T20 World Cup 2024 Super-8: ಆ್ಯಂಟಿಗುವಾ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ (ICC T20 World Cup 2024) ತನ್ನ 2ನೇ ಸೂಪರ್-8 ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ( Indian Cricket Team) ಇಂದು (ಶನಿವಾರ) ಬಾಂಗ್ಲಾದೇಶ ತಂಡವನ್ನು ಎದುರಿಸಲಿದೆ. ಬಾರ್ಬೆಡೋಸ್’ನಲ್ಲಿ ಗುರುವಾರ ನಡೆದ ಮೊದಲ ಸೂಪರ್-8 ಹಂತದಲ್ಲಿ ಅಫ್ಘಾನಿಸ್ತಾನ ತಂಡವನ್ನು 27 ರನ್’ಗಳಿಂದ ಬಗ್ಗುಬಡಿದಿದ್ದ ಭಾರತ, ಶನಿವಾರ ಬಾಂಗ್ಲಾದೇಶ ವಿರುದ್ಧ ಗೆದ್ದರೆ, ಗ್ರೂಪ್-1ರಿಂದ ಬಹುತೇಕ ಸೆಮಿಫೈನಲ್ ಪ್ರವೇಶಿಸಲಿದೆ.

ಗ್ರೂಪ್-1ರಲ್ಲಿ ಭಾರತ ಮತ್ತು ಅಸ್ಟ್ರೇಲಿಯಾ ತಂಡಗಳು ಆಡಿರುವ ಒಂದೊಂದು ಪಂದ್ಯಗಳಲ್ಲಿ ಗೆದ್ದಿದ್ದು, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ತಮ್ಮ ಮೊದಲ ಪಂದ್ಯದಲ್ಲಿ ಸೋಲು ಕಂಡಿವೆ. ಅಫ್ಘಾನಿಸ್ತಾನ ವಿರುದ್ಧ ಕಣಕ್ಕಿಳಿದ ತಂಡವೇ ಬಾಂಗ್ಲಾದೇಶ ವಿರುದ್ಧ ಆಡುವ ನಿರೀಕ್ಷೆಯಿದೆ. ಟಿ20 ವಿಶ್ವಕಪ್’ನಲ್ಲಿ ಭಾರತಕ್ಕೆ ಆರಂಭಿಕರದ್ದೇ ದೊಡ್ಡ ಸಮಸ್ಯೆ.
ಟಿ20 ವಿಶ್ವಕಪ್’ನ ನಾಲ್ಕು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಿರುವ ವಿರಾಟ್ ಕೊಹ್ಲಿ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ವಿಫಲರಾಗಿದ್ದಾರೆ. ಈ ಇಬ್ಬರು ಅನುಭವಿಗಳು ಕಳೆದ ನಾಲ್ಕು ಪಂದ್ಯಗಳಲ್ಲಿ ಒಮ್ಮೆಯೂ ಕನಿಷ್ಠ 25 ರನ್’ಗಳ ಜೊತೆಯಾಟವಾಡಿಲ್ಲ. ಅಫ್ಘಾನಿಸ್ತಾನ ವಿರುದ್ಧ ಕೊಹ್ಲಿ 24 ಎಸೆತಗಳಲ್ಲಿ 24 ರನ್ ಗಳಿಸಿ ಔಟಾಗಿದ್ದರು. ಲೀಗ್ ಹಂತದಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಕೊಹ್ಲಿ ಕೇವಲ 5 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.
https://x.com/bcci/status/1804361948366004586?s=46
ಐರ್ಲೆಂಡ್ ವಿರುದ್ಧದ ಮೊದಲ ಲೀಗ್ ಪಂದ್ಯದಲ್ಲಿ 1 ರನ್ನಿಗೆ ಔಟಾಗಿದ್ದ ವಿರಾಟ್ ಕೊಹ್ಲಿ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 4 ರನ್ ಗಳಿಸಿ ಔಟಾಗಿದ್ದರು. ಕ್ರಿಕೆಟ್ ಶಿಶು ಅಮೆರಿಕ ವಿರುದ್ಧದ ಪಂದ್ಯದಲ್ಲಿ ಎದುರಿಸಿದ ಮೊದಲ ಎಸೆತದಲ್ಲೇ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಮತ್ತೊಮದೆಡೆ ನಾಯಕ ರೋಹಿತ್ ಶರ್ಮಾ ಕೂಡ ಟಿ20 ವಿಶ್ವಕಪ್’ನಲ್ಲಿ ದಯನೀಯ ವೈಫಲ್ಯ ಎದುರಿಸಿದ್ದಾರೆ.

