Indian Cricket team : ಬೆಂಗಳೂರು: ಇಲ್ಲಿವರೆಗೆ ಟೀಮ್ ಇಂಡಿಯಾ ಆಟಗಾರರಿಗೆ ದೇಶೀಯ ಕ್ರಿಕೆಟ್ ಅಂದ್ರೆ ಅದೇನೋ ಅಲರ್ಜಿ. ಅಂತರಾಷ್ಟ್ರೀಯ ಪಂದ್ಯಗಳಿಲ್ಲದಿದ್ದಾಗಲೂ ಭಾರತ ಕ್ರಿಕೆಟ್ ತಂಡದ ಆಟಗಾರರು ದೇಶೀಯ ಕ್ರಿಕೆಟ್ ಆಡುತ್ತಿರಲಿಲ್ಲ. ಆದರೆ ಇನ್ನು ಮುಂದೆ ಹಾಗಲ್ಲ, ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಬೇಕೆಂದರೆ ದೇಶೀಯ ಕ್ರಿಕೆಟ್’ನಲ್ಲಿ ಆಡಲೇಬೇಕೆಂಬ ಕಟ್ಟು ನಿಟ್ಟಿನ ನಿಯಮವನ್ನು ಬಿಸಿಸಿಐ (BCCI) ಜಾರಿಗೆ ತಂದಿದೆ.

ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಟೀಮ್ ಇಂಡಿಯಾದ ಪ್ರೀಮಿಯಂ ಫಾಸ್ಟ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗೆ ವಿನಾಯಿತಿ ನೀಡಲಾಗಿದ್ದು, ಉಳಿದೆಲ್ಲಾ ಆಟಗಾರರು ಭಾರತ ಪರ ಪಂದ್ಯಗಳಿಲ್ಲದೇ ಇದ್ದಾಗ ಡೊಮೆಸ್ಟಿಕ್ ಕ್ರಿಕೆಟ್ ಆಡಲೇಬೇಕೆಂದು ಬಿಸಿಸಿಐ ಕಟ್ಟಪ್ಪಣೆ ಮಾಡಿದೆ.
ಈ ಬಾರಿಯ ದುಲೀಪ್ ಟ್ರೋಫಿ ಟೂರ್ನಿಯಿಂದಲೇ ಬಿಸಿಸಿಐನ ಈ ನಿಯಮ ಜಾರಿಗೆ ಬರಲಿದೆ. ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟಿಗರಿಗೆ ಮುಂದಿನ ತಿಂಗಳು ನಡೆಯುವ ದುಲೀಪ್ ಟ್ರೋಫಿ ಟೂರ್ನಿಯಲ್ಲಿಆಡುವಂತೆ ಬಿಸಿಸಿಐ ಸೂಚನೆ ನೀಡಿದೆ. ಹೀಗಾಗಿ ಟೆಸ್ಟ್ ತಂಡದ ಕಾಯಂ ಸದಸ್ಯರಾಗಿದ್ದರೂ ಕನ್ನಡಿಗ ಕೆ.ಎಲ್ ರಾಹುಲ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜ, ರಿಷಭ್ ಪಂತ್ ಸಹಿತ ಎಲ್ಲರೂ ದುಲೀಪ್ ಟ್ರೋಫಿಯಲ್ಲಿ ಆಡಲೇಬೇಕಿದೆ.
ಇದನ್ನೂ ಓದಿ : Yuvraj Singh: 42ನೇ ವಯಸ್ಸಲ್ಲೂ ಅದೇ ಖದರ್, ಅದೇ ಪವರ್: ಕಾಂಗರೂ ಬೇಟೆಯಾಡಿದ ಯುವರಾಜ !
