Venkatesh Prasad – KL Rahul : ಕೆ.ಎಲ್ ರಾಹುಲ್ ಯಶಸ್ಸಿಗಾಗಿ ದೇವರಲ್ಲಿ ರಹಸ್ಯವಾಗಿ ಪ್ರಾರ್ಥಿಸಿದ ವೆಂಕಟೇಶ್ ಪ್ರಸಾದ್; ಇದೇನಾಶ್ಚರ್ಯ?

ಬೆಂಗಳೂರು: ಕರ್ನಾಟಕದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ (Venkatesh Prasad), ಮತ್ತೊಬ್ಬ ಕನ್ನಡಿಗ ಕ್ರಿಕೆಟರ್ ಕೆ.ಎಲ್ ರಾಹುಲ್ (KL Rahul) ಅವರ ಕಟು ಟೀಕಾಕಾರರಲ್ಲಿ ಒಬ್ಬರು. ರಾಹುಲ್ ಅವರ ಆಟದ ಬಗ್ಗೆ ವೆಂಕಟೇಶ್ ಪ್ರಸಾದ್ ಕೆಲ ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಕಟು ಟೀಕೆಗಳನ್ನು ಮಾಡಿದ್ದರು. ರಾಹುಲ್ ಅವರನ್ನು ಭಾರತ ತಂಡದಲ್ಲಿ ಆಡಿಸುತ್ತಿರುವುದೇ ದೊಡ್ಡ ಅಪರಾಧ ಎಂಬರ್ಥದಲ್ಲಿ ಟ್ವೀಟ್’ಗಳನ್ನು ಮಾಡಿದ್ದರು. ಇಂತಹ ವೆಂಕಟೇಶ್ ಪ್ರಸಾದ್ ಇದೀಗ ಉಲ್ಟಾ ಹೊಡೆದಿದ್ದಾರೆ. ರಾಹುಲ್ ಅವರ ಯಶಸ್ಸಿಗಾಗಿ ದೇವರಲ್ಲಿ ರಹಸ್ಯವಾಗಿ ಪ್ರಾರ್ಥಿಸಿರುವುದಾಗಿ ಟ್ವಿಟರ್’ನಲ್ಲಿ ಬರೆದುಕೊಂಡಿದ್ದಾರೆ.

ಸದ್ಯ ಅಮೆರಿಕದಲ್ಲಿರುವ ವೆಂಕಟೇಶ್ ಪ್ರಸಾದ್, ನ್ಯೂ ಜೆರ್ಸಿಯಲ್ಲಿ ಕೆ.ಎಲ್ ರಾಹುಲ್ ಅವರ ಮಾವ, ಬಾಲಿವುಡ್ ನಟ ಸುನೀಲ್ ಶೆಟ್ಟಿಯವರ (Suniel Shetty) ಜೊತೆ ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸುನೀಲ್ ಶೆಟ್ಟಿ ಅವರ ಜೊತೆಗಿನ ಫೋಟೋವನ್ನು ಟ್ವಿಟರ್’ನಲ್ಲಿ ಹಂಚಿಕೊಂಡಿರುವ ವೆಂಕಟೇಶ್ ಪ್ರಸಾದ್, ಕೆಲ ಸಾಲುಗಳನ್ನು ಬರೆದಿದ್ದಾರೆ.

“ಅಣ್ಣಾ (ಸುನೀಲ್ ಶೆಟ್ಟಿ) ಅವರೊಂದಿಗೆ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದೆ. ಭಾರತದ ಎಲ್ಲಾ ಪ್ರಜೆಗಳ ಯೋಗಕ್ಷೇಮಕ್ಕಾಗಿ ಮತ್ತು ಭಾರತ ತಂಡವು ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಲಿ ಎಂದು ಪ್ರಾರ್ಥಿಸಿದೆ. ಕೆ.ಎಲ್‌ ರಾಹುಲ್ ಅವರಿಗಾಗಿಯೂ ದೇವರಲ್ಲಿ ರಹಸ್ಯವಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ. ರಾಹುಲ್ ವಿಶ್ವಕಪ್‌’ನಲ್ಲಿ ಶ್ರೇಷ್ಠ ಪ್ರದರ್ಶನ ತೋರಿ, ನನ್ನಂತಹ ಟೀಕಾಕಾರರ ಬಾಯಿ ಮುಚ್ಚಿಸುವಂತಹ ಆಟವಾಡಲಿ ಎಂದು ಪ್ರಾರ್ಥಿಸಿದ್ದೇನೆ,’’ ಎಂದು ವೆಂಕಟೇಶ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

