Virat Kohli : Big Exclusive: ಭಾರತ ಟೆಸ್ಟ್ ತಂಡಕ್ಕೆ ಮತ್ತೆ ಕಿಂಗ್ ಕೊಹ್ಲಿ ಕ್ಯಾಪ್ಟನ್, ಸದ್ಯದಲ್ಲೇ ಘೋಷಣೆ?

ಬೆಂಗಳೂರು: ಕಿಂಗ್ ಖ್ಯಾತಿಯ ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕನಾಗಿ (Virat Kohli to be nect test captain) ಮತ್ತೆ ನೇಮಕಗೊಳ್ಳಲಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಬಿಸಿಸಿಐ ಈ ನಿರ್ಧಾರ ಪ್ರಕಟಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ (WTC final 2023) ಸೋಲಿನ ನಂತರ ರೋಹಿತ್ ಶರ್ಮಾ ಅವರನ್ನು ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಸುವ ಚಿಂತನೆ ಬಿಸಿಸಿಐ ಮುಂದಿದೆ. ಟೆಸ್ಟ್ ತಂಡದಲ್ಲಿ ಈ ಹಿಂದಿನ ಆಕ್ರಮಣಕಾರಿ ಮನೋಭಾವ, ಹೋರಾಟದ ಕಿಚ್ಚು ಮಾಯವಾಗಿರುವ ಕಾರಣ, ಮತ್ತೆ ವಿರಾಟ್ ಕೊಹ್ಲಿಗೆ ನಾಯಕಪಟ್ಟ ಕಟ್ಟುವ ಸಾಧ್ಯತೆಯಿದೆ.

ಭಾರತ ತಂಡ ಅತ್ಯಂತ ಯಶಸ್ವಿ ಟೆಸ್ಟ್ ನಾಯಕನಾಗಿರುವ ವಿರಾಟ್ ಕೊಹ್ಲಿ 2022ರ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಟಿ20 ನಾಯಕತ್ವ ತ್ಯಜಿಸಿದ್ದ ಕೊಹ್ಲಿ ಅವರನ್ನು ನಂತರ ಏಕದಿನ ತಂಡದ ನಾಯಕತ್ವದಿಂದ ಬಿಸಿಸಿಐ ಕೆಳಗಿಳಿಸಿತ್ತು. ಇದರಿಂದ ಬೇಸರಗೊಂಡಿದ್ದ ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವಕ್ಕೂ ಗುಡ್ ಬೈ ಹೇಳಿದ್ದರು. ನಂತರ ರೋಹಿತ್ ಶರ್ಮಾ ಟೆಸ್ಟ್ ಕ್ಯಾಪ್ಟನ್ ಆಗಿ ನೇಮಕಗೊಂಡಿದ್ದರು. ರೋಹಿತ್ ಶರ್ಮಾ ನಾಯಕತ್ವದಲ್ಲಿ 7 ಟೆಸ್ಟ್ ಪಂದ್ಯಗಳನ್ನಾಡಿರುವ ಭಾರತ 4 ಗೆಲುವು, 2 ಸೋಲು ಹಾಗೂ ಒಂದು ಡ್ರಾ ಫಲಿತಾಂಶ ಕಂಡಿದೆ.

36 ವರ್ಷದ ರೋಹಿತ್ ಶರ್ಮಾ ಅವರ ಫಿಟ್ನೆಸ್ ಬಿಸಿಸಿಐಗೆ ದೊಡ್ಡ ಸಮಸ್ಯೆ. ಹೀಗಾಗಿ ಮುಂದಿನ WTC ಋತುವಿನಲ್ಲಿ ರೋಹಿತ್ ಶರ್ಮಾ ಆಡುವ ಬಗ್ಗೆ ಅನುಮಾನಗಳಿವೆ. ಈ ಕಾರಣದಿಂದ ಹೊಸ ನಾಯಕನನ್ನು ಆಯ್ಕೆ ಮಾಡಲೇಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ. ಕನ್ನಡಿಗ ಕೆ.ಎಲ್ ರಾಹುಲ್ ಪದೇ ಪದೇ ಗಾಯದ ಸಮಸ್ಯೆಗೊಳಗಾಗುತ್ತಿರುವ ಕಾರಣ ನಾಯಕತ್ವದ ರೇಸ್’ನಲ್ಲಿಲ್ಲ. ಇನ್ನು ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆಗೆ ನಾಯಕತ್ವ ನೀಡುವ ಸ್ಥಿತಿಯಲ್ಲೂ ಇಲ್ಲ. ಯುವ ಆಟಗಾರರು ಈಗಷ್ಟೇ ಟೆಸ್ಟ್ ಕ್ರಿಕೆಟ್’ನಲ್ಲಿ ಕಣ್ಣು ಬಿಡುತ್ತಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಅವರಿಗೇ ಭಾರತ ಟೆಸ್ಟ್ ತಂಡದ ನಾಯಕತ್ವ ಒಲಿದರೆ ಅಚ್ಚರಿ ಪಡಬೇಕಿಲ್ಲ.

ಇದನ್ನೂ ಓದಿ : Arjun Tendulkar : ಸಚಿನ್ ತೆಂಡೂಲ್ಕರ್ ಮಗನ ಕ್ರಿಕೆಟ್ ಬದುಕಿಗೆ ಸಿಕ್ತು ಬಿಗ್ ಟ್ವಿಸ್ಟ್

WTC ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 209 ರನ್‌ಗಳಿಂದ ಸೋಲುಂಡ ಬೆನ್ನಲ್ಲೇ ರೋಹಿತ್ ಶರ್ನಾ ನಾಯಕತ್ವದ ಬಗ್ಗೆ ಮಾಜಿ ಕ್ರಿಕೆಟಿಗರು ಅಪಸ್ವರ ಎತ್ತಿದ್ದರು. ಇದೇ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರ ಆಕ್ರಮಣಕಾರಿ ನಾಯಕತ್ವವನ್ನು ನೆನಪು ಮಾಡಿಕೊಂಡಿದ್ದರು. 68 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ವಿರಾಟ್ ಕೊಹ್ಲಿ 40 ಗೆಲುವು ತಂದುಕೊಡುವ ಮೂಲಕ ಭಾರತದ ನಂ.1 ಟೆಸ್ಟ್ ಕ್ಯಾಪ್ಟನ್ ಎನಿಸಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಭಾರತ ಕೇವಲ 17 ಪಂದ್ಯಗಳಲ್ಲಿ ಸೋಲು ಕಂಡಿದ್ದು, 11 ಪಂದ್ಯಗಳು ಡ್ರಾಗೊಂಡಿವೆ.

Virat Kohli : Big Exclusive: King Kohli captain again for India test team, announcement soon?

Comments are closed.