Mirabai Chanu : Tokyo 2020 ಒಲಿಂಪಿಕ್ಸ್‌ ನಲ್ಲಿ ಮೊದಲ ಪದಕ: ಬೆಳ್ಳಿ ಗೆದ್ದ ಮೀರಾಬಾಯಿ ಚಾನು

ಟೋಕಿಯೋ : ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಶುಭಾರಂಭ ಮಾಡಿದ್ದು, ವೇಟ್‌ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಮಹಿಳೆಯ 49 ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರ ಒಲಿಂಪಿಕ್ಸ್‌ನಲ್ಲಿ ಪದಕ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

ಮೀರಾಬಾಯಿ ಚಾನು ಸ್ನ್ಯಾಚ್‌ನಲ್ಲಿ 87 ಕೆ.ಜಿ. ಎತ್ತಿದ್ರೆ, ಕ್ಲೀನ್‌ ಮತ್ತು ಜರ್ಕ್‌ನಲ್ಲಿ 115 ಕೆ.ಜಿ. ಎತ್ತಿದ್ದಾರೆ. ಒಟ್ಟು 202 ಕೆ.ಜಿ ಎತ್ತುವ ಮೂಲಕ ಮೀರಾಬಾಯಿ ಚಾನು ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿಯ ಪದಕ ಜಯಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. 2020 ರ ಟೋಕಿಯೊ ಕ್ರೀಡಾಕೂಟದಲ್ಲಿ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 49 ಕೆಜಿ ತೂಕದ ಎತ್ತುವಿಕೆಯಲ್ಲಿ ಚೀನಾದ ಜೂ ಹುಯಿ ಹೂ ಒಟ್ಟು 210 ಕೆಜಿ ಎತ್ತುವಲ್ಲಿ ಚಿನ್ನದ ಪದಕ ಗೆದ್ದರೆ, ಇಂಡೋನೇಷ್ಯಾದ ವಿಂಡಿ ಕ್ಯಾಂಟಿಕಾ ಐಸಾ ಕಂಚಿನ ಪದಕ ಗೆದ್ದಿದ್ದಾರೆ. ಈ ಹಿಂದೆ ಸಿಡ್ನ ಒಲಿಂಪಿಕ್ಸ್‌ನಲ್ಲಿ ಕರ್ಣಂ ಮಲ್ಲೇಶ್ವರಿ ವೇಟ್‌ಲಿಫ್ಟರ್‌ ವಿಭಾಗದಲ್ಲಿ ಮೊದಲ ಬಾರಿಗೆ ಪದಕ ಜಯಿಸಿದ್ದರೆ, ಇದೀಗ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಎರಡನೇ ಎರಡನೇ ವೇಟ್‌ಲಿಫ್ಟರ್ ಅನ್ನೋ ಖ್ಯಾತಿಗೆ ಪಾತ್ರರಾಗಿದ್ದಾರೆ.

5 ವರ್ಷಗಳ ಹಿಂದೆ ನಡೆದ ರಿಯೋ ಒಲಿಂಪಿಕ್ಸ್‌ ನಲ್ಲಿ ಮೀರಾಬಾಯಿ ಕಳಪೆ ಪ್ರದರ್ಶನವನ್ನು ನೀಡಿದ್ದರು. ಆದರೆ 2021 ರ ಏಷ್ಯನ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮೀರಾ ಬಾಯಿ 119 ಕೆಜಿ ಕ್ಲೀನ್ ಮತ್ತು ಜರ್ಕ್‌ನಲ್ಲಿ ವಿಶ್ವ ದಾಖಲೆಯನ್ನು ಹೊಂದಿದೆ. ಇದೀಗ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

Comments are closed.