Team India training camp begins : ಆಲೂರಿನಲ್ಲಿ ಟೀಮ್ ಇಂಡಿಯಾ ಏಷ್ಯಾ ಕಪ್ ಕ್ಯಾಂಪ್; ವಿರಾಟ್, ರೋಹಿತ್’ಗೆ ಇಂದು ಮೆಡಿಕಲ್ ಚೆಕಪ್!

ಬೆಂಗಳೂರು: ಏಷ್ಯಾ ಕಪ್ 2023 (Asia Cup 2023) ಟೂರ್ನಿಗೆ ಪೂರ್ವಭಾವಿಯಾಗಿ ಭಾರತ ತಂಡದ ಅಭ್ಯಾಸ ಶಿಬಿರ (Team India training camp begins) ಬೆಂಗಳೂರಿನ ಹೊರವಲಯದ ಆಲೂರಿನಲ್ಲಿರುವ KSCA ಕ್ರೀಡಾಂಗಣದಲ್ಲಿ ಗುರುವಾರ ಆರಂಭಗೊಂಡಿದೆ.

ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡಿದ ಆಟಗಾರರನ್ನು ಹೊರತು ಪಡಿಸಿ ಏಷ್ಯಾ ಕಪ್ ತಂಡಕ್ಕೆ ಆಯ್ಕೆಯಾಗಿರುವ ಎಲ್ಲಾ ಆಟಗಾರರು ಟೀಮ್ ಇಂಡಿಯಾ ಅಭ್ಯಾಸ ಶಿಬಿರಕ್ಕೆ ಹಾಜರಾಗಿದ್ದಾರೆ. ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಸಹಿತ ಪ್ರಮುಖ ಆಟಗಾರರೆಲ್ಲಾ ಬುಧವಾರವೇ ಬೆಂಗಳೂರಿಗೆ ಆಗಮಿಸಿದ್ದಾರೆ. ಅಭ್ಯಾಸ ಶಿಬಿರದ ಮೊದಲ ದಿನ ಟೀಮ್ ಇಂಡಿಯಾ ಆಟಗಾರರಿಗೆ ಆಲೂರು ಮೈದಾನದಲ್ಲೇ ಮೆಡಿಕಲ್ ಚೆಕಪ್ ನಡೆಯಲಿದ್ದು, ಎಲ್ಲಾ ಆಟಗಾರರು ಫಿಟ್ನೆಸ್ ಟೆಸ್ಟ್’ಗೆ ಒಳಗಾಗಲಿದ್ದಾರೆ. ಶುಕ್ರವಾರದಿಂದ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಅಭ್ಯಾಸ ಆರಂಭವಾಗಲಿದ್ದಾರೆ.

ಐರ್ಲೆಂಡ್ ಟಿ20 ಸರಣಿಯಲ್ಲಿ ಆಡಿದ್ದ ವೇಗಿ ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ತಿಲಕ್ ವರ್ಮಾ ಮತ್ತು ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಶುಕ್ರವಾರ ಅಥವಾ ಶನಿವಾರ ಟೀಮ್ ಇಂಡಿಯಾ ಟ್ರೈನಿಂಗ್ ಕ್ಯಾಂಪ್ ಸೇರಿಕೊಳ್ಳಲಿದ್ದಾರೆ. ಏಷ್ಯಾ ಕಪ್ ಟೂರ್ನಿ ಆಗಸ್ಟ್ 31ರಂದು ಶ್ರೀಲಂಕಾದಲ್ಲಿ ಆರಂಭವಾಗಲಿದೆ. ಸೆಪ್ಟೆಂಬರ್ 2ರಂದು ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿರುವ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಭಾರತ ತಂಡ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ. ಟೂರ್ನಿಯ ಫೈನಲ್ ಪಂದ್ಯ ಸೆಪ್ಟೆಂಬರ್ 17ರಂದು ಕೊಲಂಬೊದಲ್ಲಿ ನಡೆಯಲಿದೆ.

ಏಷ್ಯಾ ಕಪ್ ಟೂರ್ನಿ ಭಾರತ ತಂಡ ಹೀಗಿದೆ (Team India for Asia Cup 2023)
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, (ಸಂಜು ಸ್ಯಾಮ್ಸನ್, ಮೀಸಲು ಆಟಗಾರ). ಇದನ್ನೂ ಓದಿ : Heath Streak : ಜಿಂಬಾಬ್ವೆಯ ಮಾಜಿ ನಾಯಕ ಹೀತ್ ಸ್ಟ್ರೀಕ್ ಇನ್ನಿಲ್ಲ : ಫೇಕ್‌ ನ್ಯೂಸ್

ಏಷ್ಯಾ ಕಪ್ 2023 ಟೂರ್ನಿಯ ಲೀಗ್ ಪಂದ್ಯಗಳ ವೇಳಾಪಟ್ಟಿ (Asia Cup 2023 schedule)
ಆಗಸ್ಟ್ 30: ಪಾಕಿಸ್ತಾನ Vs ನೇಪಾಳ (ಮಧ್ಯಾಹ್ನ 3ಕ್ಕೆ, ಮುಲ್ತಾನ್)
ಆಗಸ್ಟ್ 31: ಶ್ರೀಲಂಕಾ Vs ಬಾಂಗ್ಲಾದೇಶ (ಮಧ್ಯಾಹ್ನ 3ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 2: ಭಾರತ Vs ಪಾಕಿಸ್ತಾನ (ಮಧ್ಯಾಹ್ನ 3ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 3: ಅಫ್ಘಾನಿಸ್ತಾನ Vs ಬಾಂಗ್ಲಾದೇಶ (ಮಧ್ಯಾಹ್ನ 3ಕ್ಕೆ, ಲಾಹೋರ್)
ಸೆಪ್ಟೆಂಬರ್ 4: ಭಾರತ Vs ನೇಪಾಳ (ಮಧ್ಯಾಹ್ನ 3ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 5: ಅಫ್ಘಾನಿಸ್ತಾನ Vs ಶ್ರೀಲಂಕಾ (ಮಧ್ಯಾಹ್ನ 3ಕ್ಕೆ, ಲಾಹೋರ್).

Team India training camp begins : Team India Asia Cup Camp at Alur; Virat, Rohit’s medical checkup today!

Comments are closed.