world cup 2023 final : ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಇಂದು ಆಸ್ಟ್ರೇಲಿಯಾ (IND vs AUS) ತಂಡವನ್ನು ಎದುರಿಸಲಿದೆ. ಈಗಾಗಲೇ ಐದು ಬಾರಿ ವಿಶ್ವಕಪ್ ಗೆದ್ದಿರುವ ಆಸ್ಟ್ರೇಲಿಯಾ ತಂಡ ಎರಡು ಬಾರಿ ವಿಶ್ವಕಪ್ ಗೆದ್ದಿರುವ ಭಾರತವನ್ನು ಎದುರಿಸಲಿದೆ. ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯ ಹಲವು ದಾಖಲೆಗಳಿಗೆ ಸಾಕ್ಷಿಯಾಗುವ ಸಾಧ್ಯತೆಯಿದೆ. ಈಗಾಗಲೇ ಟಾಸ್ ಗೆದ್ದಿರುವ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ್ರೆ, ಸೆಮಿಫೈನಲ್‌ನಲ್ಲ ಆಡಿರುವ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡದೇ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಣಕ್ಕೆ ಇಳಿಸಿವೆ.
ನಾಯಕ ರೋಹಿತ್ ಶರ್ಮಾ ಜೊತೆಗೆ ವಿಶ್ವದ ನಂ 1 ಆಟಗಾರ ಶುಭಮನ್ ಗಿಲ್ ಆರಂಭಿಕರಾಗಿ ಕಣಕ್ಕೆ ಇಳಿಯಲಿದ್ದಾರೆ. ಒಂದನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ನಂತರ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಬಲ ನೀಡಲಿದ್ದಾರೆ. ಇನ್ನು ಬೌಲಿಂಗ್ ವಿಭಾಗವೂ ಬಲಿಷ್ಠವಾಗಿದೆ.
ಇದನ್ನೂ ಓದಿ : ವಿಶ್ವಕಪ್ 2023, ಭಾರತ – ಆಸ್ಟ್ರೇಲಿಯಾ ಪಂದ್ಯ : ವೀಕ್ಷಕ ವಿವರಣೆ ಹೇಳ್ತಾರೆ ಡಿಬಾಸ್ ದರ್ಶನ್ ತೂಗುದೀಪ್
ಸೆಮಿಫೈನಲ್ ಪಂದ್ಯದಲ್ಲಿ ದಾಖಲೆಯ ವಿಕೆಟ್ ಕಿತ್ತ ಮೊಹಮದ್ ಸೆಮಿ, ಜಸ್ಪ್ರಿತ್ ಬೂಮ್ರಾ, ಮೊಹಮದ್ ಸಿರಾಜ್ ತಂಡಕ್ಕೆ ಬಲ ನೀಡಿದ್ದಾರೆ. ಕುಲದೀಪ್ ಯಾದವ್, ಜಡೇಜಾ ಸ್ಪಿನ್‌ನಲ್ಲಿ ಮೋಡಿ ಮಾಡಲಿದ್ದಾರೆ. ಸತತ 10 ಗೆಲುವಿನೊಂದಿಗೆ ಬೀಗುತ್ತಿರುವ ಭಾರತ ಇಂದಿನ ಪಂದ್ಯವನ್ನು ಜಯಿಸುವ ಮೂಲಕ ವಿಶ್ವಕಪ್ ಗೆಲ್ಲಬೇಕು ಅಂತಾ ಕೋಟ್ಯಾಂತರ ಭಾರತೀಯರು ಹಾರೈಸುತ್ತಿದ್ದಾರೆ.

ಇನ್ನು ಆಸ್ಟ್ರೇಲಿಯಾ ತಂಡ ಬಲಿಷ್ಠವಾಗಿದೆ. ವಿಶ್ವಕಪ್ ಆರಂಭದಲ್ಲಿ ನಿರಾಶಾದಾಯಕ ಆಟವನ್ನು ಆಡಿದ್ದ ಆಸ್ಟ್ರೇಲಿಯಾ ನಂತರದಲ್ಲಿ ಉತ್ತಮ ಆಟದ ಮೂಲಕ ಗೆದ್ದು ಫೈನಲ್‌ಗೆ ಎಂಟ್ರಿ ಕೊಟ್ಟಿತ್ತು. ಅತೀ ಹೆಚ್ಚು ಬಾರಿ ವಿಶ್ವಕಪ್ ಗೆದ್ದಿರುವ ಖ್ಯಾತಿ ಪಡೆದಿರುವ ಆಸ್ಟ್ರೇಲಿಯಾ ಯಾವುದೇ ಹಂತದಲ್ಲಿಯೂ ಸಿಡಿದೇಳುವ ಸಾಧ್ಯತೆಯಿದೆ.
ಇದನ್ನೂ ಓದಿ : ರೋಹಿತ್ ಶರ್ಮಾಗೆ ಕೊನೆಯ ಐಸಿಸಿ ಸರಣಿ ಆಗುತ್ತಾ ವಿಶ್ವಕಪ್ ಫೈನಲ್ ? ನಿವೃತ್ತಿ ಪಡೆಯುತ್ತಾರಾ ರೋಹಿತ್ ಶರ್ಮಾ
ಭಾರತದ ಅತೀ ದೊಡ್ಡ ಕ್ರೀಡಾಂಗಣ ಎನಿಸಿಕೊಂಡಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಮೈದಾನ ದಲ್ಲಿ ಕುಳಿತು ಇಂದಿನ ಪಂದ್ಯವನ್ನು 1,32,000 ಮಂದಿ ವೀಕ್ಷಿಸಲಿದ್ದಾರೆ. ಸರದಾರ್ ವಲ್ಲಭಬಾಯಿ ಪಟೇಲ್ ಸ್ಟೇಡಿಯಂ 1983 ರಲ್ಲಿ ನಿರ್ಮಾಣ ಗೊಂಡಿದ್ದು, ಮೈದಾನದಲ್ಲಿ ಪುನರ್ ನವೀಕರಣಗೊಳಿಸಿ ಅದನನು ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣ ಮಾಡಲಾಗಿದೆ.

2022 ರಲ್ಲಿ ಐಪಿಎಲ್ ಫೈನಲ್ ಪಂದ್ಯಕ್ಕೆ ಈ ಮೈದಾನ ಆತಿಥ್ಯ ವಹಿಸು ಮೂಲಕ ಗಿನ್ನಿಸ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಸೇರ್ಪಡೆಯಾಗಿದೆ. ಪಂದ್ಯ ವೀಕ್ಷಣೆಗೆ ಒಟ್ಟು 1,10,566 ಮಂದಿ ವೀಕ್ಷಣೆಯನ್ನು ಮಾಡಿದ್ದರು. ಆದರೆ ಇಂದಿನ ಪಂದ್ಯದಲ್ಲಿ ಹಿಂದಿನ ದಾಖಲೆಯನ್ನು ಅಳಿಸಿ ಹಾಕುವ ಸಾಧ್ಯತೆಯಿದೆ.
ಇದನ್ನೂ ಓದಿ : ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಇದು ಕೊನೆಯ ವಿಶ್ವಕಪ್ !
ಭಾರತ VS ಆಸ್ಟ್ರೇಲಿಯಾ ತಂಡ :
ಭಾರತ : ರೋಹಿತ್ ಶರ್ಮಾ (ಸಿ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯ ಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.
ಆಸ್ಟ್ರೇಲಿಯಾ : ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್, ಆಡಮ್ ಝಂಪಾ
world cup 2023 IND vs AUS final India vs Australia match India batting