Virat Kohli : ಭಾರತ ಹಾಗೂ ಇಂಗ್ಲೆಂಡ್ (IND VS ENG) ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ದಾಖಲಿಸಿದೆ. ಇದರ ಬೆನ್ನಲ್ಲೇ ಎರಡನೇ ಏಕದಿನ ಪಂದ್ಯ ಕಟಕ್‌ನಲ್ಲಿ ನಡೆಯಲಿದೆ. ಈ ನಡುವಲ್ಲೇ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ.
ಬಲ ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಮೊದಲ ಏಕದಿನ ಪಂದ್ಯವನ್ನು ಮಿಸ್ ಮಾಡಿಕೊಂಡಿದ್ದರು. ಆದರೆ ಕಟಕ್‌ನಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡುವ ಸಾಧ್ಯತೆ ತೀರಾ ಹೆಚ್ಚಿದೆ ಎನ್ನಲಾಗುತ್ತಿದೆ. ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದ ವೇಳೆಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ವಿರಾಟ್ ಕೊಹ್ಲಿ ಅವರಿಗೆ ಬಲ ಮೊಣಕಾಲಿನ ಸಮಸ್ಯೆಯ ಕುರಿತು ತಿಳಿಸಿದ್ದರು.
ಆದರೆ ವಿರಾಟ್ ಕೊಹ್ಲಿ ಅವರ ಗಾಯದ ಸಮಸ್ಯೆ ಎಷ್ಟು ಸ್ವರೂಪದ್ದು ಅನ್ನೋ ಕುರಿತು ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಈ ನಡುವಲ್ಲೇ ನಾಗ್ಪುರದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ದ ಭರ್ಜರಿ ಗೆಲುವು ದಾಖಲಿಸಿತ್ತು.
ಇದನ್ನೂ ಓದಿ : IPL 2025 Auction : ಐಪಿಎಲ್ 2025 ಆಟಗಾರರ ಹರಾಜು : ದಾಖಲೆಯ 1,574 ಆಟಗಾರರ ನೋಂದಣಿ

ಎರಡನೇ ಪಂದ್ಯದಲ್ಲಿ ಆಡ್ತಾರಾ ವಿರಾಟ್ ಕೊಹ್ಲಿ ?
ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ ವಿರಾಟ್ ಕೊಹ್ಲಿ ಅವರು ಬುಧವಾರ ಅಭ್ಯಾಸದ ಸಮಯದಲ್ಲಿ ಮೊಣ ಕಾಲು ಚೆನ್ನಾಗಿಯೇ ಇತ್ತು. ಆದರೆ ಹೋಟೆಲ್ ತಲುಪಿದ ಸಂದರ್ಭದಲ್ಲಿ ಕಾಲು ಊದಿಕೊಂಡಿತ್ತು. ಇದೇ ಕಾರಣದಿಂದಲೇ ಟೀಂ ಇಂಡಿಯಾ ಮ್ಯಾನೆಜ್ಮೆಂಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಿತ್ತು. ಆದರೆ ಕಟಕ್ ಪಂದ್ಯದಲ್ಲಿ ಕೊಹ್ಲಿ ಕಣಕ್ಕೆ ಇಳಿಯುವುದು ಬಹುತೇಕ ಖಚಿತ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡ್ರೆ ಟೀಂ ಇಂಡಿಯಾಕ್ಕೆ ಪ್ಲಸ್ ಪಾಯಿಂಟ್. ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಐತಿಹಾಸಿಕ ದಾಖಲೆಯನ್ನು ಹೊಂದಿದ್ದಾರೆ. ಕೊಹ್ಲಿ ಇದುವರೆಗೆ ಒಟ್ಟು 295 ಪಂದ್ಯಗಳನ್ನು ಆಡಿದ್ದು, 58 ರ ಸರಾಸರಿಯಲ್ಲಿ 13906 ರನ್‌ಗಳನ್ನು ಗಳಿಸಿದ್ದಾರೆ. ಅಲ್ಲದೇ 50 ಏಕದಿನ ಶತಕಗಳನ್ನು ಸಿಡಿಸಿದ್ದಾರೆ.
ಇದನ್ನೂ ಓದಿ : Rohit Sharma Retirement : ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ನಿವೃತ್ತಿ ? ಹೇಳಿದ್ದೇನು ಹಿಟ್‌ಮ್ಯಾನ್

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಯಶಸ್ವಿ ಜೈಸ್ವಾಲ್ ಏಕದಿನ ಪಂದ್ಯದಲ್ಲಿ ಕಣಕ್ಕೆ ಇಳಿದಿದ್ದರು. ಅಲ್ಲದೇ ಕೊಹ್ಲಿ ಸ್ಥಾನದಲ್ಲಿ ಶುಭ್ಮನ್ ಗಿಲ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಸದಾ ಫಿಟ್ನೆಸ್ ಕಾಯ್ದುಕೊಳ್ಳುತ್ತಿದ್ದ ವಿರಾಟ್ ಕೊಹ್ಲಿ ಅವರಿಗೆ ಗಾಯದ ಸಮಸ್ಯೆ ಗಂಭೀರವಾಗಿಲ್ಲ ಎನ್ನಲಾಗುತ್ತಿದೆ. ಇದೇ ಕಾರಣದಿಂದಲೇ ಅವರು ಮುಂದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.
ಇದನ್ನೂ ಓದಿ : TPL 2025 : ಶುರುವಾಯ್ತು ತಾರೆಯರ ಟೆಲಿವಿಷನ್ ಪ್ರೀಮಿಯರ್ ಲೀಗ್ -2025 : ಟಿಪಿಎಲ್ ಕಂಪ್ಲೀಟ್ ಡಿಟೇಲ್ಸ್
Virat Kohli fit for India vs England 2nd ODI have great good news to Team India