KL Rahul and Ravindra Jadeja ruled out : ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲಿನ ರುಚಿ ಕಂಡಿರುವ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮೊದಲ ಟೆಸ್ಟ್‌ನಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದ ಕನ್ನಡಿಗ ಕೆಎಲ್ ರಾಹುಲ್ (KL Rahul) ಹಾಗೂ ರವೀಂದ್ರ ಜಡೇಜಾ (Ravindra Jadeja) ಗಾಯಗೊಂಡಿದ್ದಾರೆ. ಹೀಗಾಗಿ ಇಬ್ಬರು ಆಟಗಾರರು ಇಂಗ್ಲೆಂಡ್ ವಿರುದ್ದದ ಎರಡನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ 4 ನೇ ದಿನದ ಆಟದ ವೇಳೆಯಲ್ಲಿ ರವೀಂದ್ರ ಜಡೇಜಾ ಮಂಡಿರಜ್ಜು ಗಾಯಗೊಂಡಿದ್ದರು. ಅಲ್ಲದೇ ಕೆಎಲ್ ರಾಹುಲ್ ಬಲ ಕ್ವಾಡ್ರೈಸ್ಪ್ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಇಬ್ಬರೂ ಕೂಡ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಇಬ್ಬರು ಆಟಗಾರರ ಆರೋಗ್ಯ ಸ್ಥಿತಿಯನ್ನು ಬಿಸಿಸಿಐ ವೈದ್ಯರ ತಂಡ ಪರಿಶೀಲನೆಯನ್ನು ನಡೆಸುತ್ತಿದೆ.

ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಅನುಪಸ್ಥಿತಿಯಲ್ಲಿ ಸರ್ಫರಾಜ್ ಖಾನ್, ಸೌರಭ್ ಕುಮಾರ್ ಮತ್ತು ವಾಷಿಂಗ್ಟನ್ ಸುಂದರ್ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಇನ್ನು ಫೆಬ್ರವರಿ 1, 2024 ರಂದು ಅಹಮದಾಬಾದ್‌ನಲ್ಲಿ ಪ್ರಾರಂಭವಾಗುವ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಮೂರನೇ ಮತ್ತು ಅಂತಿಮ ಬಹು-ದಿನದ ಪಂದ್ಯಕ್ಕಾಗಿ ಭಾರತ ಎ ತಂಡದಲ್ಲಿ ವಾಷಿಂಗ್ಟನ್ ಸುಂದರ್ ಬದಲಿಗೆ ಸರನ್ಶ್ ಜೈನ್ ಅವರನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ : ಕ್ರಿಕೆಟ್ ಪ್ರಿಯರಿಗೆ ಗುಡ್‌ನ್ಯೂಸ್ : ಈ ಬಾರಿಯೂ JioCinema ನಲ್ಲಿ IPL 2024 ಉಚಿತ
ಟೀಂ ಇಂಡಿಯಾದ ಆಟಗಾರ ಅವೇಶ್ ಖಾನ್ ಸದ್ಯ ರಣಜಿ ಟ್ರೋಫಿ ತಂಡದಲ್ಲಿಯೇ ಪ್ರಯಾಣ ಮುಂದುವರಿಸಿದ್ದಾರೆ. ಒಂದೊಮ್ಮೆ ಅಗತ್ಯಬಿದ್ದರೆ ಮಾತ್ರವೇ ಭಾರತ ಟೆಸ್ಟ್ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಸದ್ಯ ಮಧ್ಯಮ ಕ್ರಮಾಂಕದಲ್ಲಿ ಭಾರತ ತಂಡಕ್ಕೆ ನೆರವಾಗುತ್ತಿದ್ದ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಅವರು ಎರಡನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿರುವುದು ಆಘಾತ ಮೂಡಿಸಿದೆ.

ಇದನ್ನೂ ಓದಿ : ಭಾರತ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕ
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್‌ಗೆ ಭಾರತ ತಂಡ :
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್
ಇದನ್ನೂ ಓದಿ : ಐಪಿಎಲ್‌ನ ಈ 5 ತಂಡಗಳ ಸೇರ್ಪಡೆ ಆಗ್ತಾರಾ ಶಮರ್ ಜೋಸೆಫ್ !
Team India Player KL Rahul and Ravindra Jadeja ruled out for India vs England 2nd Test