ಐರ್ಲೆಂಡ್ ವಿರುದ್ಧ ಅಜೇಯ 52 ರನ್ ಬಾರಿಸಿದ್ದ ರೋಹಿತ್ ಮುಂದಿನ ಮೂರು ಪಂದ್ಯಗಳಲ್ಲಿ ಗಳಿಸಿರುವ ಒಟ್ಟು ರನ್ 24. ಹೀಗಾಗಿ ಬಾಂಗ್ಲಾದೇಶ ವಿರುದ್ಧ ಯುವ ಎಡಗೈ ಓಪನರ್ ಯಶಸ್ವಿ ಜೈಸ್ವಾಲ್ ಆಡುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಜೈಸ್ವಾಲ್ ಅಡುವ ಬಳಗದಲ್ಲಿ ಕಾಣಿಸಿಕೊಂಡರೆ ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಆಗ ಶಿವ ದುಬೆ ಪ್ಲೇಯಿಂಗ್ XIನಿಂದ ಹೊರಗುಳಿಯಬೇಕಾಗುತ್ತದೆ. ಜೂನ್ 24ರಂದು ಸೇಂಟ್ ಲೂಸಿಯಾದಲ್ಲಿ ನಡೆಯುವ 3ನೇ ಸೂಪರ್-8 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.
ಇದನ್ನೂ ಓದಿ : Smriti Mandhana: ದ್ರಾವಿಡ್ ಕೊಟ್ಟ ಬ್ಯಾಟ್‌ನಲ್ಲಿ ಡಬಲ್ ಸೆಂಚುರಿ ಬಾರಿಸಿದ್ದಳು Queen Of Cricket
T20 World Cup 2024 Super-8: ಭಾರತ Vs ಬಾಂಗ್ಲಾದೇಶ ಪಂದ್ಯ
ಪಂದ್ಯ ಆರಂಭ: ರಾತ್ರಿ 8ಕ್ಕೆ
ಸ್ಥಳ: ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂ, ನಾರ್ಥ್ ಸ್ಟ್ಯಾಂಡ್, ಆ್ಯಂಟಿಗೂವಾ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್
ಲೈವ್ ಸ್ಟ್ರೀಮಿಂಗ್: ಡಿಸ್ನಿ+ ಹಾಟ್ ಸ್ಟಾರ್
ಇದನ್ನೂ ಓದಿ : ಮುಂದಿನ ತಿಂಗಳು ಟೀಮ್ ಇಂಡಿಯಾಗೆ ಹೊಸ ಕೋಚ್ : ಗೌತಮ್ ಗಂಭೀರ್ ಅಲ್ಲ, ವಿವಿಎಸ್ ಲಕ್ಷ್ಮಣ್
ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI:
1. ರೋಹಿತ್ ಶರ್ಮಾ (ನಾಯಕ)
2. ವಿರಾಟ್ ಕೊಹ್ಲಿ
3. ರಿಷಭ್ ಪಂತ್ (ವಿಕೆಟ್ ಕೀಪರ್)
4. ಸೂರ್ಯಕುಮಾರ್ ಯಾದವ್
5. ಹಾರ್ದಿಕ್ ಪಾಂಡ್ಯ
6. ಶಿವಂ ದುಬೆ
7. ರವೀಂದ್ರ ಜಡೇಜ
8. ಅಕ್ಷರ್ ಪಟೇಲ್
9. ಅರ್ಷದೀಪ್ ಸಿಂಗ್
10. ಜಸ್ಪ್ರೀತ್ ಬುಮ್ರಾ
11. ಕುಲ್ದೀಪ್ ಯಾದವ್
ಇದನ್ನೂ ಓದಿ : ಅಂದು ಬ್ರೆಟ್ ಲೀ , ಇಂದು ಪ್ಯಾಟ್ ಕುಮಿನ್ಸ್ ಹ್ಯಾಟ್ರಿಕ್, ಇದು ಭಾರತ ವಿಶ್ವಕಪ್ ಗೆಲ್ಲುವ ಸೂಚನೆನಾ ?
T20 World Cup 2024 Super-8: India Vs Bangladesh Match Pin to Pin Details