ಪುಣೆ : ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ಪಂದ್ಯಕ್ಕಾಗಿ ಭಾರತೀಯರು ಕಾದು ಕುಳಿತಿದಿದ್ದಾರೆ. ರೋಹಿತ್ ಶರ್ಮಾ ನೇತೃತ್ವದ ತಂಡ ಬಾಂಗ್ಲಾದೇಶದ ವಿರುದ್ದ ಸೇಡು ತೀರಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದೆ. ಮೂರು ಪಂದ್ಯಗಳನ್ನು ಗೆದ್ದಿರುವ ಭಾರತ ನಾಲ್ಕನೇ ಪಂದ್ಯವನ್ನೂ ಗೆಲ್ಲಲಿ ಅಂತಾ ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಪುಣೆಯ MCA ಕ್ರೀಡಾಂಗಣದಲ್ಲಿ ಗುರುವಾರ (ಅಕ್ಟೋಬರ್ 19) ರಂದು ನಡೆಯಲಿರುವ ICC ODI ವಿಶ್ವಕಪ್ 2023ರ ( ICC ODI World Cup 2023) 17 ನೇ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶವನ್ನು ಎದುರಿಸಲಿದೆ. ರೋಹಿತ್ ಶರ್ಮಾ ಪಡೆ ಈಗಾಗಲೇ ಗೆಲುವಿನ ಅಭಿಯಾನವನ್ನು ಮುಂದುವರಿಸಲು ತುದಿಗಾಲಲ್ಲಿ ನಿಂತಿದೆ.

ಈಗಾಗಲೇ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ವಿರುದ್ಧ ಭರ್ಜರಿ ಗೆಲುವು ದಾಖಲಿಸಿರುವ ಭಾರತ ತಂಡ ಅಂಕಪಟ್ಟಿಯಲ್ಲಿ ಸದ್ಯ ಎರಡನೇ ಸ್ಥಾನದಲ್ಲಿದೆ. ನಾಲ್ಕು ಪಂದ್ಯಗಳನ್ನು ಗೆದ್ದಿರುವ ನ್ಯೂಜಿಲೆಂಡ್ (New Zealand) ಅಗ್ರಸ್ಥಾನದಲ್ಲಿದೆ. ಒಂದೊಮ್ಮೆ ಭಾರತ ತಂಡ ಬಾಂಗ್ಲಾದೇಶದ ವಿರುದ್ದ ಗೆಲುವನ್ನು ದಾಖಲಿಸಿದ್ರೆ ಭಾರತ ಅಗ್ರಸ್ಥಾನಕ್ಕೇರಲಿದೆ.
ಪುಣೆಯ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಹೀಗಾಗಿ ಎರಡೂ ತಂಡಗಳಿಗೂ ಸಮಾನ ಅವಕಾಶಗಳಿವೆ. ಆದರೆ ಕ್ರಿಕೆಟ್ ಅಭಿಮಾನಿಗಳಿಗೆ ಸದ್ಯ ಪಂದ್ಯದ ಮೇಲೆ ಮಳೆಯ ಭೀತಿ ಎದುರಾಗಿದೆ. ಆದರೆ ಹವಾಮಾನ ಇಲಾಖೆ (Weather Department) ಭಾರತ ಹಾಗೂ ಬಾಂಗ್ಲಾದೇಶ ಪಂದ್ಯಕ್ಕೆ ಗುಡ್‌ನ್ಯೂಸ್ ಕೊಟ್ಟಿದೆ.
ಸದ್ಯ ಪುಣೆಯಲ್ಲಿನ ಹವಾಮಾನ ವರದಿಯನ್ನು ನೋಡಿದ್ರೆ ಭಾರತ ಬಾಂಗ್ಲಾದೇಶ ಪಂದ್ಯದ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ. ಮೈದಾನದಲ್ಲಿ 33 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದ್ದು, ಆರ್ದ್ರತೆಯು ಶೇಕಡಾ 41 ರಷ್ಟಿರುತ್ತದೆ. ಜೊತೆಗೆ ಇಡೀ ಪಂದ್ಯದ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆಯೇ ಇಲ್ಲ ಎನ್ನಲಾಗುತ್ತಿದೆ.
ಆದರೆ ಸಂಜೆಯ ವೇಳೆಯಲ್ಲಿ ತಾಪಮಾನದಲ್ಲಿ ಕುಸಿತ ಉಂಟಾಗಲಿದೆ. ಆದರೆ ಇಬ್ಬನಿ ಬ್ಯಾಟಿಂಗ್‌ಗೆ ಹೆಚ್ಚು ನೆರವಾಗುವ ಸಾಧ್ಯತೆಯಿದೆ. ಇನ್ನು ಪುಣೆ ಪಿಚ್ ಬ್ಯಾಟಿಂಗ್‌ಗೆ ಸಹಕಾರಿಯಾಗುವ ಹಿನ್ನೆಲೆಯೆಲ್ಲಿ ದಾಖಲೆಯ ಮೊತ್ತ ದಾಖಲಾಗುವ ಸಾಧ್ಯತೆಯೂ ಇದೆ. ಜೊತೆಗೆ ಬೌಂಡರಿ ಲೈನ್ ತೀರಾ ಸಣ್ಣದಾಗಿರುವುದರಿಂದ ಬ್ಯಾಟ್ಸ್‌ಮನ್‌ಗಳು ಆರ್ಭಟಿಸಲಿದ್ದಾರೆ.

ಭಾರತ ತಂಡ ಸಂಭಾವ್ಯ XI :
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್) ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್/ ಮೊಹಮ್ಮದ್ ಶಮಿ/ ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಬಾಂಗ್ಲಾದೇಶ ತಂಡ ಸಂಭಾವ್ಯ XI:
ಲಿಟ್ಟನ್ ದಾಸ್, ತಂಝಿದ್ ತಮೀಮ್, ಮೆಹಿದಿ ಹಸನ್ ಮಿರಾಜ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮುಶಿಫಿಕುರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯೋಯ್, ಮಹಮ್ಮದುಲ್ಲಾ, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್, ಶೋರಿಫುಲ್ ಇಸ್ಲಾಂ
ವಿಶ್ವಕಪ್ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಮೊಹಮ್ಮದ್ ಶಮಿ , ರವಿಚಂದ್ರನ್ ಅಶ್ವಿನ್
ವಿಶ್ವಕಪ್ ಬಾಂಗ್ಲಾದೇಶ ತಂಡ:
ಲಿಟ್ಟನ್ ದಾಸ್, ತಂಝಿದ್ ಹಸನ್, ಮೆಹಿದಿ ಹಸನ್ ಮಿರಾಜ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್(ನಾಯಕ), ಮುಶ್ಫಿಕರ್ ರಹೀಮ್(ವಿಕೆಟ್ ಕೀಪರ್), ತೌಹಿದ್ ಹೃದಯೋಯ್, ಮಹ್ಮುದುಲ್ಲಾ, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರೆಹಮಾನ್, ಶೊರಿಫುಲ್ ಹಸನ್ ಇಸ್ಲಾಂ, ತಂಝೀಮ್ ಹಸನ್ , ಮಹೇದಿ ಹಸನ್, ನಸುಮ್ ಅಹಮದ್