ಮುಂಬೈ : ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿರಾಟ್ ಕೊಹ್ಲಿ ( Virat Kohli) ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಏಷ್ಯಾಕಪ್‌ನಲ್ಲಿ (Asia Cup 2023) ಪಾಕಿಸ್ತಾನ (India vs Pakistan) ವಿರುದ್ದದ ಪಂದ್ಯದಲ್ಲ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ವಿರಾಟ್ ಕೊಹ್ಲಿ ಇನ್ನು ಕೇವಲ 3 ಶತಕ ಬಾರಿಸಿದ್ರೆ ಸಚಿನ್ ತೆಂಡೂಲ್ಕರ್ (Sachin Tendulkar Record) ದಾಖಲೆಯನ್ನು ಅಳಿಸಿ ಹಾಕಲಿದ್ದಾರೆ.

ಸದ್ಯ ವಿಶ್ವ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆಟಗಾರ ವಿರಾಟ್ ಕೊಹ್ಲಿ. ಪಾಕಿಸ್ತಾನ ತಂಡದ ವಿರುದ್ದದ ವಿರಾಟ್ ಕೊಹ್ಲಿ ಆರ್ಭಟಕ್ಕೆ ಪಾಕಿಸ್ತಾನದ ಅಭಿಮಾನಿಗಳು ಗುಣಗಾನ ಮಾಡಿದ್ದಾರೆ. ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ವಿಶ್ವದಾಖಲೆಯನ್ನು ಬರೆದುಕೊಂಡಿದ್ದಾರೆ.
ಭಾರತ ಮಾತ್ರವಲ್ಲ ವಿಶ್ವ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ರನ್‌ಗಳಿಸಿರುವ ದಾಖಲೆ ಸದ್ಯ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಲ್ಲಿದೆ. ಇನ್ನು ಅತೀ ಹೆಚ್ಚು ಶತಕ ಸಿಡಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿಯೂ ಸಚಿನ್ ತೆಂಡೂಲ್ಕರ್‌ಗೆ ಅಗ್ರಸ್ಥಾನ. ಆದ್ರೆ ಸಚಿನ್ ತೆಂಡೂಲ್ಕರ್ ಸ್ಥಾಪಿಸಿರುವ ಹಲವು ದಾಖಲೆಗಳನ್ನು ವಿರಾಟ್ ಕೊಹ್ಲಿ ಈಗಾಗಲೇ ಅಳಿಸಿ ಹಾಕಿದ್ದಾರೆ.

ಸದ್ಯ ಏಕದಿನ ಕ್ರಿಕೆಟ್‌ನಲ್ಲಿ (ODI Cricket) ಅತೀ ಹೆಚ್ಚು ಶತಕ ಬಾರಿಸಿರುವ ಆಟಗಾರರ ಪಟ್ಟಿಯಲ್ಲಿಯೂ ಕೊಹ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಳ್ಳುವ ದಿನಗಳು ದೂರವೇನಿಲ್ಲ. ಸಚಿನ್ ತೆಂಡೂಲ್ಕರ್ 463 ಏಕದಿನ ಪಂದ್ಯಗಳ ಪೈಕಿ 452 ಪಂದ್ಯಗಳಲ್ಲಿ ಬ್ಯಾಟಿಂಗ್ ನಡೆಸಿದ್ದು, ಬರೋಬ್ಬರಿ 18,426ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ದ್ವಿಶಕವೂ ಒಳಗೊಂಡಿದೆ.
ಸಚಿನ್ ತೆಂಡೂಲ್ಕರ್ ಏಕದನ ಪಂದ್ಯಗಳ ಪೈಕಿ 49 ಶತಕ ಸಿಡಿಸುವ ಮೂಲಕ ಅತೀ ಹೆಚ್ಚು ಶತಕ ಸಿಡಿಸಿದ ಭಾರತದ ಆಟಗಾರ ಅನ್ನೋ ಖ್ಯಾತಿಗೆ ಪಾತ್ರರಾಗಿದ್ದಾರೆ. ಆದರೆ ವಿರಾಟ್ ಕೊಹ್ಲಿ ಕೇವಲ 279 ಪಂದ್ಯಗಳನ್ನು ಆಡಿದ್ದು, ಈ ಪೈಕಿ 268 ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ನಡೆಸಿದ್ದು, ಬರೋಬ್ಬರಿ 13,027ರನ್ ಗಳಿಸಿದ್ದಾರೆ.

