ಮುಂಬೈ: (Team India New Jersey ) ಆಸ್ಟ್ರೇಲಿಯಾದಲ್ಲಿ ಮುಂದಿನ ತಿಂಗಳು ಆರಂಭವಾಗಲಿರುವ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ (ICC T20 World Cup) ಟೂರ್ನಿ ಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಹೊಸ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ವಿಶ್ವಕಪ್’ನಲ್ಲಿ ಆಡಲಿರುವ ಭಾರತ ತಂಡದ ಜೆರ್ಸಿಯನ್ನು ಟೀಮ್ ಇಂಡಿಯಾದ ಅಧಿಕೃತ ಕಿಟ್ ಸ್ಪಾನ್ಸರ್ ಸಂಸ್ಥೆ ಎಂಪಿಎಲ್ ಸ್ಪೋರ್ಟ್ಸ್ (MPL Sports) ಮುಂಬೈನಲ್ಲಿ ಭಾನುವಾರ ಅನಾವರಣ ಮಾಡಿದೆ. ಟಿ20 ವಿಶ್ವಕಪ್’ಗಾಗಿ ಟೀಮ್ ಇಂಡಿಯಾ ಆಟಗಾರರಿಗೆ ತಿಳಿ ನೀಲಿ ಬಣ್ಣದ ಜೆರ್ಸಿಯನ್ನು ಸಮವಸ್ತ್ರ ಸಿದ್ದಪಡಿಸಲಾಗಿದೆ.
2007ರ ಟಿ20 ವಿಶ್ವಕಪ್ ಚಾಂಪಿಯನ್ ಭಾರತ ತಂಡ ಅಕ್ಟೋಬರ್ 23ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುವ ತನ್ನ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಟೂರ್ನಿಗೂ ಮೊದಲು ರೋಹಿತ್ ಶರ್ಮಾ ಬಳಗ ಆಸ್ಟ್ರೇಲಿಯಾ (ಅಕ್ಟೋಬರ್ 17) ಮತ್ತು ನ್ಯೂಜಿಲೆಂಡ್ (ಅಕ್ಟೋಬರ್ 19) ವಿರುದ್ಧ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ.
ಟಿ20 ವಿಶ್ವಕಪ್’ನಲ್ಲಿ ಆಡಲಿರುವ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆರ್ಷದೀಪ್ ಸಿಂಗ್.
ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.
One title 🏆
— BCCI (@BCCI) September 12, 2022
One goal 🎯
Our squad 💪🏻#TeamIndia | #T20WorldCup pic.twitter.com/Dw9fWinHYQ
ಇದನ್ನೂ ಓದಿ : Mohammed Shami Covid Positive : ಮೊಹಮ್ಮದ್ ಶಮಿಗೆ ಕೋವಿಡ್ ಪಾಸಿಟಿವ್.. ಕಂಬ್ಯಾಕ್ಗೆ ಮೊದಲೇ ಶಾಕ್, ಆಸೀಸ್ ಸರಣಿಯಿಂದ ಔಟ್
ಇದನ್ನೂ ಓದಿ : India Vs Australia T20: ಮೊಹಾಲಿಯಲ್ಲಿ ನಾಳೆ ಮೊದಲ ಪಂದ್ಯ.., ಹೀಗಿದೆ ಭಾರತದ ಪ್ಲೇಯಿಂಗ್ XI
Team India New Jersey ICC T20 World Cup MPL Sports