ಟೋಕಿಯೋ : ಕುಸ್ತಿಯಲ್ಲಿ ರವಿ ಕುಮಾರ್ ದಹಿಯಾ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಬೆನ್ನಲ್ಲೇ ಭಾರತ ಮತ್ತೊಂದು ಪದಕದ ನಿರೀಕ್ಷೆಯಲ್ಲಿದೆ. ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಕುಸ್ತಿಯಲ್ಲಿ ಭಾರತದ ಭಜರಂಗ್ ಪುನಿಯಾ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.
ಪುರುಷರ 65 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇರಾನಿನ ಕುಸ್ತಿಪಟು ಮೋರ್ತೆಜಾ ಗಿಯಾಸಿ ವಿರುದ್ಧ 2-1 ಅಂಕಗಳಿಂದ ಗೆಲುವು ಸಾಧಿಸಿದ್ದಾರೆ. ಟೋಕಿಯೋ ಒಲಿಂಪಿಕ್ಸ್ ನಲ್ಲಿ ಉತ್ತಮ ಆಟದ ಪ್ರದರ್ಶನ ನೀಡುತ್ತಿರುವ ಭಜರಂಗ್ ಪುನಿಯಾ ಪದಕ ಗೆಲುವಿನ ನಿರೀಕ್ಷೆಯಿದ್ದಾರೆ.
ಪ್ರೀ-ಕ್ವಾರ್ಟರ್ಫೈನಲ್ ಮುಖಾಮುಖಿಯಲ್ಲಿ ಬಜರಂಗ್, ಕಿರ್ಗಿಸ್ತಾನದ ಎರ್ನಾಜರ್ ಅಕ್ಮಟಾಲೀವ್ ವಿರುದ್ಧ ಮೇಲುಗೈ ಸಾಧಿಸಿದ್ದರು. ಇದುವರೆಗೆ ಕುಸ್ತಿಯಲ್ಲಿ57 ಕೆ.ಜಿ ವಿಭಾಗದಲ್ಲಿ ರವಿಕುಮಾರ್ ದಹಿಯಾ ಬೆಳ್ಳಿ ಪದಕ ಜಯಿಸಿದ್ದರು. 2012ರಲ್ಲಿ ನಡೆದ ಲಂಡನ್ ಒಲಿಂಪಿಕ್ಸ್‌ನಲ್ಲಿ ಸುಶೀಲ್ ಕುಮಾರ್ 66 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದರು.