Team India New Captain ind vs aus t20 Series : 2023ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲು ಕಂಡಿದೆ. ಇದರ ಬೆನ್ನಲ್ಲೇ ಇದೀಗ ಭಾರತ ತಂಡ ಆಸ್ಟ್ರೇಲಿಯಾದ ವಿರುದ್ದ ಟಿ20 ಸರಣಿಯನ್ನು (India vs Austraila t20 Series) ಆಡಲಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohith Sharma) ಅವರಿಗೆ ಆಸ್ಟ್ರೇಲಿಯಾ ವಿರುದ್ದದ ಸರಣಿಗೆ ಕೋಕ್ ನೀಡಲಾಗಿದ್ದು, ಬಿಸಿಸಿಐ ಸೂರ್ಯ ಕುಮಾರ್ ಯಾದವ್ (Surya Kumar Yadav) ಅವರನ್ನು ಟೀಂ ಇಂಡಿಯಾ ನಾಯಕನನ್ನಾಗಿ ಆಯ್ಕೆ ಮಾಡಿದೆ.

ವಿಶ್ವಕಪ್ ಆರಂಭಕ್ಕೂ ಮೊದಲೇ ಆಸ್ಟ್ರೇಲಿಯಾ ತಂಡದ ವಿರುದ್ದ ಭಾರತ ಏಕದಿನ ಸರಣಿಯನ್ನು ಆಡಿತ್ತು. ಕೆಎಲ್ ರಾಹುಲ್ ನೇತೃತ್ವದ ತಂಡ ಆಸ್ಟ್ರೇಲಿಯಾ ವಿರುದ್ದ ಸರಣಿಯನ್ನು ಜಯಿಸಿತ್ತು. ಇದೀಗ ಐದು ಪಂದ್ಯಗಳ ಟಿ20 ಸರಣಿಯನ್ನು ಭಾರತ ಆಸ್ಟ್ರೇಲಿಯಾ ವಿರುದ್ದ ಆಡಲಿದೆ. ನವೆಂಬರ್ 23, 2023 ರಂದು ವಿಶಾಖಪಟ್ಟಣದಲ್ಲಿ ಆಸ್ಟ್ರೇಲಿಯಾ ವಿರುದ್ದದ ಸರಣಿಯ ಮೊದಲ ಪಂದ್ಯ ನಡೆಯಲಿದೆ.
ಇದನ್ನೂ ಓದಿ : ಐಪಿಎಲ್ 2024 : ನಿವೃತ್ತಿ ಘೋಷಿಸಿದ ಲಕ್ನೋ ಸೂಪರ್ ಜೈಂಟ್ಸ್ ಆರಂಭಿಕ ಆಟಗಾರ
ಪಂದ್ಯಾವಳಿ ಆರಂಭಕ್ಕೆ ಎರಡು ದಿನಗಳ ಮೊದಲು ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡದ ನಾಯಕರನ್ನಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಬಹುತೇಕ ಆಟಗಾರರಿಗೆ ಈ ಸರಣಿಗೆ ವಿಶ್ರಾಂತಿ ನೀಡಲಾಗಿದೆ.
ಟೀಂ ಇಂಡಿಯಾದ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅವರನ್ನು ತಂಡದ ಉಪನಾಯಕನನ್ನಾಗಿ ನೇಮಿಸಲಾಗಿದೆ. ಕೊನೆಯ ಎರಡು ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಅಲ್ಲದೇ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ತಿರುವನಂತಪುರಂ, ಗುವಾಹಟಿ, ರಾಯ್ಪುರ ಹಾಗೂ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ.
ಇದನ್ನೂ ಓದಿ : ವಿಶ್ವಕಪ್ ಸೋಲಿನ ಬೆನ್ನಲ್ಲೇ ನವೆಂಬರ್ 23ರಂದು ಭಾರತ Vs ಆಸ್ಟ್ರೇಲಿಯಾ ಮರುಪಂದ್ಯ
ವಿಶ್ವಕಪ್ ಬಾಂಗ್ಲಾದೇಶ ವಿರುದ್ದದ ಪಂದ್ಯದಲ್ಲಿ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಅವರು ಆಸ್ಟ್ರೇಲಿಯಾ ವಿರುದ್ದದ ಸರಣಿಯಿಂದಲೂ ಹೊರಬಿದ್ದಿದ್ದಾರೆ. ಇನ್ನು ಭರವಸೆಯ ಆಟಗಾರ ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಮುಂದಿನ ವಿಶ್ವಕಪ್ ದೃಷ್ಟಿಯಿಂದ ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ ಹಾಗೂ ರಿಂಕು ಸಿಂಗ್ ಅವರಿಗೆ ಈ ಸರಣಿ ಮಹತ್ವದ್ದಾಗಿದೆ.

ಯುವ ಬೌಲರ್‌ಗಳಾದ ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್ ಮತ್ತು ರವಿ ಬಿಷ್ಣೋಯ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಮತ್ತು ಶಿವಂ ದುಬೆ ಆಲ್ ರೌಂಡರ್ ಖೋಟಾದಡಿಯಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನೊಂದೆಡೆಯಲ್ಲಿ ಜಿತೇಶ್ ಶರ್ಮಾ ಬ್ಯಾಕ್ ಅಪ್ ವಿಕೆಟ್ ಕೀಪರ್ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ : 11 ಪಂದ್ಯ 3 ಶತಕ, 765 ರನ್ : ವಿಶ್ವಕಪ್ ಸೋತರು ವಿಶ್ವದಾಖಲೆ ಬರೆದ ವಿರಾಟ್ ಕೊಹ್ಲಿ
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಸ್ಸವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷ್ದೀಪ್ ಸಿಂಗ್, ಪರ್ದೀಶ್ ಕೃಷ್ಣ ಅವೇಶ್ ಖಾನ್, ಮುಖೇಶ್ ಕುಮಾರ್. ಶ್ರೇಯಸ್ ಅಯ್ಯರ್ ರಾಯಪುರ ಮತ್ತು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಎರಡು ಟಿ20ಐಗಳಿಗೆ ಉಪನಾಯಕನಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ.
World Cup 2023 Defeat Rohit Sharma Out, BCCI Announced Suryakumar Yadav as Team India New Captain