Tokyo Olympic : ಟೋಕಿಯೊ ಒಲಿಂಪಿಕ್ಸ್‌ ಗೆ ಆಳ್ವಾಸ್‌ನ ಇಬ್ಬರು ಕ್ರೀಡಾಪಟುಗಳು ಆಯ್ಕೆ

ಮೂಡಬಿದಿರೆ : ಜಪಾನಿನಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್‌ ನಲ್ಲಿ ಭಾರತವನ್ನು ಪ್ರತಿನಿಧಿಸುವ ತಂಡದಲ್ಲಿ ಮೂಡಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾಪಟು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಈ ಬಾರಿಯ ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಭಾಗವಹಿಸಲು ಆಳ್ವಾಸ್‌ ನ ಧನಲಕ್ಷ್ಮೀ ಹಾಗೂ ಶುಭಾ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಇಬ್ಬರೂ ಕೂಡ ಭಾರತ ತಂಡ 4×400ಮೀಟರ್‌ ಮಿಕ್ಸೆಡ್‌ ರಿಲೇ ತಂಡವನ್ನು ಪ್ರತಿನಿಧಿಸಲಿದ್ದಾರೆ. ಒಲಂಪಿಕ್ಸ್‌ ಗೆ ಆಯ್ಕೆಯಾಗಿರುವ ಕ್ರೀಡಾ ವಿದ್ಯಾರ್ಥಿಗಳಿಗೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ಅವರು ತಲಾ ಒಂದು ಲಕ್ಷ ರೂಪಾಯಿ ಪ್ರೋತ್ಸಾಹಧನ ಘೋಷಣೆ ಮಾಡಿದ್ದಾರೆ.

ಧನಲಕ್ಷ್ಮೀ ಹಾಗೂ ಶುಭಾ ಅವರು ಆಳ್ವಾಸ್‌ನ ಕ್ರೀಡಾ ವಿಭಾಗದಲ್ಲಿ ದತ್ತ ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. 2016-17ನೇ ಶೈಕ್ಷಣಿಕ ವರ್ಷದಿಂದಲೇ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿ ಮಂಗಳೂರು ವಿವಿ ಹಾಗೂ ಅಖಿಲ ಭಾರತ ಅಂತರ್‌ ವಿಶ್ವವಿದ್ಯಾನಿಲಯ ಕೂಟಗಳನ್ನು ಪ್ರತಿನಿಧಿಸಿದ್ದಾರೆ. ಅಲ್ಲದೇ ಹಲವು ಕ್ರೀಡಾಕೂಟಗಳಲ್ಲಿ ಪ್ರಶಸ್ತಿಯನ್ನು ಜಯಿಸಿದ್ದಾರೆ.

ಇದೀಗ ಒಲಿಂಪಿಕ್ಸ್‌ ಗೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿರೋ ಕುರಿತು ಕಾಲೇಜು ಆಡಳಿತ ಮಂಡಳಿ ಹಾಗೂ ಉಪನ್ಯಾಸಕರುಸಂತಸವನ್ನು ವ್ಯಕ್ತಪಡಿಸಿದ್ದಾರೆ.

Comments are closed.