Virat Kohli : ಬಾರ್ಬೆಡೋಸ್: ಟಿ20 ವಿಶ್ವಕಪ್ ಗೆದ್ದಿರುವ ಭಾರತ ತಂಡ ಇಂದು ರಾತ್ರಿ ಅಥವಾ ನಾಳೆ ಮುಂಜಾನೆ ಬಾರ್ಬೊಡೋಸ್’ನಿಂದ ದೆಹಲಿಗೆ ಆಗಮಿಸುವ ನಿರೀಕ್ಷೆಯಿದೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿರುವ ಭಾರತ ಕ್ರಿಕೆಟ್ ತಂಡ (Indian Cricket Team) ತವರಿಗೆ ಆಗಮಿಸುವ ಕ್ಷಣವನ್ನು ಭಾರತೀಯ ಎದುರು ನೋಡುತ್ತಿದ್ದಾರೆ.

ದ್ವೀಪರಾಷ್ಟ್ರ ಕೆರಿಬಿಯನ್ ನಾಡು ಬಾರ್ಬೆಡೋಸ್’ನಲ್ಲಿ ಕಳೆದ 3 ದಿನಗಳಿಂದ ಚಂಡಮಾರುತ ಬೀಸುತ್ತಿರುವ ಕಾರಣ ಭಾರತ ತಂಡ ತವರಿಗೆ ಮರಳುವುದು ವಿಳಂಬವಾಗಿದೆ. ಚಂಡಮಾರುತದ ಕಾರಣ ಬಾರ್ಬೆಡೋಸ್ ವಿಮಾನ ನಿಲ್ದಾಣ ಸಂಪೂರ್ಣ ಸ್ಥಗಿತಗೊಂಡಿದೆ. ಶನಿವಾರ ರಾತ್ರಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ 17 ವರ್ಷಗಳ ನಂತರ ಟಿ20 ವಿಶ್ವಕಪ್ ಗೆದ್ದಿರುವ ಭಾರತ ತಂಡದ ಆಟಗಾರರು ಕಳೆದ ಮೂರು ದಿನಗಳಿಂದ ಬಾರ್ಬೆಡೋಸ್’ನ ಹೋಟೆಲ್’ನಲ್ಲೇ ತಂಗಿದ್ದಾರೆ.
ಇದನ್ನೂ ಓದಿ : Virat Kohli : ವಿರಾಟ್ ಕೊಹ್ಲಿ ಎಲ್ಲರಿಗೂ ಇಷ್ಟವಾಗುವುದು ಇದೇ ಕಾರಣಕ್ಕೆ..!
ಫೈನಲ್ ಪಂದ್ಯದ ಮ್ಯಾನ್ ಆಫ್ ದಿ ಮ್ಯಾಚ್ ವಿರಾಟ್ ಕೊಹ್ಲಿ, ಸಮುದ್ರ ತೀರದಲ್ಲಿರುವ ಹೋಟೆಲ್’ನಿಂದ ಚಂಡಮಾರುತದ ದೃಶ್ಯಗಳನ್ನು ಮುಂಬೈನಲ್ಲಿ ಇರುವ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರಿಗೆ ವೀಡಿಯೊ ಕಾಲ್ ಮೂಲಕ ತೋರಿಸಿದ್ದಾರೆೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

https://x.com/kohlizype/status/1808135250998186188?s=46
ಶನಿವಾರ ರಾತ್ರಿ ಬಾರ್ಬೆಡೋಸ್’ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದಿದ್ದ ರೋಚಕ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್’ಗಳಿಂದ ರೋಚಕವಾಗಿ ಸೋಲಿಸಿ ಸುದೀರ್ಘ 17 ವರ್ಷಗಳ ನಂತರ ವಿಶ್ವಕಪ್ ಎತ್ತಿ ಹಿಡಿದಿತ್ತು. 2007ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದ ನಂತರ ಭಾರತ ಚಟುಕು ವಿಶ್ವಕಪ್ ಗೆದ್ದಿರಲಿಲ್ಲ.
ಇದನ್ನೂ ಓದಿ : ರಾಹುಲ್ ದ್ರಾವಿಡ್ ಅದೃಷ್ಟವನ್ನೇ ಬದಲಿಸಿತು ರೋಹಿತ್ ಮಾಡಿದ ಅದೊಂದು ಫೋನ್ ಕಾಲ್
ಅಷ್ಟೇ ಅಲ್ಲ, 2011ರಲ್ಲಿ ಐಸಿಸಿ ಏಕದಿನ ವಿಶ್ವಕಪ್ ಗೆದ್ದ ನಂತರ ಭಾರತ ಕ್ರಿಕೆಟ್’ನ ಯಾವ ಫಾರ್ಮ್ಯಾಟ್’ನಲ್ಲೂ ವಿಶ್ವಕಪ್ ಗೆದ್ದಿರಲಿಲ್ಲ. ವಿಶ್ವ ಚಾಂಪಿಯನ್ ಭಾರತ ತಂಡ ಬಾರ್ಬೆಡೋಸ್’ನಿಂದ ನೇರವಾಗಿ ದೆಹಲಿಗೆ ಬಂದಿಳಿಯಲಿದೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಕಾರ್ಯಕ್ರಮ ನಿಗದಿಯಾಗಿದೆ.
ಇದನ್ನೂ ಓದಿ : Louis Kimber : 6,6,6,6,6,4,4,4: ಒಂದೇ ಓವರ್’ನಲ್ಲಿ 43 ರನ್ ಚಚ್ಚಿದ ಲೂಯಿಸ್ ಕಿಂಬರ್
ವಿಶ್ವ ಚಾಂಪಿಯನ್ನರು ಪ್ರಧಾನಿಯವರನ್ನು ಪ್ರಧಾನಿ ನಿವಾಸದಲ್ಲಿ ಭೇಟಿಯಾಗಲಿದ್ದಾರೆ. ಪ್ರಧಾನಿ ಭೇಟಿಯ ನಂತರ ಟೀಮ್ ಇಂಡಿಯಾ ದೆಹಲಿಯಿಂದ ಮುಂಬೈಗೆ ತೆರಳಲಿದ್ದು, ಅಲ್ಲಿ ವಿಮಾನ ನಿಲ್ದಾಣದಿಂದ ಬಿಸಿಸಿಐ ಕಚೇರಿವರೆಗೆ ಭವ್ಯ ಮೆರವಣಿಗೆ ನಡೆಯುವ ಸಾಧ್ಯತೆಯಿದೆ.
Virat Kohli shows his wife Anushka Sharma the storm live through a video call