31 ವರ್ಷದ ಕೆ.ಎಲ್ ರಾಹುಲ್ ಕಳೆದ ಜನವರಿಯಲ್ಲಿ ಸುನೀಲ್ ಶೆಟ್ಟಿಯವರ ಪುತ್ರಿ ಆತಿಯಾ ಶೆಟ್ಟಿಯವರನ್ನ ಮುಂಬೈನಲ್ಲಿ ವಿವಾಹವಾಗಿದ್ದರು. ಗಾಯದಿಂದ ಚೇತರಿಸಿಕೊಂಡು ಏಷ್ಯಾ ಕಪ್ ಟೂರ್ನಿಗೆ ಆಯ್ಕೆಯಾಗಿರುವ ರಾಹುಲ್, ಟೀಮ್ ಇಂಡಿಯಾ ಕಂಬ್ಯಾಕ್ ಅನ್ನು ಎದುರು ನೋಡುತ್ತಿದ್ದಾರೆ. ಏಷ್ಯಾ ಕಪ್ ಟೂರ್ನಿ ಆಗಸ್ಟ್ 31ರಂದು ಶ್ರೀಲಂಕಾದಲ್ಲಿ ಆರಂಭವಾಗಲಿದೆ. ಸೆಪ್ಟೆಂಬರ್ 2ರಂದು ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿರುವ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಭಾರತ ತಂಡ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.

ಏಷ್ಯಾ ಕಪ್ ಟೂರ್ನಿ ಭಾರತ ತಂಡ ಹೀಗಿದೆ (Team India for Asia Cup 2023)
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, (ಸಂಜು ಸ್ಯಾಮ್ಸನ್, ಮೀಸಲು ಆಟಗಾರ). ಇದನ್ನೂ ಓದಿ : Yuzvendra Chahal’s wife Dhanashree Verma: ಏಷ್ಯಾ ಕಪ್ ತಂಡದಿಂದ ಚಹಲ್ ಔಟ್, ಬಿಸಿಸಿಐ ವಿರುದ್ಧ ಕೋಪ ಹೊರ ಹಾಕಿದ ಚಹಲ್ ಪತ್ನಿ ಧನಶ್ರೀ

ಏಷ್ಯಾ ಕಪ್ 2023 ಟೂರ್ನಿಯ ಲೀಗ್ ಪಂದ್ಯಗಳ ವೇಳಾಪಟ್ಟಿ (Asia Cup 2023 schedule)
ಆಗಸ್ಟ್ 30: ಪಾಕಿಸ್ತಾನ Vs ನೇಪಾಳ (ಬೆಳಗ್ಗೆ 10ಕ್ಕೆ, ಮುಲ್ತಾನ್)
ಆಗಸ್ಟ್ 31: ಶ್ರೀಲಂಕಾ Vs ಬಾಂಗ್ಲಾದೇಶ (ಬೆಳಗ್ಗೆ 9.30ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 2: ಭಾರತ Vs ಪಾಕಿಸ್ತಾನ (ಬೆಳಗ್ಗೆ 9.30ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 3: ಅಫ್ಘಾನಿಸ್ತಾನ Vs ಬಾಂಗ್ಲಾದೇಶ (ಬೆಳಗ್ಗೆ 9.30ಕ್ಕೆ, ಲಾಹೋರ್)
ಸೆಪ್ಟೆಂಬರ್ 4: ಭಾರತ Vs ನೇಪಾಳ (ಬೆಳಗ್ಗೆ 9.30ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 5: ಅಫ್ಘಾನಿಸ್ತಾನ Vs ಶ್ರೀಲಂಕಾ (ಬೆಳಗ್ಗೆ 9.30ಕ್ಕೆ, ಲಾಹೋರ್).

Venkatesh Prasad – KL Rahul : Venkatesh Prasad secretly prayed to God for KL Rahul’s success; Is this a surprise?

Comments are closed.