ಡೊಮಿನಿಕಾ: ಭಾರತ ಕ್ರಿಕೆಟ್ ತಂಡದ ದಿಗ್ಗಜ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸದ್ಯ ವೆಸ್ಟ್ ಇಂಡೀಸ್‌ನಲ್ಲಿದ್ದು, ಆತಿಥೇಯ ವಿಂಡೀಸ್ (Virat Kohli – Rahul Dravid) ವಿರುದ್ಧದ ಟೆಸ್ಟ್ ಸರಣಿಗೆ (India Vs West Indies test series) ರೆಡಿಯಾಗುತ್ತಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಬುಧವಾರ (ಜುಲೈ 12) ಡೊಮಿನಿಕಾದ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ಆರಂಭವಾಗಲಿದೆ. ಡೊಮಿನಿಕಾ ಟೆಸ್ಟ್ ಪಂದ್ಯಕ್ಕೂ ಮುನ್ನ ಕಿಂಗ್ ಕೊಹ್ಲಿ, ಕೋಚ್ ರಾಹುಲ್ ದ್ರಾವಿಡ್ (Virat Kohli and Rahul Dravid) ಜೊತೆ ಡೊಮಿನಿಕಾ ಕ್ರೀಡಾಂಗಣದ ಡ್ರೆಸ್ಸಿಂಗ್ ರೂಮ್”ನಲ್ಲಿ ಕ್ಲಿಕ್ಕಿಸಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ದ್ರಾವಿಡ್ ಜೊತೆಗೆ ಫೋಟೋಗೆ ಪೋಸ್ ಕೊಟ್ಟಿರುವ ಕೊಹ್ಲಿ, ಅದರ ಜೊತೆ ಕೆಲಸ ಸಾಲುಗಳನ್ನು ಬರೆದಿದ್ದಾರೆ. “2011ರಲ್ಲಿ ಡೊಮಿನಿಕಾದಲ್ಲಿ ನಾವು ಕೊನೆಯ ಬಾರಿ ಟೆಸ್ಟ್ ಪಂದ್ಯವಾಡಿದಾಗ ಆ ತಂಡದಲ್ಲಿದ್ದವರು ನಾವಿಬ್ಬರು. ಈಗ ಬೇರೆ ಬೇರೆ ಜವಾಬ್ದಾರಿಗಳಲ್ಲಿ ನಮ್ಮನ್ನು ಈ ಪ್ರಯಾಣ ಮತ್ತೆ ಇಲ್ಲಿಗೆ ತಂದು ನಿಲ್ಲಿಸಲಿದೆ ಎಂದು ಊಹಿಸಿರಲಿಲ್ಲ. ಇದಕ್ಕಾಗಿ ನಾನು ನಿಜಕ್ಕೂ ಕೃತಜ್ಞನಾಗಿದ್ದೇನೆ” ಎಂದು ವಿರಾಟ್ ಕೊಹ್ಲಿ ಬರೆದುಕೊಂಡಿದ್ದಾರೆ.
ಟೀಮ್ ಇಂಡಿಯಾದ ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ತಮ್ಮ 21ನೇ ವಯಸ್ಸಿನಲ್ಲಿ ಭಾರತ ಪರ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 2011ರ ಜೂನ್ 20ರಂದು ವೆಸ್ಟ್ ಇಂಡೀಸ್ ವಿರುದ್ಧ ಡೊಮಿನಾಕದಲ್ಲಿ ನಡೆದ ಟೆಸ್ಟ್ ಪಂದ್ಯದ ಮೂಲಕ ವಿರಾಟ್ ಟೆಸ್ಟ್ ಡೆಬ್ಯೂ ಮಾಡಿದ್ದರು.
ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟೆಸ್ಟ್ ಪಂದ್ಯವಾಡಿದ್ದ ವಿರಾಟ್ ಕೊಹ್ಲಿ, ತಮ್ಮ ಪದಾರ್ಪಣೆಯ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದು ಪ್ರಥಮ ಇನ್ನಿಂಗ್ಸ್‌ನಲ್ಲಿ ಕೇವಲ 4 ರನ್ನಿಗೆ ಔಟಾಗಿದ್ದರು. ದ್ವಿತೀಯ ಇನ್ನಿಂಗ್ಸ್‌ನಲ್ಲೂ 5ನೇ ಕ್ರಮಾಂಕದಲ್ಲಿ ಆಡಿದ್ದ ವಿರಾಟ್ ಕೊಹ್ಲಿ 15 ರನ್ನಿಗೆ ವಿಕೆಟ್ ಒಪ್ಪಿಸಿದ್ದರು. ಭಾರತದ 2ನೇ ಇನ್ನಿಂಗ್ಸ್‌ನಲ್ಲಿ ಅಮೋಘ ಶತಕ ಬಾರಿಸಿದ್ದ ಟೀಮ್ ಇಂಡಿಯಾ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಭಾರತದ ಗೆಲುವಿಗೆ ಕಾರಣರಾಗಿದ್ದರು.
ಇದನ್ನೂ ಓದಿ : Duleep Trophy 2023 : ದುಲೀಪ್ ಟ್ರೋಫಿಯಲ್ಲಿ ಕನ್ನಡಿಗರ ಪರಾಕ್ರಮ, ಫೈನಲ್’ಗೆ ಲಗ್ಗೆ ಇಟ್ಟ ದಕ್ಷಿಣ ವಲಯ
ಇದನ್ನೂ ಓದಿ : Anil Kumble : ನಾಗರಹೊಳೆ ನ್ಯಾಷನಲ್ ಪಾರ್ಕ್’ನಲ್ಲಿ ಪತ್ನಿ-ಪುತ್ರನ ಜೊತೆ ಜಂಬೋ ಸಫಾರಿ
2011ರಲ್ಲಿ ಟೆಸ್ಟ್ ಪದಾರ್ಪಣೆಯ ನಂತರ ಕಳೆದ 12 ವರ್ಷಗಳಲ್ಲಿ ಭಾರತ ಪರ 109 ಟೆಸ್ಟ್ ಪಂದ್ಯಗಳನ್ನಾಡಿರುವ ಕಿಂಗ್ ಕೊಹ್ಲಿ, 48.72ರ ಸರಾಸರಿಯಲ್ಲಿ 8479 ರನ್ ಕಲೆ ಹಾಕಿದ್ದಾರೆ. ಈ 12 ವರ್ಷಗಳಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟ್‌ನಿಂದ 28 ಶತಕಗಳು ಹಾಗೂ 28 ಅರ್ಧಶತಕಗಳು ಸಿಡಿದಿವೆ. ಟೆಸ್ಟ್ ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ಗಳ ಗಡಿ ದಾಟಲು ವಿರಾಟ್ ಕೊಹ್ಲಿ ಅವರಿಗೆ ಬೇಕಿರುವುದಿನ್ನು 1521 ರನ್ ಮಾತ್ರ.
Virat Kohli – Rahul Dravid: 11 years of memories, emotional Virat Kohli shares photo with Dravid