Virat Kohli-Rohit Retirement Secret : ಮುಂಬೈ: ಟಿ20 ವಿಶ್ವಕಪ್ ಚಾಂಪಿಯನ್ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ರನ್ ಮಷಿನ್ ವಿರಾಟ್ ಕೊಹ್ಲಿ (Virat Kohli), ಟಿ20 ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಏಕದಿನ ಹಾಗೂ ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

ಜೂನ್ 29ರಂದು ವೆಸ್ಟ್ ಇಂಡೀಸ್’ನ ಬಾರ್ಬೆಡೋಸ್’ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದು ಭಾರತ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟಿ20 ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಟೀಮ್ ಇಂಡಿಯಾದ ನೂತನ ಕೋಚ್ ಗೌತಮ್ ಗಂಭೀರ್ (Gautam Gambhir), ಭಾರತ ತಂಡದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಭವಿಷ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ.
ಶ್ರೀಲಂಕಾ ಪ್ರವಾಸಕ್ಕೆ ತೆರಳುವ ಮುನ್ನ ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿದ ಗೌತಮ್ ಗಂಭೀರ್, ರೋಹಿತ್ ಮತ್ತು ಕೊಹ್ಲಿ ಬಗ್ಗೆ ಮಾತನಾಡಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕಳೆದ 15 ವರ್ಷಗಳಿಂದ ಭಾರತ ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಟೀಮ್ ಇಂಡಿಯಾದ ಬ್ಯಾಟಿಂಗ್ ಆಧಾರಸ್ಥಂಭಗಳಾಗಿರುವ ಈ ಇಬ್ಬರು ಇತ್ತೀಚೆಗೆ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಪಟ್ಟಕ್ಕೇರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಟಿ20 ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿರುವ ಕೊಹ್ಲಿ ಮತ್ತು ರೋಹಿತ್ ಏಕದಿನ ಹಾಗೂ ಟೆಸ್ಟ್ ಪಂದ್ಯಗಳಲ್ಲಿ ಇನ್ನಷ್ಟು ವರ್ಷ ಆಡಲಿದ್ದಾರೆ. ಆದರೆ ಅದು ಎಲ್ಲಿಯವರೆಗೆ? ಈ ಪ್ರಶ್ನೆಗೆ ಸ್ವತಃ ಭಾರತ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಇಂಟ್ರೆಸ್ಟಿಂಗ್ ಉತ್ತರ ಕೊಟ್ಟಿದ್ದಾರೆ. “ಟಿ20 ವಿಶ್ವಕಪ್ ಇರಲಿ, ಏಕದಿನ ವಿಶ್ವಕಪ್ ಇರಲಿ.. ದೊಡ್ಡ ಟೂರ್ನಿಗಳಲ್ಲಿ ತಾವೇನು ಮಾಡಬಲ್ಲೆವು ಎಂಬುದು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸಾಬೀತು ಮಾಡಿದ್ದಾರೆ.
ಇದನ್ನೂ ಓದಿ : KL Rahul RCB: ಕನ್ನಡಿಗರಿಗೆ ಗುಡ್ ನ್ಯೂಸ್, ರಾಹುಲ್ RCB ಪರ ಆಡುವುದು ಪಕ್ಕಾ
ಇಬ್ಬರಲ್ಲೂ ಇನ್ನೂ ಸಾಕಷ್ಟು ಕ್ರಿಕೆಟ್ ಬಾಕಿ ಉಳಿದಿದೆ ಎಂಬುದನ್ನು ನಾನು ಸ್ಪಷ್ಟವಾಗಿ ಹೇಳಬಲ್ಲೆ. ಮುಖ್ಯವಾಗಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಹಾಗೂ ಆಸ್ಟ್ರೇಲಿಯಾ ಪ್ರವಾಸ ಭಾರತದ ಮುಂದಿವೆ. ಇಬ್ಬರೂ ಫಿಟ್ನೆಸ್ ಕಾಯ್ದುಕೊಂಡರೆ 2027ರ ಐಸಿಸಿ ಏಕದಿನ ವಿಶ್ವಕಪ್’ನಲ್ಲೂ ಆಡಬಹುದು” ಎಂದು ಗಂಭೀರ್ ತಿಳಿಸಿದ್ದಾರೆ.
ಇದನ್ನೂ ಓದಿ: Maharaja Trophy T20: ಮಯಾಂಕ್ To ಮನೀಶ್ ಪಾಂಡೆ, ಯಾರು ಯಾವ ಯಾವ ತಂಡದಲ್ಲಿ?
ಟಿ20 ವಿಶ್ವಕಪ್ ಬೆನ್ನಲ್ಲೇ ವಿಶ್ರಾಂತಿ ಬಯಸಿದ್ದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದರು. ಆದರೆ ಕೋಚ್ ಗೌತಮ್ ಗಂಭೀರ್ ಅವರ ವಿಶೇಷ ಮನವಿಯ ಮೇರೆಗೆ ಇಬ್ಬರೂ ಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲು ನಿರ್ಧರಿಸಿದ್ದಾರೆ. ಸಿಂಹಳೀಯರ ವಿರುದ್ಧದ ಏಕದಿನ ಸರಣಿ ಆಗಸ್ಟ್ 2ರಂದು ಆರಂಭವಾಗಲಿದ್ದು, ಮೂರೂ ಪಂದ್ಯಗಳು ಕೊಲಂಬೊದ ಆರ್.ಪ್ರೇಮದಾಸ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿವೆ.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.
ಇದನ್ನೂ ಓದಿ : Smriti Mandhana: ವಿಶೇಷ ಅಭಿಮಾನಿಗೆ ಫೋನ್ ಗಿಫ್ಟ್ ನೀಡಿದ ಸ್ಮೃತಿ ಮಂಧಾನ
Virat Kohli & Rohit Sharma Coach Gambhir Reveals Kohli-Rohit Retirement Secret