ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ : ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟ ಟೀಂ ಇಂಡಿಯಾ

ನವದೆಹಲಿ : ಇಂಗ್ಲೆಂಡ್ ವಿರುದ್ದದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದ್ದು, ಟೆಸ್ಟ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ. ಈ ಮೂಲಕ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಟೀಂ ಇಂಡಿಯಾ ನಂ.1 ಸ್ಥಾನಕ್ಕೆ ಲಗ್ಗೆ ಇಟ್ಟಿದೆ.

ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ದ ಸುಲಭ ಗೆಲುವು ಸಾಧಿಸಿದೆ. ಈ ಮೂಲಕ ಟೆಸ್ಟ್ ಸರಣಿಯಲ್ಲಿ ಮೇಲುಗೈ ಸಾಧಿಸಿದ್ದು, ಅಗ್ರ ಸ್ಥಾನಕ್ಕೇರಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಅಗ್ರಸ್ಥಾನಕ್ಕೇರಿರುವ ನ್ಯೂಜಿಲ್ಯಾಂಡ್ ವಿರುದ್ದ ಸೆಣೆಸಾಟ ನಡೆಸಬೇಕಾದ್ರೆ ಭಾರತ ಇಂಗ್ಲೆಂಡ್ ವಿರುದ್ದದ ನಾಲ್ಕನೇ ಟೆಸ್ಟ್ ಪಂದ್ಯವನ್ನು ಕನಿಷ್ಠ ಡ್ರಾ ಸಾಧಿಸಲೇ ಬೇಕಾಗಿದೆ. ಒಂದೊಮ್ಮೆ ಸೋಲನ್ನು ಕಂಡ್ರೆ ಆಸ್ಟ್ರೇಲಿಯಾ ಫೈನಲ್ ಪ್ರವೇಶಿಸಲಿದೆ. ಟೀಂ ಇಂಡಿಯಾ 71.0 ಅಂಕ ಗಳಿಸಿದ್ರೆ, ನ್ಯೂಜಿಲ್ಯಾಂಡ್ 70.0 ಹಾಗೂ ಆಸ್ಟ್ರೇಲಿಯಾ 69.2 ಅಂಕ ಪಡೆದಿದೆ. ಹೀಗಾಗಿ ಭಾರತಕ್ಕೆ ನಾಲ್ಕನೇ ಟೆಸ್ಟ್ ಪಂದ್ಯ ಹೆಚ್ಚು ನಿರ್ಣಾಯಕವೆನಿಸಲಿದೆ.

Comments are closed.