MS Dhoni Fitness : ಮಹೇಂದ್ರ ಸಿಂಗ್ ಧೋನಿ ಟೀಂ ಇಂಡಿಯಾದ ಮಾಜಿ ನಾಯಕ. ಭಾರತ ತಂಡಕ್ಕೆ ಎರಡು ವಿಶ್ವಕಪ್ ಗೆಲ್ಲಿಸಿಕೊಟ್ಟ ಸರ್ವಶ್ರೇಷ್ಟ ನಾಯಕ ಎನಿಸಿಕೊಂಡಿದ್ದಾರೆ. ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಮುಂಬರುವ ಐಪಿಎಲ್‌ನಲ್ಲಿ ಚೆನ್ನೈ ತಂಡದ ನಾಯಕ ಯಾರು ಅನ್ನೋ ಪ್ರಶ್ನೆಗೆ ಇದೀಗ ಉತ್ತರ ದೊರಕಿದೆ.

ಕಳೆದ ಬಾರಿ ಐಪಿಎಲ್ ಗೆಲುವಿನ ಬೆನ್ನಲ್ಲೇ ಮೊಣಕಾಲಿನ ಶಸ್ತ್ರ ಚಿಕಿತ್ಸೆಗೆ ಮಹೇಂದ್ರ ಸಿಂಗ್ ಧೋನಿ ಒಳಗಾಗಿದ್ದರು. ಇದೇ ಕಾರಣದಿಂದಲೇ ಅವರು ಹಲವು ತಿಂಗಳುಗಳ ಕಾಲ ಕ್ರಿಕೆಟ್ ವೃತ್ತಿ ಬದುಕಿನಿಂದ ದೂರ ಉಳಿದಿದ್ದರು. ಇದೇ ಕಾರಣಕ್ಕೆ ಎಂಎಸ್ ಧೋನಿ ಈ ಬಾರಿಯ ಐಪಿಎಲ್‌ನಲ್ಲಿ ಆಡ್ತಾರಾ ಅನ್ನೋ ಅನುಮಾನವೂ ವ್ಯಕ್ತವಾಗಿತ್ತು.
ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ಆವೃತ್ತಿ ಆರಂಭಕ್ಕೆ ಕೆಲವೇ ದಿನಗಳ ಮೊದಲು ಇದೀಗ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕನ ಕುರಿತು ಗುಡ್‌ನ್ಯೂಸ್‌ವೊಂದು ದೊರೆತಿದೆ. ಶೀಘ್ರದಲ್ಲಿಯೇ ಮಹೇಂದ್ರ ಸಿಂಗ್ ಧೋನಿ ಅಭ್ಯಾಸವನ್ನು ಆರಂಭಿಸಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಓ ಕಾಸಿ ವಿಶ್ವನಾಥನ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ :ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರ್ತಾರಾ ಈ ಡೆತ್ ಬೌಲರ್
ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (ಜಿಟಿ) ತಂಡವನ್ನು ಸೋಲಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ಐದನೇ ಬಾರಿ ಐಪಿಎಲ್ ಟ್ರೋಫಿಯನ್ನು ಗೆಲ್ಲಿಸಿಕೊಟ್ಟಿದ್ದರು. ನಂತರದಲ್ಲಿ ಧೋನಿ ಎಡ ಮೊಣಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. 42 ವರ್ಷ ವಯಸ್ಸಿನ ಧೋನಿ ಅವರ ಫಿಟ್ನೆಸ್ ಕುರಿತು ಕೊನೆಗೂ ಅಧಿಕೃತ ಮಾಹಿತಿ ಹೊರಬಿದ್ದಿದೆ.
ಐಪಿಎಲ್ 2024 ತಯಾರಿಗಾಗಿ ಧೋನಿ ಮುಂದಿನ ಹತ್ತು ದಿನಗಳಲ್ಲಿ ನೆಟ್ಸ್‌ನಲ್ಲಿ ತರಬೇತಿ ಆರಂಭಿಸಲಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಆರಂಭದಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. ಅಲ್ಲದೇ ಐಪಿಎಲ್‌ನಲ್ಲಿ ಅತೀ ಹೆಚ್ಚು ಟ್ರೋಫಿಗಳನ್ನು ಚೆನ್ನೈ ತಂಡಕ್ಕೆ ಗೆಲ್ಲಿಸಿಕೊಟ್ಟಿದ್ದಾರೆ. ಮುಂದಿನ ಐಪಿಎಲ್‌ನಲ್ಲಿಯೂ ಮಹೇಂದ್ರ ಸಿಂಗ್ ಧೋನಿ ನಾಯಕರಾಗಿ ಮುಂದುವರಿಯುವ ಸಾಧ್ಯತೆಯಿದೆ.
ಈ ಹಿಂದೆ ರವೀಂದ್ರ ಜಡೇಜಾ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದರೂ ಕೂಡ ಅರ್ಧದಲ್ಲಿಯೇ ಐಪಿಎಲ್ ತೊರೆದಿದ್ದರು. ಈ ಬಾರಿ ಋತುರಾಜ್ ಗಾಯಕ್ವಾಡ್ ಹೆಸರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವಕ್ಕೆ ಕೇಳಿಬಂದಿದೆ. ಆದರೆ ಸದ್ಯದ ಮಾಹಿತಿಯ ಪ್ರಕಾರ ಮಹೇಂದ್ರ ಸಿಂಗ್ ಧೋನಿ ಅವರೇ ಈ ಬಾರಿಯೂ ತಂಡವನ್ನು ಮುನ್ನೆಡೆಸಲಿದ್ದಾರೆ.
ಇದನ್ನೂ ಓದಿ : ಐಪಿಎಲ್ 2024 : ಹಾರ್ದಿಕ್ ಪಾಂಡ್ಯ ಔಟ್ : ಮುಂಬೈ ಇಂಡಿಯನ್ಸ್‌ಗೆ ರೋಹಿತ್ ಶರ್ಮಾ ನಾಯಕ

ಮಿನಿ ಹರಾಜಿನಲ್ಲಿ ಚೆನ್ನೈ ತಂಡ 14 ಕೋಟಿ ರೂಪಾಯಿಗೆ ನ್ಯೂಜಿಲೆಂಡ್ ತಂಡದ ಸ್ಪೋಟಕ ಆರಂಭಿಕ ಆಟಗಾರ ಡೇರಿಲ್ ಮಿಚೆಲ್ ಅವರನ್ನು ಖರೀದಿಸಿದೆ. ಅಲ್ಲದೇ ರಚಿನ್ ರವೀಂದ್ರ (ರೂ. 1.8 ಕೋಟಿ), ಶಾರ್ದೂಲ್ ಠಾಕೂರ್ (ರೂ. 4 ಕೋಟಿ), ಸಮೀರ್ ರಿಜ್ವಿ (ರೂ. 8.40 ಕೋಟಿ), ಮುಸ್ತಫಿಜುರ್ ರೆಹಮಾನ್ (ರೂ. 2 ಕೋಟಿ), ಅವನೀಶ್ ರಾವ್ ಅರವಳ್ಳಿ (20 ಲಕ್ಷ ರೂ.). ಅವನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದೆ.
ಇದನ್ನೂ ಓದಿ : IPL ಹರಾಜು 2024 : ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ರತಿನಿಧಿಸಿದ ರಿಷಬ್ ಪಂತ್
IPL 2024 : ಚೆನ್ನೈ ಸೂಪರ್ ಕಿಂಗ್ಸ್ ತಂಡ
ಎಂಎಸ್ ಧೋನಿ (ನಾಯಕ), ಮೊಯಿನ್ ಅಲಿ, ದೀಪಕ್ ಚಾಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್ ಅರವೆಲ್ಲಿ.
Who is the captain of the CSK team Ipl 2024 ? CSK CEO give Good News About MS Dhoni Fitness