ಐಸಿಸಿ ಏಕದಿನದ ವಿಶ್ವಕಪ್ 2023 ಫೈನಲ್ (ICC World Cup Final 2023) ಪಂದ್ಯಕ್ಕಾಗಿ ವಿಶ್ವದ ಕ್ರಿಕೆಟ್ ಜಗತ್ತು ಕಾತರದಿಂದ ಕಾಯುತ್ತಿದೆ. ಭಾರತ ಹಾಗೂ ಆಸ್ಟ್ರೇಲಿಯಾ (IND Vs AUS) ತಂಡಗಳು ವಿಶ್ವಕಪ್‌ಗಾಗಿ ಸೆಣೆಸಾಡಲಿವೆ. ರೋಹಿತ್ ಶರ್ಮಾ ನೇತೃತ್ವದ ತಂಡ ಭಾರತ ತಂಡ 20 ವರ್ಷಗಳ ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. ಅಲ್ಲದೇ ಭಾರತಕ್ಕೆ ಇದೀಗ 3 ನೇ ಬಾರಿಗೆ ವಿಶ್ವಕಪ್‌ಗೆಲ್ಲುವ ಅವಕಾಶವಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ವಿಶ್ವಕಪ್‌ನ ಫೈನಲ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಪಂದ್ಯಕ್ಕಾಗಿ ಆಸ್ಟ್ರೇಲಿಯ ಹಾಗೂ ಭಾರತ ತಂಡಗಳು ಸೆಣೆಸಾಟವನ್ನು ನಡೆಸಲಿದೆ. ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತ ವಿಶ್ವಕಪ್‌ನಲ್ಲಿ ಆಡಿದ 10 ಪಂದ್ಯಗಳಲ್ಲಿ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್‌ಗೆ ಪ್ರವೇಶ ಪಡೆದಿದೆ.
ವಿಶ್ವಕಪ್ ನಲ್ಲಿ ಹೇಳಿಕೊಳ್ಳುವಂತ ಪ್ರದರ್ಶನ ನೀಡದೇ ಇದ್ರೂ ಕೂಡ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಸೋಲಿಸುವ ಮೂಲಕ ಆಸ್ಟ್ರೇಲಿಯಾ ತಂಡ ವಿಶ್ವಕಪ್ ಫೈನಲ್‌ಗೆ ಎಂಟ್ರಿ ಕೊಟ್ಟಿದೆ. ಆಸ್ಟ್ರೇಲಿಯಾ ದಾಖಲೆಯ 8 ನೇ ಬಾರಿಗೆ ವಿಶ್ವಕಪ್ ಫೈನಲ್ ಪ್ರವೇಶಿಸಿದೆ.
ಇದನ್ನೂ ಓದಿ : ವಿಶ್ವಕಪ್‌ನಲ್ಲಿ ಇತಿಹಾಸ ಬರೆದ ಅಫ್ಘಾನಿಸ್ತಾನ : ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಅರ್ಹತೆ
ವಿಶ್ವಕಪ್‌ನ ಫೈನಲ್ ಪಂದ್ಯಕ್ಕೂ ಮೊದಲೇ ಏರ್‌ಶೋ ನಡೆಯುವ ಸಾಧ್ಯತೆಯಿದೆ. ಪಂದ್ಯಾವಳಿಯನ್ನು ವೀಕ್ಷಿಸಲು ಬಹುತೇಕ ಕಡೆಗಳಲ್ಲಿ ಬಿಗ್ ಸ್ಕ್ರೀನ್‌ನಲ್ಲಿ ಅಳವಡಿಸುವ ಕಾರ್ಯವನ್ನು ಮಾಡಲಾಗಿದೆ. ಈ ಮೂಲಕ ಭಾರತದ ವಿಶ್ವಕಪ್ ಪಂದ್ಯಾವಳಿಯನ್ನು ಅವಿಷ್ಮರಣೀಯವಾಗಿಸಲು ಸಿದ್ದತೆ ನಡೆಯುತ್ತಿದೆ.

ಭಾರತ ವಿಶ್ವಕಪ್ ಫೈನಲ್‌ಗೆ ಎಂಟ್ರಿ ಕೊಟ್ಟಿರುವ ಹಿನ್ನೆಲೆಯಲ್ಲಿ ಫೈನಲ್ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ವೀಕ್ಷಣೆ ಮಾಡುವ ಸಾಧ್ಯತೆಯಿದೆ. ಅಲ್ಲದೇ ಎನ್‌ಇಟಿ ವಿಮಾನಗಳು ಈಗಾಗಲೇ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಏರ್‌ಶೋಗಾಗಿ ತಾಲೀಮು ನಡೆಸಿವೆ. ಆದರೆ ಸ್ಥಳೀಯ ಆಡಳಿತದ ಅನುಮತಿ ಸಿಕ್ಕ ಕೂಡಲೇ ಏರ್‌ಶೋ ನಡೆಯಲಿದೆ.
ವಿಶ್ವಕಪ್ ಫೈನಲ್ ಪಂದ್ಯದ ನೇರಪ್ರಸಾರ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ಲಭ್ಯವಿದೆ. ಮಧ್ಯಾಹ್ನ 2 ಗಂಟೆಯಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಪಂದ್ಯ ಆರಂಭಗೊಳ್ಳಲಿದೆ. ಆದರೆ ಬೆಳಗ್ಗೆ 7 ಗಂಟೆಯಿಂದಲೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ ನೇರಪ್ರಸಾರ ಮಾಡಲಿದೆ. ಈ ಕುರಿತು ಸ್ಟಾರ್ ಸ್ಪೋರ್ಟ್ ಮಾಹಿತಿ ನೀಡಿದೆ.
ಇದನ್ನೂ ಓದಿ : ಐಪಿಎಲ್ 2024 : ನಿವೃತ್ತಿ ಘೋಷಿಸಿದ ಲಕ್ನೋ ಸೂಪರ್ ಜೈಂಟ್ಸ್ ಆರಂಭಿಕ ಆಟಗಾರ
Beautiful Narendra Modi Stadium is all ready to host World Cup 2023 Final 🤩#INDvsAUS #WorldcupFinal pic.twitter.com/sUju3aNGBN
— Ishan Joshi (@ishanjoshii) November 18, 2023
ವಿಶ್ವಕಪ್ ಫೈನಲ್ ಪಂದ್ಯಕ್ಕೆ ಭಾರತ ಹಾಗೂ ಆಸ್ಟ್ರೇಲಿಯ ತಂಡ
ಭಾರತ ತಂಡ XI : ರೋಹಿತ್ ಶರ್ಮಾ (c), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (WK), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
ಆಸ್ಟ್ರೇಲಿಯಾ ತಂಡ XI : ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್ (ವಾರ), ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ (ಸಿ), ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
World Cup 2023 Final: India vs Australia Match, Live from 7 am