Virat Kohli Birthday : ಟೀಮ್ ಇಂಡಿಯಾ ಕ್ಯಾಂಪ್‌ನಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವಿರಾಟ್

ಮೆಲ್ಬೋರ್ನ್: 34ನೇ ವರ್ಷಕ್ಕೆ ಕಾಲಿಟ್ಟಿರುವ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, (Virat Kohli Birthday)ಮೆಲ್ಬೋರ್ನ್’ನಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮೆಲ್ಬೋರ್ನ್’ನಲ್ಲಿ ಟೀಮ್ ಇಂಡಿಯಾ ತಂಗಿರುವ ಹೋಟೆಲ್’ನಲ್ಲಿ ವಿರಾಟ್ ಕೊಹ್ಲಿ ಅವರಿಗಾಗಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಬರ್ತ್ ಡೇ ಕೇಕ್ ರೆಡಿ ಮಾಡಿತ್ತು. ಕೇಕ್ ಕತ್ತರಿಸಿದ ಕಿಂಗ್ ಕೊಹ್ಲಿ ಸಹ ಆಟಗಾರರೊಂದಿಗೆ ಜನ್ಮದಿನ ಸಂಭ್ರಮವನ್ನು ಆಚರಿಸಿಕೊಂಡರು. ಈ ವೀಡಿಯೊವನ್ನು ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ.

ಟಿ20 ವಿಶ್ವಕಪ್ (T20 World Cup 2022) ಟೂರ್ನಿಯಲ್ಲಿ ಆಡುತ್ತಿರುವ ಭಾರತ ಭಾನುವಾರ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್’ನಲ್ಲಿ ನಡೆಯುವ ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ (India vs Zimbabwe).ಈಗಾಗಲೇ ಸೆಮಿಫೈನಲ್’ನಲ್ಲಿ ಸ್ಥಾನ ಖಚಿತ ಪಡಿಸಿಕೊಂಡಿರುವ ಭಾರತ ತಂಡ, ಜಿಂಬಾಬ್ವೆ ವಿರುದ್ಧ ಗೆದ್ದು ಗ್ರೂಪ್-2ರಲ್ಲಿ ಅಗ್ರಸ್ಥಾನದೊಂದಿಗೆ ಸೆಮಿಫೈನಲ್ ಪ್ರವೇಶಿಸುವ ಲೆಕ್ಕಾಚಾರದಲ್ಲಿದೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಅಜೇಯ ಅರ್ಧಶತಕಗಳನ್ನು ದಾಖಲಿಸಿದ್ದಾರೆ.

ಪಾಕಿಸ್ತಾನ ವಿರುದ್ಧದ ಮೊದಲ ಸೂಪರ್-12 ಪಂದ್ಯದಲ್ಲಿ ಅಜೇಯ 82 ರನ್, ನೆದರ್ಲೆಂಡ್ಸ್ ವಿರುದ್ಧ ಅಜೇಯ 62 ರನ್ ಮತ್ತು ಬಾಂಗ್ಲಾದೇಶ ವಿರುದ್ಧ ಅಜೇಯ 64 ರನ್ ಬಾರಿಸಿದ್ದ ಕೊಹ್ಲಿ, ವಿಫಲರಾಗಿರುವುದು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಮಾತ್ರ (12 ರನ್). ಈ ನಾಲ್ಕು ಪಂದ್ಯಗಳ ಪೈಕಿ ಪಾಕಿಸ್ತಾನ ವಿರುದ್ಧ ಕೊಹ್ಲಿ ವೃತ್ತಿಜೀವನದಲ್ಲೇ ಶ್ರೇಷ್ಠ ಇನ್ನಿಂಗ್ಸ್ ಆಡಿದ್ದರು. 1988ರ ನವೆಂಬರ್ 5ರಂದು ಹುಟ್ಟಿದ್ದ ವಿರಾಟ್ ಕೊಹ್ಲಿ, 2008ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಅದಕ್ಕೂ ಮುನ್ನ ಅದೇ ವರ್ಷ ಮಲೇಷ್ಯಾದಲ್ಲಿ ನಡೆದಿದ್ದ ಅಂಡರ್-19 ವಿಶ್ವಕಪ್’ನಲ್ಲಿ ಭಾರತ ತಂಡ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಚಾಂಪಿಯನ್ ಆಗಿತ್ತು.

ಇದನ್ನೂ ಓದಿ : Virak Kohli birthday : ಕಿಂಗ್ ಕೊಹ್ಲಿಗೆ 34ನೇ ಜನ್ಮದಿನ ಸಂಭ್ರಮ, ವಿರಾಟ ಹುಟ್ಟುಹಬ್ಬಕ್ಕೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ್ದು ಹೀಗೆ..

ಇದನ್ನೂ ಓದಿ : T20 World Cup 2022: ನಾಳೆ ಭಾರತ Vs ಜಿಂಬಾಬ್ವೆ ಮ್ಯಾಚ್, ಗೆಲುವಿನೊಂದಿಗೆ ಸೆಮಿಫೈನಲ್‌ಗೆ ಲಗ್ಗೆ ಹಾಕಲಿದೆ ಟೀಮ್ ಇಂಡಿಯಾ

ಇದನ್ನೂ ಓದಿ : Mayank Agarwal – Ashita Sood : ಮೊದಲ ಮಗುವಿನ ನಿರೀಕ್ಷೆಯಲ್ಲಿ ಮಯಾಂಕ್ ಅಗರ್ವಾಲ್-ಆಶಿತಾ ಸೂದ್ ದಂಪತಿ

ಕಳೆದ 14 ವರ್ಷಗಳಿಂದ ಭಾರತ ತಂಡದ ಪರ ಆಡುತ್ತಿರುವ ವಿರಾಟ್ ಕೊಹ್ಲಿ, ರನ್ ಮಷಿನ್ ಎಂದೇ ಕರೆಸಿಕೊಂಡಿದ್ದಾರೆ. ಭಾರತ ಪರ 102 ಟೆಸ್ಟ್ ಪಂದ್ಯಗಳನ್ನಾಡಿರುವ ವಿರಾಟ್ 27 ಶತಕಗಳ ಸಹಿತ 8074 ರನ್ ಗಳಿಸಿದ್ದಾರೆ. 262 ಏಕದಿನ ಪಂದ್ಯಗಳಿಂದ 43 ಶತಕಗಳ ಸಹಿತ 12344 ರನ್ ಕಲೆ ಹಾಕಿದ್ದಾರೆ. 113 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಕಿಂಗ್ ಕೊಹ್ಲಿ 1 ಶತಕ, 36 ಅರ್ಧಶತಗಳ ನೆರವಿನಿಂದ 3932 ರನ್ ಗಳಿಸಿದ್ದಾರೆ.

Virat celebrated his birthday by cutting a cake at the Team India camp

Comments are closed.