ಟೋಕಿಯೋ : ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಟೊಕಿಯೋ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲೋದು ಖಚಿತವಾಗಿದೆ. ಬಾಕ್ಸಿಂಗ್‌ನಲ್ಲಿ ಸೆಮಿಫೈನಲ್ ಪವೇಶಿಸಿರುವ ಲವ್ಲಿನಾ ಭಾರತೀಯರ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ
ಅಸ್ಸಾಂನ 23 ವರ್ಷದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಮೊದಲ ಸುತ್ತನ್ನು ೩-೨ ರಿಂದ ಗೆಲ್ಲುವ ಮೂಲಕ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಟೋಕಿಯೋ ಒಲಿಂಪಿಕ್ಸ್ 2020 ರ ಮಹಿಳಾ ವಿಭಾಗದ 64-69 ಕೆ.ಜಿ ವಿಭಾಗದಲ್ಲಿ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.
ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಲವ್ಲಿನಾ ಬೊರ್ಗೊಹೈನ್ ಅವರು ಮಾಜಿ ವಿಶ್ವ ಚಾಂಪಿಯನ್ ತೈಪೆ ಚೀನಾದ ಚೆನ್ ನಿಯಾನ್-ಚಿನ್ ಅವರನ್ನು 4-1 ಅಂತರದಿಂದ ಗೆಲುವು ಕಂಡಿದ್ದಾರೆ. ಮೇರಿ ಕೋಮ್ ನಿರಾಸೆ ಮೂಡಿಸಿದ್ದರೆ, ಇದೀಗ ಲವ್ಲಿನಾ ಬೊರ್ಗೊಹೈನ್ ಭಾರತೀಯರ ಪದಕ ಕನಸಿನ ಆಸೆಯನ್ನು ಜೀವಂತವಾಗಿಟ್ಟಿದ್ದಾರೆ.