Tokyo Olympics : ಟೋಕಿಯೋ ಒಲಿಂಪಿಕ್ಸ್ ಸೆಮಿಫೈನಲ್ ಪಂದ್ಯದಲ್ಲಿ ಸೋಲನ್ನು ಕಂಡಿದ್ದರು ಕೂಡ, ಕುಸ್ತಿಯ 65 ಕೆ.ಜಿ ವಿಭಾಗದಲ್ಲಿ ಭಾರತದ ಖ್ಯಾತ ಕುಸ್ತಿಪಟು ಭಜರಂಗ್ ಪುನಿಯ ಕಂಚಿನ ಪದಕ ಗೆದ್ದ ಭಾರತಕ್ಕೆ ಕೀರ್ತಿ ತಂದಿದ್ದಾರೆ. 65 ಕೆಜಿ ಫ್ರೀಸ್ಟೈಲ್ ವಿಭಾಗದ ಪಂದ್ಯದಲ್ಲಿ ಕಜಕಿಸ್ತಾನದ ದೌಲತ್ ನಿಯಾಜ್ಬೆಕವೊ ಅವರನ್ನು 8-0 ಅಂತರದಿಂದ ಸೋಲಿಸುವ ಮೂಲಕ ಭಜರಂಗ್ ಪೂನಿಯಾ ಅವರು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಸೆಮಿಫೈನಲ್ ಪಂದ್ಯದಲ್ಲಿಅಜರ್‌ಬೈಜಾನಿಯಾದ ಹಾಜಿ ಆಲಿಯಾವ್ ವಿರುದ್ಧ ಸೋಲನ್ನು ಕಾಣುವ ಮೂಲಕ ಫೈನಲ್ ಹಾದಿಯನ್ನು ತಪ್ಪಿಸಿಕೊಂಡಿದ್ದರು. ಆದರೆ ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಅದ್ಬುತ ಆಟವನ್ನು ಪ್ರದರ್ಶಿಸುವ ಮೂಲಕ ಎದುರಾಳಿಗೆ ಸುಲಭವಾಗಿ ಸೋಲಿನ ರುಚಿಯನ್ನು ತೋರಿಸಿದ್ದಾರೆ. ಆರಂಭದಿಂದಲೂ ಆಕ್ರಮಣಕಾರಿ ಆಟಕ್ಕೆ ಮುಂದಾಗಿದ್ದ ಭಜರಂಗ್ ಪೂನಿಯಾ ಎದುರಾಳಿ ಆಟಗಾರನಿಗೆ ಯಾವುದೇ ಅಂಕವನ್ನು ಗಳಿಸಲು ಅವಕಾಶವನ್ನೇ ನೀಡಲಿಲ್ಲ.
ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತ ಉತ್ತಮ ಸಾಧನೆ ಮಾಡುತ್ತಿದೆ. ಈಗಾಗಲೇ ಮೀರಾಬಾಯಿ ಚಾನು, ರವಿಕುಮಾರ್ ಬೆಳ್ಳಿ ಪದಕ ಗೆದ್ದರೆ, ಪಿವಿ ಸಿಂಧು, ಲವ್ಲಿನಾ ಬೋರ್ಗೊಹೈನ್ ಹಾಗೂ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದುಕೊಂಡಿದೆ. ಇದೀಗ ಬಜರಂಗ್ ಪುನಿಯಾ ಕೂಡ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಒಟ್ಟು ಪದಕ ಗಳಿಕೆಯ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ : Tokyo Olympics : ಮತ್ತೊಂದು ಪದಕದ ನಿರೀಕ್ಷೆಯಲ್ಲಿ ಭಾರತ : ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಭಜರಂಗ್ ಪುನಿಯ
(Tokyo Olympics 2021 Bajrang Punia wins bronze as India equal best ever Olympic haul of 6 medals)