India Tour of Zimbabwe : ಇಂದು ಜಿಂಬಾಬ್ವೆಗೆ ಹಾರಲಿದೆ ಕೆ.ಎಲ್ ರಾಹುಲ್ ಸಾರಥ್ಯದ ಟೀಮ್ ಇಂಡಿಯಾ

ಮುಂಬೈ: (India Tour of Zimbabwe) ಕನ್ನಡಿಗ ಕೆ.ಎಲ್ ರಾಹುಲ್ ನಾಯಕತ್ವದ ಭಾರತ ಕ್ರಿಕೆಟ್ ತಂಡ, 3 ಪಂದ್ಯಗಳ ಏಕದಿನ ಸರಣಿಗಾಗಿ ಶನಿವಾರ ರಾತ್ರಿ ಜಿಂಬಾಬ್ವೆಗೆ ಪ್ರಯಾಣ ಬೆಳೆಸಲಿದೆ. ಜಿಂಬಾಬ್ವೆಯಲ್ಲಿ ಭಾರತ ತಂಡ 3 ಏಕದಿನ ಪಂದ್ಯಗಳನ್ನಾಡಲಿದ್ದು, ಪಂದ್ಯಗಳು ಕ್ರಮವಾಗಿ ಆಗಸ್ಟ್ 18, 20 ಮತ್ತು 22ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿದೆ. ಕೆ.ಎಲ್ ರಾಹುಲ್ (India Cricket Team Captain KL Rahul) ನಾಯಕತ್ವದ ತಂಡಕ್ಕೆ ಅನುಭವಿ ಎಡಗೈ ಆರಂಭಕಾರ ಶಿಖರ್ ಧವನ್ ಉಪನಾಯಕ ರಾಗಿದ್ದಾರೆ. ರಾಹುಲ್ ಲಭ್ಯತೆಗೂ ಮುನ್ನವೇ ಜಿಂಬಾಬ್ವೆ ಪ್ರವಾಸಕ್ಕೆ ಟೀಮ್ ಇಂಡಿಯಾದ ಆಯ್ಕೆ ನಡೆದಿತ್ತು. ಆಗ ಶಿಖರ್ ಧವನ್ ಅವರನ್ನು ನಾಯಕ ನನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ ರಾಹುಲ್ ಫಿಟ್ ಆಗುತ್ತಿದ್ದಂತೆ ತಂಡಕ್ಕೆ ಮರಳಿರುವ ಕಾರಣ, ಕನ್ನಡಿಗನಿಗೆ ನಾಯಕ ಪಟ್ಟ ಕಟ್ಟಲಾಗಿದೆ.

ಸ್ಪೋರ್ಟ್ಸ್ ಹರ್ನಿಯಾ (Sports Hernia) ಮತ್ತು ಕೋವಿಡ್-19ನಿಂದ ಚೇತರಿಸಿಕೊಂಡು ಫಿಟ್ ಆಗಿರುವ ರಾಹುಲ್, ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಕಂಬ್ಯಾಕ್ ಮಾಡಲಿದ್ದಾರೆ. ಕಳೆದ ಐಪಿಎಲ್ ಟೂರ್ನಿಯ ನಂತರ ರಾಹುಲ್ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿಲ್ಲ. ಗಾಯ ಹಾಗೂ ಕೋವಿಡ್ ಕಾರಣದಿಂದ ಕಳೆದ 3 ತಿಂಗಳಲ್ಲಿ ರಾಹುಲ್ ಒಟ್ಟು 7 ಸರಣಿಗಳಿಗೆ ಅಲಭ್ಯರಾಗಿದ್ದರು.

ಆಗಸ್ಟ್ 27ರಿಂದ ಯುಎಇನಲ್ ನಡೆಯಲಿರುವ ಏಷ್ಯಾ ಕಪ್ ಟೂರ್ನಿಗೂ ರಾಹುಲ್ ಆಯ್ಕೆಯಾಗಿದ್ದು, ಅದಕ್ಕೆ ಪೂರ್ವಭಾವಿಯಾಗಿ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಆಡಲಿದ್ದಾರೆ. ಜಿಂಬಾಬ್ವೆ ಪ್ರವಾಸಕ್ಕೆ ಕೋಚ್ ರಾಹುಲ್ ದ್ರಾವಿಡ್ ವಿಶ್ರಾಂತಿ ಬಯಸಿರುವ ಕಾರಣಣ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ (VVI Laxman) ಟೀಮ್ ಇಂಡಿಯಾದ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ಜಿಂಬಾಬ್ವೆ ಪ್ರವಾಸಕ್ಕೆ ಭಾರತ ತಂಡ:
ಕೆ.ಎಲ್ ರಾಹುಲ್ (ನಾಯಕ), ಶಿಖರ್ ಧವನ್ (ಉಪನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ದೀಪಕ್ ಹೂಡ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.

ನಾಯಕ ಕೆ.ಎಲ್ ರಾಹುಲ್ ಕಳೆದ ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿರುವ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದಾದ ಐದೇ ದಿನಗಳಲ್ಲಿ ರಾಹುಲ್ ಅವರಿಗೆ ಶುಭ ಸುದ್ದಿ ಸಿಕ್ಕಿದ್ದು, ಭಾರತ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜಿಂಬಾಬ್ವೆ ಪ್ರವಾಸದ ಹಿನ್ನೆಲೆಯಲ್ಲಿ ಬುಧವಾರವೇ ಮುಂಬೈ ತಲುಪಿದ್ದ ರಾಹುಲ್ ಶನಿವಾರ ತಂಡದೊಂದಿಗೆ ಜಿಂಬಾಬ್ವೆಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ : Ganguly and Morgan : ಭಾರತದ 75ನೇ ಸ್ವಾತಂತ್ರ್ಯೋತ್ಸವ: ಸೆಪ್ಟೆಂಬರ್ 16ರಂದು ಕೋಲ್ಕತಾದಲ್ಲಿ ಭಾರತ Vs ವಿಶ್ವ ಇಲೆವೆನ್ ಕ್ರಿಕೆಟ್ ಮ್ಯಾಚ್

ಇದನ್ನೂ ಓದಿ : VVS Laxman Coach : ದ್ರಾವಿಡ್ ಸ್ಥಾನಕ್ಕೆ ಲಕ್ಷ್ಮಣ್.. ಭಾರತ ಕ್ರಿಕೆಟ್ ತಂಡಕ್ಕೆ ವಿವಿಎಸ್ ಲಕ್ಷ್ಮಣ್ ಕೋಚ್ !

Team India led by KL Rahul will fly today India Tour of Zimbabwe

Comments are closed.