ದುಬೈ: ಪಾಕಿಸ್ತಾನ ವಿರುದ್ಧದ (India vs Pakistan) ಏಷ್ಯಾ ಕಪ್ (Asia Cup 2022) ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದೆ. ಕೋವಿಡ್’ನಿಂದ ಚೇತರಿಸಿ ಕೊಂಡಿರುವ ಕೋಚ್ ರಾಹುಲ್ ದ್ರಾವಿಡ್ (Team India Head Coach Rahul Dravid Returns) ಯುಎಇನಲ್ಲಿ ಭಾರತ ತಂಡವನ್ನು ಸೇರಿಕೊಂಡಿದ್ದು, ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆಗೆ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್’ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ರಾಹುಲ್ ದ್ರಾವಿಡ್ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾದ ಮಧ್ಯಂತರ ಕೋಚ್ ಆಗಿ ನೇಮಕಗೊಂಡಿದ್ದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಶನಿವಾರ ಮಧ್ಯರಾತ್ರಿ ದುಬೈನಿಂದ ಹೊರಟಿದ್ದು, ಭಾನುವಾರ ಬೆಳಗ್ಗೆ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
🚨 India coach Rahul Dravid has joined the Asia Cup tour party in Dubai after testing negative for Covid-19#AsiaCup2022 pic.twitter.com/JG0fphQIqb
— ESPNcricinfo (@ESPNcricinfo) August 28, 2022
ಭಾರತ ತಂಡ ಏಷ್ಯಾ ಕಪ್ ಟೂರ್ನಿಗಾಗಿ ಆಗಸ್ಟ್ 23ರಂದು ದುಬೈಗೆ ಪ್ರಯಾಣ ಬೆಳೆಸಿತ್ತು. ಈ ವೇಳೆ ನಡೆದ ಕೋವಿಡ್ ಟೆಸ್ಟ್’ನಲ್ಲಿ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಪಾಸಿಟಿವ್ ಕಾಣಿಸಿಕೊಂಡಿತ್ತು. ಹೀಗಾಗಿ ಟೀಮ್ ಇಂಡಿಯಾ ಜೊತೆ ದ್ರಾವಿಡ್ ಪ್ರಯಾಣಿಸಿರಲಿಲ್ಲ. ಆಗಸ್ಟ್ 23ರಿಂದ 27ರವರೆಗೆ ಐದು ದಿನಗಳ ಕಾಲ ಬೆಂಗಳೂರಿನ ತಮ್ಮ ನಿವಾಸದಲ್ಲಿ ಐಸೋಲೇಷನ್’ನಲ್ಲಿದ್ದ ರಾಹುಲ್ ದ್ರಾವಿಡ್ ಇದೀಗ ಕೋವಿಡ್’ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಕೋವಿಡ್ ಟೆಸ್ಟ್’ನಲ್ಲಿ ನೆಗೆಟಿವ್ ರಿಸಲ್ಟ್ ಬಂದಿರುವ ಕಾರಣ ಶನಿವಾರ ರಾತ್ರಿಯೇ ದುಬೈಗೆ ಪ್ರಯಾಣಿಸಿರುವ ದ್ರಾವಿಡ್, ಭಾನುವಾರ ಭಾರತ ತಂಡವನ್ನು ಸೇರಿಕೊಂಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ (India Vs Pakistan) ನಡುವಿನ ಮೆಗಾ ಫೈಟ್ ಭಾನುವಾರ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ರಾತ್ರಿ 7.30ಕ್ಕೆ ಆರಂಭವಾಗಲಿರುವ ಪಂದ್ಯವನ್ನು ಇಡೀ ಕ್ರಿಕೆಟ್ ಜಗತ್ತೇ ಕಾತರದಿಂದ ಎದುರು ನೋಡುತ್ತಿದೆ. ಈ ಪಂದ್ಯ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಪಾಲಿಗೆ ಸೇಡಿನ ಪಂದ್ಯವೂ ಹೌದು. ಕಳೆದ ವರ್ಷ ದುಬೈನಲ್ಲೇ ನಡೆದಿದ್ದ ಐಸಿಸಿ ಟಿ20 ವಿಶ್ವಕಪ್’ನ ತನ್ನ ಮೊದಲ ಪಂದ್ಯದಲ್ಲೇ ಭಾರತ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 10 ವಿಕೆಟ್’ಗಳಿಂದ ಹೀನಾಯ ಸೋಲು ಕಂಡಿತ್ತು. ಆ ಪಂದ್ಯಕ್ಕೆ ಸೇಡು ತೀರಿಸಿಕೊಳ್ಳಲು ರೋಹಿತ್ ಶರ್ಮಾ ಬಳಗ ಪಣ ತೊಟ್ಟಿದೆ.
ಇದನ್ನೂ ಓದಿ : Asia Cup 2022 : ಭಾರತ Vs ಪಾಕ್ ಮೆಗಾ ಫೈಟ್, ಸೇಡಿನ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ XI ಔಟ್
ಇದನ್ನೂ ಓದಿ : Virat Kohli not touch bat : “10 ವರ್ಷಗಳಲ್ಲಿ ಮೊದಲ ಬಾರಿ ಒಂದು ತಿಂಗಳು ಬ್ಯಾಟ್ ಮುಟ್ಟಲೇ ಇಲ್ಲ”
Team India Head Coach Rahul Dravid Returns India vs Pakistan Asia Cup 2022