T20 World Cup Team India : ಮಂಬೈ: ಐಸಿಸಿ ಟಿ20 ವಿಶ್ವಕಪ್ (ICC T20 World Cup 2024) ಟೂರ್ನಿಗಾಗಿ ಭಾರತ ಕ್ರಿಕೆಟ್ ತಂಡ (indian Cricket team) ನಾಳೆ (ಶನಿವಾರ) ಮುಂಬೈನಿಂದ ಅಮೆರಿಕದ ನ್ಯೂ ಯಾರ್ಕ್’ಗೆ ಪ್ರಯಾಣ ಬೆಳೆಸಲಿದೆ. ವಿಶ್ವಕಪ್’ಗೆ ಆಯ್ಕೆಯಾಗಿರುವ 15 ಮಂದಿ ಆಟಗಾರರ ಪೈಕಿ ರಾಜಸ್ಥಾನ್ ರಾಯಲ್ಸ್ ಆಟಗಾರರಾದ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಯುಜ್ವೇಂದ್ರ ಚಹಲ್ ಮಾತ್ರ ಐಪಿಎಲ್ ಪ್ಲೇ ಆಫ್’ನಲ್ಲಿ ಆಡುತ್ತಿದ್ದಾರೆ. ಉಳಿದ 12 ಮಂದಿ ಆಟಗಾರರ ತಂಡಗಳು ಪ್ಲೇ ಆಫ್’ನಿಂದ ಈಗಾಗಲೇ ಹೊರ ಬಿದ್ದಿವೆ.

ಶುಕ್ರವಾರ ಚೆನ್ನೈನಲ್ಲಿ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಜೂನ್ 2ರಂದು ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಆರಂಭವಾಗಲಿದ್ದು, ಫೈನಲ್ ಪಂದ್ಯ ಜೂನ್ 29ರಂದು ನಡೆಯಲಿದೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಟಿ20 ವಿಶ್ವಕಪ್’ನಲ್ಲಿ ಜೂನ್ 5ರಂದು ತನ್ನ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಜೂನ್ 9ರಂದು ನ್ಯೂಯಾರ್ಕ್’ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಪಾಕಿಸ್ತಾನ, ಕೆನಡಾ, ಅಮೆರಿಕ ಮತ್ತು ಐರ್ಲೆಂಡ್ ತಂಡಗಳ ಜೊತೆ ಗ್ರೂಪ್ ’ಎ’ನಲ್ಲಿ ಸ್ಥಾನ ಪಡೆದಿದೆ. 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ ಭಾರತ ತಂಡ ನಿರಂತರ 11 ವರ್ಷಗಳಿಂದ ಐಸಿಸಿ ಟ್ರೋಫಿ ಗೆಲ್ಲಲು ವಿಫಲವಾಗುತ್ತಾ ಬಂದಿದೆ. ಹೀಗಾಗಿ ಈ ಬಾರಿಯ ಟಿ20 ವಿಶ್ವಕಪ್’ನಲ್ಲಿ ನಿರೀಕ್ಷೆಗಳು ಮತ್ತೆ ಗರಿಗೆದರಿದ್ದು, 17 ವರ್ಷಗಳ ನಂತರ ಭಾರತಕ್ಕೆ ಟಿ20 ವಿಶ್ವಕಪ್ ಒಲಿಯಲಿದೆಯೇ ಎಂಬುದು ಕುತೂಹಲ ಕೆರಳಿಸಿದೆ.
ಇದನ್ನೂ ಓದಿ : My Mom Is In Hospital..! ಅತ್ತ ಆಸ್ಪತ್ರೆಯಲ್ಲಿ ಹೆತ್ತ ತಾಯಿ, ಇತ್ತ ಐಪಿಎಲ್’ನಲ್ಲಿ ಕೆಕೆಆರ್ ಪರ ಮಗನ ಆಟ !
ಐಸಿಸಿ ಟಿ20 ವಿಶ್ವಕಪ್-2024 ಟೂರ್ನಿಗೆ ಆಯ್ಕೆಯಾಗಿರುವ ಭಾರತ ತಂಡ:
1. ರೋಹಿತ್ ಶರ್ಮಾ (ನಾಯಕ)
2. ಯಶಸ್ವಿ ಜೈಸ್ವಾಲ್
3. ವಿರಾಟ್ ಕೊಹ್ಲಿ
4. ಸೂರ್ಯಕುಮಾರ್ ಯಾದವ್
5. ರಿಷಭ್ ಪಂತ್ (ವಿಕೆಟ್ ಕೀಪರ್)
6. ಹಾರ್ದಿಕ್ ಪಾಂಡ್ಯ
7. ರವೀಂದ್ರ ಜಡೇಜ
8. ಕುಲ್ದೀಪ್ ಯಾದವ್
9. ಜಸ್ಪ್ರೀತ್ ಬುಮ್ರಾ
10. ಮೊಹಮ್ಮದ್ ಸಿರಾಜ್
11. ಅರ್ಷದೀಪ್ ಸಿಂಗ್
12. ಅಕ್ಷರ್ ಪಟೇಲ್
13. ಯುಜ್ವೇಂದ್ರ ಚಹಲ್
14. ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
15. ಶಿವಂ ದುಬೆ

ಇದನ್ನೂ ಓದಿ : CSK Honoured Dinesh Karthik : ವಿಶೇಷ ಪೋಸ್ಟರ್’ನೊಂದಿಗೆ ದಿನೇಶ್ ಕಾರ್ತಿಕ್’ಗೆ ವಿದಾಯದ ಗೌರವ ಸಲ್ಲಿಸಿದ ಸಿಎಸ್’ಕೆ!
ಐಸಿಸಿ ಟಿ20 ವಿಶ್ವಕಪ್ 2024: ಭಾರತದ ಲೀಗ್ ಪಂದ್ಯಗಳ ವೇಳಾಪಟ್ಟಿ (ICC Men’s T20 World Cup 2024)
ಜೂನ್ 05: ಭಾರತ Vs ಐರ್ಲೆಂಡ್ (ನ್ಯೂಯಾರ್ಕ್, ರಾತ್ರಿ 7.30ಕ್ಕೆ)
ಜೂನ್ 09: ಭಾರತ Vs ಪಾಕಿಸ್ತಾನ (ನ್ಯೂಯಾರ್ಕ್, ರಾತ್ರಿ 8ಕ್ಕೆ)
ಜೂನ್ 12: ಭಾರತ Vs ಅಮೆರಿಕ (ನ್ಯೂಯಾರ್ಕ್, ರಾತ್ರಿ 8ಕ್ಕೆ)
ಜೂನ್ 15: ಭಾರತ Vs ಕೆನಡಾ (ಲಾಡರ್’ಹಿಲ್, ರಾತ್ರಿ 8ಕ್ಕೆ)
T20 World Cup Team India to fly New York tomorrow