ದುಬೈ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈಗಾಗಲೇ ಟಿ20 ವಿಶ್ವಕಪ್ ದುಬೈಗೆ ಶಿಫ್ಟ್ ಆಗಿದೆ. ಇದೀಗ ವಿಶ್ವಕಪ್ ಪಂದ್ಯಾವಳಿ ಅಕ್ಟೋಬರ್ 17 ರಿಂದ ನವೆಂಬರ್ 14 ವರೆಗೆ ನಡೆಯಲಿದೆ ಎಂದು ಐಸಿಸಿ (ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಖಚಿತ ಪಡಿಸಿದೆ.
ಈ ಬಾರಿ ಯುಎಇ ಮತ್ತು ಒಮಾನ್‌ನಲ್ಲಿ ಟಿ 20 ವಿಶ್ವಕಪ್ 2021 ನಡೆಯಲಿದೆ ಎಂದು ಬಿಸಿಸಿಐ ತಿಳಿಸಿತ್ತು. ಇದರ ಬೆನ್ನಲ್ಲೇ ಐಸಿಸಿ ವಿಶ್ವಕಪ್ ಪಂದ್ಯಾವಳಿಯ ದಿನಾಂಕವನ್ನು ಖಚಿತ ಪಡಿಸಿದೆ. ಬಿಸಿಸಿಐ ಆಯೋಜನೆ ಮಾಡಲಿರುವ ಪಂದ್ಯಾವಳಿ ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ, ಅಬುಧಾಬಿಯ ಶೇಖ್ ಜಾಯೆದ್ ಸ್ಟೇಡಿಯಂ, ಶಾರ್ಜಾ ಸ್ಟೇಡಿಯಂ ಮತ್ತು ಓಮನ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯಲಿದೆ.
ಅರ್ಹತಾ ಸುತ್ತಿನಲ್ಲಿ ಒಟ್ಟು ಎಂಟು ತಂಡಗಳು ಪಂದ್ಯಾವಳಿಯಲ್ಲಿ ಭಾಗಿಯಾಗಲಿವೆ. ಮೊದಲ ಸುತ್ತಿನ ಪಂದ್ಯಗಳು ಯುಎಇ ಹಾಗೂ ಒಮನ್ ನಲ್ಲಿ ನಡೆಯಲಿದೆ. ಬಾಂಗ್ಲಾದೇಶ, ಶ್ರೀಲಂಕಾ, ಐರ್ಲೆಂಡ್, ನೆದರ್ಲ್ಯಾಂಡ್ಸ್, ಸ್ಕಾಟ್ಲೆಂಡ್, ನಮೀಬಿಯಾ, ಒಮನ್ ಮತ್ತು ಪಪುವಾ ನ್ಯೂಗಿನಿಯಾ ತಂಡಗಳು ಅರ್ಹತಾ ಪಂದ್ಯಾವಳಿಯಲ್ಲಿ ಭಾಗಿಯಾಗ ಲಿವೆ. ಐಸಿಸಿ ಪುರುಷರ ಟಿ 20 ವಿಶ್ವಕಪ್ ಅತ್ಯಂತ ಸುರಕ್ಷಿತವಾಗಿ ಆಯೋಜನೆಯಾಗಲಿದೆ ಎಂದು ಐಸಿಸಿ ಸಿಇಒ ಜೆಫ್ ಅಲಾರ್ಡಿಸ್ ಹೇಳಿದ್ದಾರೆ.