು ತಂಡದಲ್ಲೇ ಮತ್ತೆ ಮಯಾಂಕ್ ಆಟ 

T20 World Cup 2024 semi-final countdown, Knockout phobia haunts India vs England

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular