KL Rahul to Lead India : ಘಾಟಿ ಸುಬ್ರಮಣ್ಯನ ಸನ್ನಿಧಿಗೆ ಹೋದ ಐದೇ ದಿನಗಳಲ್ಲಿ ಕ್ಯಾಪ್ಟನ್, ರಾಹುಲ್‌ಗೆ ಸಿಕ್ತು ದೈವಬಲ

ಬೆಂಗಳೂರು: (KL Rahul to Lead India) ಕಳೆದ ಮೂರು ತಿಂಗಳುಗಳಿಂದ ಕ್ರಿಕೆಟ್ ಜೀವನದಲ್ಲಿ ಏರಿಳಿತಗಳನ್ನೇ ಎದುರಿಸಿದ್ದ ಕನ್ನಡಿಗ ಕೆ.ಎಲ್ ರಾಹುಲ್ ಅವರಿಗೆ ದೈವಬಲ ಸಿಕ್ಕಿದೆ. ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿ ಬಂದ ಐದೇ ದಿನಗಳಲ್ಲಿ ರಾಹುಲ್ ಭಾರತ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಜಿಂಬಾಬ್ವೆ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ರಾಹುಲ್ ಮುನ್ನಡೆಸಲಿದ್ದಾರೆ. ಜಿಂಬಾಬ್ವೆ ಪ್ರವಾಸಕ್ಕೆ ಮೊದಲು ಆಯ್ಕೆ ಮಾಡಿದ್ದ ತಂಡದಲ್ಲಿ ರಾಹುಲ್ ಇರಲಿಲ್ಲ. ಹೀಗಾಗಿ ಅನುಭವಿ ಎಡಗೈ ಓಪನರ್ ಶಿಖರ್ ಧವನ್ ನಾಯಕರಾಗಿದ್ದರು. ಆದರೆ ರಾಹುಲ್ ಆಗಮನದೊಂದಿಗೆ ನಾಯಕ ಪಟ್ಟ ಕನ್ನಡಿಗನ ಪಾಲಾಗಿದೆ.

ಏಷ್ಯಾ ಕಪ್ ಟೂರ್ನಿಗೆ ಆಯ್ಕೆಯಾಗಿರುವ ರಾಹುಲ್ ಅವರಿಗೆ ಒಂದಷ್ಟು ಮ್ಯಾಚ್ ಪ್ರಾಕ್ಟೀಸ್ ಅವಶ್ಯಕತೆಯಿದೆ. ಹೀಗಾಗಿ ರಾಹುಲ್ ಅವರನ್ನು ಜಿಂಬಾಬ್ವೆ ಪ್ರವಾಸಕ್ಕೆ ಕಳುಹಿಸಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ.

ಗಾಯದ ಸಮಸ್ಯೆ ಹಾಗೂ ಕೋವಿಡ್-19ನಿಂದ ಬಳಲಿದ್ದ ರಾಹುಲ್ ಕಳೆದ 3 ತಿಂಗಳಲ್ಲಿ ಒಟ್ಟು 7 ಸರಣಿಗಳಿಗೆ ಅಲಭ್ಯರಾಗಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ನಾಯಕರಾಗಿ ಆಯ್ಕೆಯಾಗಿದ್ದ ರಾಹುಲ್, ಸರಣಿ ಆರಂಭಕ್ಕೆ ಮುನ್ನಾ ದಿನ ಸ್ಪೋರ್ಟ್ಸ್ ಹರ್ನಿಯಾ (Sports Hernia) ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಹಾಗೂ ಸೀಮಿತ ಓವರ್’ಗಳ ಸರಣಿಯನ್ನು ರಾಹುಲ್ ತಪ್ಪಿಸಿಕೊಂಡಿದ್ದರು. ನಂತರ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆ ಪಡೆದು ಬಂದಿದ್ದ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಸಜ್ಜಾಗುತ್ತಿದ್ದಾಗ ಕೋವಿಡ್-19 ಕಾಣಿಸಿಕೊಂಡಿತ್ತು. ಹೀಗಾಗಿ ವಿಂಡೀಸ್ ವಿರುದ್ಧದ ಸರಣಿಯಿಂದಲೂ ರಾಹುಲ್ ಹೊರ ಬಿದ್ದಿದ್ದರು.

ಕಳೆದ ಭಾನುವಾರ ರಾಹುಲ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿರುವ ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದಾದ ಒಂದೇ ದಿನದಲ್ಲಿ ಏಷ್ಯಾ ಕಪ್ ಟಿ20 ಟೂರ್ನಿಗೆ ಆಯ್ಕೆ ಮಾಡಲಾಗಿದ್ದ ಭಾರತ ತಂಡದಲ್ಲಿ ರಾಹುಲ್ ಸ್ಥಾನ ಪಡೆದಿದ್ದರು. ಗುರುವಾರ ರಾಹುಲ್ ಅವರಿಗೆ ಮತ್ತೊಂದು ಶುಭಸುದ್ದಿ ಸಿಕ್ಕಿದ್ದು, ಜಿಂಬಾಬ್ವೆ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ನಾಯಕರಾಗಿ ಆಯ್ಕೆಯಾಗಿದ್ದಾರೆ. ರಾಹುಲ್ ನಾಯಕತ್ವದ ಭಾರತ ತಂಡ ಶನಿವಾರ ಮುಂಬೈನಿಂದ ಜಿಂಬಾಬ್ವೆಗೆ ಪ್ರಯಾಣ ಬೆಳೆಸಲಿದ್ದು, ಮೊದಲ ಏಕದಿನ ಪಂದ್ಯ ಆಗಸ್ಟ್ 18ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿದೆ. ಜಿಂಬಾಬ್ವೆ ಪ್ರವಾಸದ ಬೆನ್ನಲ್ಲೇ ರಾಹುಲ್ ಏಷ್ಯಾ ಕಪ್ ಟೂರ್ನಿಗಾಗಿ ದುಬೈಗೆ ತೆರಳಲಿದ್ದಾರೆ.

ಜಿಂಬಾಬ್ವೆ ಪ್ರವಾಸಕ್ಕೆ ಭಾರತ ತಂಡ:
ಕೆ.ಎಲ್ ರಾಹುಲ್ (ನಾಯಕ), ಶಿಖರ್ ಧವನ್ (ಉಪನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ದೀಪಕ್ ಹೂಡ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.

ಭಾರತ Vs ಜಿಂಬಾಬ್ವೆ ಏಕದಿನ ಸರಣಿಯ ವೇಳಾಪಟ್ಟಿ
ಆಗಸ್ಟ್ 18: ಮೊದಲ ಏಕದಿನ (ಹರಾರೆ ಸ್ಪೋರ್ಟ್ಸ್ ಕ್ಲಬ್, ಹರಾರೆ)
ಆಗಸ್ಟ್ 20: ಮೊದಲ ಏಕದಿನ (ಹರಾರೆ ಸ್ಪೋರ್ಟ್ಸ್ ಕ್ಲಬ್, ಹರಾರೆ)
ಆಗಸ್ಟ್ 22: ಮೊದಲ ಏಕದಿನ (ಹರಾರೆ ಸ್ಪೋರ್ಟ್ಸ್ ಕ್ಲಬ್, ಹರಾರೆ)

ಇದನ್ನೂ ಓದಿ : Arjun Tendulkar To Play for Goa: ಮುಂಬೈಗೆ ಅರ್ಜುನ್ ತೆಂಡೂಲ್ಕರ್ ಗುಡ್ ಬೈ, ಗೋವಾ ಪರ ಆಡಲಿದ್ದಾರೆ ಸಚಿನ್ ಪುತ್ರ

ಇದನ್ನೂ ಓದಿ : Sachin Raksha Bandhan Gift : ರಕ್ಷಾ ಬಂಧನದ ದಿನ ಅಕ್ಕನ ಕೊಟ್ಟ ಅಮೂಲ್ಯ ಉಡುಗೊರೆಯನ್ನು ನೆನಪಿಸಿಕೊಂಡ ಸಚಿನ್ ತೆಂಡೂಲ್ಕರ್

Within five days of visit Ghati Subrahmanya Temple presence, KL Rahul to Lead India got divine power

Comments are closed.