ಈಗಾಗಲೇ 17 ವರ್ಷಗಳ ನಂತರ ಟಿ20 ವಿಶ್ವಕಪ್ ಗೆದ್ದಿರುವ ಭಾರತ, ಮುಂದಿನ ವರ್ಷ ನಡೆಯುವ ಐಸಿಸಿ ಟೆಸ್ಟ್ ಚಾಂಪಿಯನ್’ಷಿಪ್ ಹಾಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನೂ ಗೆಲ್ಲುವ ಪಣ ತೊಟ್ಟಿದೆ. ನಮ್ಮ ಮುಂದಿನ ಟಾರ್ಗೆಟ್ ಟೆಸ್ಟ್ ಚಾಂಪಿಯನ್’ಷಿಪ್ ಹಾಗೂ ಮಿನಿ ವಿಶ್ವಕಪ್ ಖ್ಯಾತಿಯ ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಆಟಗಾರರನ್ನು ದೊಡ್ಡ ಟೂರ್ನಿಗಳಿಗೆ ಸಜ್ಜುಗೊಳಿಸಲು ದೇಶೀಯ ಕ್ರಿಕೆಟ್’ನಲ್ಲಿ ಆಡುವಂತೆ ಸೂಚನೆ ನೀಡಲಾಗಿದೆ. ಮತ್ತೊಂದು ಮಹತ್ವದ ತೀರ್ಮಾನವನ್ನು ಬಿಸಿಸಿಐ ತೆಗೆದುಕೊಂಡಿದ್ದು, ಇನ್ನು ಮುಂದೆ ದುಲೀಪ್ ಟ್ರೋಫಿ ಟೂರ್ನಿಗೆ ತಂಡಗಳನ್ನು ಝೋನಲ್ ಆಯ್ಕೆ ಸಮಿತಿಯ ಬದಲು ಬಿಸಿಸಿಐ ಸೀನಿಯರ್ ಆಯ್ಕೆ ಸಮಿತಿಯೇ ಆಯ್ಕೆ ಮಾಡಲಿದೆ.
ಇದನ್ನೂ ಓದಿ : Surya Kumar Yadav New T20 Captain : ಹಾರ್ದಿಕ್ ಪಾಂಡ್ಯಗೆ ಗಂಭೀರ್ ಶಾಕ್, ಟಿ20 ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕ
ರಾಹುಲ್ ದ್ರಾವಿಡ್ ಭಾರತ ತಂಡದ ಕೋಚ್ ಆಗಿದ್ದಾಗ ಈ ವರ್ಷಾರಂಭದಲ್ಲಿ ದೇಶೀಯ ಕ್ರಿಕೆಟ್ ಆಡುವಂತೆ ಶ್ರೇಯಸ್ ಅಯ್ಯರ್ ಮತ್ತು ವಿಕೆಟ್ ಕೀಪರ್ ಇಶಾನ್ ಕಿಶನ್’ಗೆ ಸೂಚನೆ ನೀಡಲಾಗಿತ್ತು. ಈ ಪೈಕಿ ದ್ರಾವಿಡ್ ಅವರ ಸೂಚನೆಯನ್ನು ಧಿಕ್ಕರಿಸಿದ್ದ ಇಶಾನ್ ಕಿಶನ್ ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಬದಲು ಐಪಿಎಲ್’ಗೆ ತಾಲೀಮು ಶುರು ಮಾಡಿದ್ದರು. ಇದು ಬಿಸಿಸಿಐನ ಕೆಂಗಣ್ಣಿಗೆ ಗುರಿಯಾಗಿತ್ತು.
ಇದನ್ನೂ ಓದಿ : Ishan Kishan: ಹುಟ್ಟುಹಬ್ಬದ ದಿನ ಸಮಾಧಿ ಮಂದಿರಕ್ಕೆ ತೆರಳಿದ ಇಶಾನ್ ಕಿಶನ್, ಒಲಿಯುತ್ತಾನಾ ಸಾಯಿ ಬಾಬಾ ?
Want to get a place in the Indian Cricket team ? Cricketers have to do this from now on