ಈ ಪೈಕಿ 183 ರನ್ ಏಕದಿನ ಕ್ರಿಕೆಟ್‌ನ ಸರ್ವಾಧಿಕ ರನ್ ಆಗಿದ್ರೆ, ಇದುವರೆಗೂ ವಿರಾಟ್ ಕೊಹ್ಲಿ 47 ಶತಕ ಸಿಡಿಸಿದ್ದಾರೆ. ಇನ್ನು ಎರಡು ಶತಕ ಬಾರಿಸಿದ್ರೆ ಕೊಹ್ಲಿ ಸಚಿವ ದಾಖಲೆಯನ್ನು ಸಮಗಟ್ಟಲಿದ್ದಾರೆ. ಒಂದೊಮ್ಮೆ ಮೂರು ಶತಕ ಬಾರಿಸಿದ್ರೆ ಏಕದಿನ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಆಟಗಾರ ಅನ್ನೋ ಖ್ಯಾತಿಗೆ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ.

ಅತೀ ಹೆಚ್ಚು ಶತಕಗಳಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ, ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ 3ನೇ ಸ್ಥಾನದಲ್ಲಿದ್ದು, 22 ಶತಕ ಬಾರಿಸಿದ್ದಾರೆ. ಉಳಿದಂತೆ ಟೀಂ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್ ೪ನೇ ಸ್ಥಾನದಲ್ಲಿದ್ದು, ಇದುವರೆಗೂ ದ್ರಾವಿಡ್ 12 ಶತಕ ಸಿಡಿಸಿದ್ದಾರೆ. ಇನ್ನು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 5 ನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ : ICC World Cup 2023: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ, ಭಾರತಕ್ಕೆ ಯಾರು ಎದುರಾಳಿಗಳು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಏಕದಿನ ಕ್ರಿಕೆಟ್ ಮಾತ್ರವಲ್ಲದೇ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿಯೂ ಉತ್ತಮ ದಾಖಲೆ ನಿರ್ಮಿಸುತ್ತಿದ್ದಾರೆ. ಇದುವರೆಗೆ ವಿರಾಟ್ ಕೊಹ್ಲಿ ಒಟ್ಟು 111 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ಪೈಕಿ 187 ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ನಡೆಸಿದ್ದಾರೆ. ಒಟ್ಟು 8676 ರನ್ ಬಾರಿಸಿದ್ದಾರೆ. ಪಂದ್ಯವೊಂದರಲ್ಲಿ 254 ರನ್ ಸಿಡಿಸಿದ ದಾಖಲೆಯಿದೆ. ಉಳಿದಂತೆ 29 ಶತಕ, 29 ಅರ್ಧ ಶತಕ ಸಿಡಿಸಿದ್ದಾರೆ.

