ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ T20I ಸರಣಿ ಮತ್ತು ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಭಾನುವಾರ ತಂಡವನ್ನು ಪ್ರಕಟಿಸಿದೆ. ಶ್ರೀಲಂಕಾ ವಿರುದ್ಧದ ಭಾರತದ ಕೊನೆಯ ಟೆಸ್ಟ್ ಸರಣಿಗೆ ಕೈಬಿಡಲಾಗಿದ್ದ ಹಿರಿಯ ಪರ ಚೇತೇಶ್ವರ ಪೂಜಾರ ಅವರನ್ನು ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ಗಾಗಿ 17 ಸದಸ್ಯರ ಟೆಸ್ಟ್ ತಂಡದಲ್ಲಿ ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಆಯ್ಕೆ ಮಾಡಿದೆ.
ಅನುಭವಿ ಇಶಾಂತ್ ಶರ್ಮಾ ಬದಲಿಗೆ ಪ್ರಸಿದ್ಧ್ ಕೃಷ್ಣ ಅವರನ್ನು ಟೆಸ್ಟ್ ಪಂದ್ಯಕ್ಕೆ ನೇಮಕ ಮಾಡಲಾಗಿದೆ. ಆದರೆ ಅಜಿಂಕ್ಯ ರಹಾನೆಗೆ ತಂಡದಲ್ಲಿ ಚಾನ್ಸ್ ಸಿಕ್ಕಿಲ್ಲ. ಇನ್ನೊಂದೆಡೆ ಯಲ್ಲಿ ರವೀಂದ್ರ ಜಡೇಜಾ ಕೂಡ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಇತರರು ದಕ್ಷಿಣ ಆಫ್ರಿಕಾ ವಿರುದ್ಧದ T20I ಸರಣಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನುಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಪುನರಾಗಮನ ಮಾಡಿದ್ದಾರೆ.
ಭಾರತ ಟೆಸ್ಟ್ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ) ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್ (WK), ಕೆಎಸ್ ಭರತ್ (WK), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ
ಭಾರತ T20I ತಂಡ: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪನಾಯಕ)(wk), ದಿನೇಶ್ ಕಾರ್ತಿಕ್ (WK), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಯಾದ್ ಚಾಹಲ್, ಕುಲದೀಪ್ ಯಾದ್ ಚಾಹಲ್ , ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್.
ಇದನ್ನೂ ಓದಿ : IPL Mumbai Indians ಕ್ರೀಡಾ ತಪಸ್ವಿ ಕಾರ್ತೀಕೇಯ
ಇದನ್ನೂ ಓದಿ : KKR Star ಅಂದು ಕೂಲಿಕಾರ್ಮಿಕ, ಇಂದು ಕ್ರಿಕೇಟರ್
IND vs SA ENG Squad Announcement BCCI KL Rahul Captain