WTC Final : ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಭಾರತ ತಂಡ ಪ್ರಕಟ : ರಾಹುಲ್, ಮಾಯಂಕ್ ಗೆ ಇಲ್ಲ ಅವಕಾಶ

ಮುಂಬೈ : ನ್ಯೂಜಿಲೆಂಡ್ ತಂಡ ವಿರುದ್ದ ಸೌತಾಂಪ್ಟನ್‌ನಲ್ಲಿ ಜೂನ್ 18 ರಿಂದ ಆರಂಭಗೊಳ್ಳಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯಕ್ಕಾಗಿ ಬಿಸಿಸಿಐ (ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ) 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ.

ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಹಾಗೂ ಇಂಗ್ಲೆಂಡ್ ವಿರುದ್ದದ ಪಂದ್ಯಕ್ಕೆ 20 ಮಂದಿಯ ತಂಡವನ್ನು ಇಂಗ್ಲೆಂಡ್ ಗೆ ಕಳುಹಿಸಲಾಗಿತ್ತು. ಇದೀಗ ಬಿಸಿಸಿಐ 15 ಮಂದಿಯ ತಂಡವನ್ನು ಆಯ್ಕೆ ಮಾಡಿದೆ. ಆಕ್ಷರ್ ಪಟೇಲ್, ಕೆಎಲ್ ರಾಹುಲ್, ಶಾರ್ದುಲ್ ಠಾಕೂರ್, ಮಾಯಾಂಕ್ ಅಗರ್ವಾಲ್, ವಾಷಿಂಗ್ಟನ್ ಸುಂದರ್ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಿಂದ ಕೈ ಬಿಟ್ಟಿದೆ.

ರೋಹಿತ್ ಶರ್ಮಾ ಜೊತೆಗೆ ಶುಭಮನ್ ಗಿಲ್ ಆರಂಭಿಕರಾಗಿ ಕಣಕ್ಕೆ ಇಳಿಯಲಿರುವುದರಿಂದಾಗಿ ರಾಹುಲ್ ಹಾಗೂ ಮಾಯಂಕ್ ಅಗರ್ ವಾಲ್ ಸ್ಥಾನದಿಂದ ವಂಚಿತರಾಗಿದ್ದಾರೆ. ಆಲ್ ರೌಂಡರ್ ಸ್ಥಾನದಲ್ಲಿ ಉತ್ತಮ ಫಾರ್ಮ್ ನಲ್ಲಿದ್ದರೂ ಕೂಡ ಜಡೇಜಾ ಹಾಗೂ ಹನುಮ ವಿಹಾರಿ ಸ್ಥಾನ ಪಡೆಯುವ ಮೂಲಕ ಅಕ್ಷರ್ ಪಟೇಲ್ ತಂಡದಿಂದ ಹೊರಗುಳಿದಿದ್ದಾರೆ.

WTC ಭಾರತ ತಂಡ: ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಕ್ಯಾಪ್ಟನ್), ಅಜಿಂಕ್ಯ ರಹಾನೆ (ಉಪನಾಯಕ), ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೆಜಾ, ಜಸ್ಪ್ರಿತ್ ಬೂಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ವೃದ್ಧಿಮಾನ್ ಸಹಾ

Comments are closed.