ವಿಶ್ವಕ್ರಿಕೆಟ್‌ನಲ್ಲಿಯೂ ಕೂಡ ವಿರಾಟ್ ಕೊಹ್ಲಿ ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಟೆಸ್ಟ್, ಏಕದಿನ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ದಾಖಲೆ ಯನ್ನು ಒಟ್ಟುಗೂಡಿಸಿ ನೋಡಿದ್ರೆ ವಿರಾಟ್ ಕೊಹ್ಲಿ ಟಾಪ್ 5ರ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವದಲ್ಲಿಯೇ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ.
ಇದನ್ನೂ ಓದಿ : ಏಷ್ಯಾ ಕಪ್ 2023: ಭಾರತ Vs ಪಾಕಿಸ್ತಾನ ಪಂದ್ಯ, ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ರೋಹಿತ್ ಶರ್ಮಾ
ಸಚಿನ್ ತೆಂಡೂಲ್ಕರ್ ಒಟ್ಟು 664 ಕ್ರಿಕೆಟ್ ಪಂದ್ಯಗಳನ್ನು ಆಡಿದ್ದು, ಈ ಪೂಕಿ 34,357 ರನ್ ಬಾರಿಸಿದ್ದಾರೆ. ಇದರಲ್ಲಿ 100 ಶತಕ ಹಾಗೂ 164 ಅರ್ಧ ಶತಕ ಒಳಗೊಂಡಿದೆ. ಇನ್ನು ಅತೀ ಹೆಚ್ಚು ರನ್ ಗಳಿಸಿದ ಆಟಗಾರರ ಪೈಕಿ ವಿರಾಟ್ ಕೊಹ್ಲಿ 5 ನೇ ಸ್ಥಾನ ಪಡೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಇದುವರೆಗೆ ಒಟ್ಟು 504 ಪಂದ್ಯಗಳನ್ನು ಆಡಿದ್ದು, ಈ ಪೈಕಿ 561 ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ನಡೆಸಿದ್ದು, ಒಟ್ಟು 25,957 ರನ್ ಬಾರಿಸಿದ್ದಾರೆ. ಇದರಲ್ಲಿ 77 ಶತಕ ಹಾಗೂ 131 ಅರ್ಧಶತಕ ಒಳಗೊಂಡಿದೆ. ಅತೀ ಹೆಚ್ಚು ಶತಕ ಬಾರಿಸಿದ ವಿಶ್ವದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ವಿಶ್ವ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಶ್ರೀಲಂಕಾದ ಸಂಗಕ್ಕರ 2ನೇ ಸ್ಥಾನದಲ್ಲಿದ್ರೆ, ಆಸ್ಟ್ರೇಲಿಯಾದ ರಿಕಿಪಾಂಟಿಂಗ್ 3 ನೇ ಸ್ಥಾನದಲ್ಲಿದ್ದು, ಶ್ರೀಲಂಕಾದ ಮಾಹೆಲ ಜಯವರ್ಧನ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇನ್ನು ಟೀಂ ಇಂಡಿಯಾ ಕೋಚ್ ರಾಹುಲ ದ್ರಾವಿಡ್ 7ನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ : ಕಿಂಗ್ ಈಸ್ ಬ್ಯಾಕ್ :77 ಶತಕ, 13 ಸಾವಿರ ರನ್ : ವಿಶ್ವದಾಖಲೆ ಬರೆದ ವಿರಾಟ್ ಕೊಹ್ಲಿ
ಟೆಸ್ಟ್, ಏಕದಿನ ಹಾಗೂ ಟಿ20 ಸೇರಿದಂತೆ ಮೂರು ಮಾದರಿಯ ಕ್ರಿಕೆಟ್‌ನಲ್ಲಿಯೂ ವಿರಾಟ್ ಕೊಹ್ಲಿ ದಾಖಲೆಯ ಮೇಲೆ, ದಾಖಲೆ ಬರೆಯುತ್ತಿದ್ದಾರೆ. ವಿಶ್ವ ಕ್ರಿಕೆಟ್‌ನಲ್ಲಿ ಬಹುತೇಕ ದಾಖಲೆಗಳು ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ರೆ ಇದೀಗ ಮತ್ತೋರ್ವ ಭಾರತೀ ವಿರಾಟ್ ಕೊಹ್ಲಿ ಕೂಡ ಅದೇ ಹಾದಿಯಲ್ಲಿಯೇ ಸಾಗುತ್ತಿದ್ದಾರೆ.
Virat Kohli scores 3 more centuries, Sachin Tendulkar’s this record Break